ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗೆಲುವು ಗ್ಯಾರಂಟಿ: ಸದಾಶಿವ ಉಳ್ಳಾಲ್ ವಿಶ್ವಾಸ

Date:

Advertisements

ಉಳುವವನೇ ಭೂಮಿಯೊಡೆಯ, ಲೋನ್ ಮೇಳ, ಬ್ಯಾಂಕ್ ರಾಷ್ಟ್ರೀಕರಣ, ಮಂಗಳೂರಿಗೆ ಎನ್‌ಎಂಪಿಟಿ, ವಿಮಾನ ನಿಲ್ದಾಣ ಬಂದಿದ್ದು ಕಾಂಗ್ರೆಸ್ ಅವಧಿಯಲ್ಲಿ. ಆದರೆ ಇವೆಲ್ಲವನ್ನೂ ಮಾರಾಟ ಮಾಡಿರುವ ಮೋದಿಯವರು ಈಗ ರೈಲ್ವೆ ಇಲಾಖೆಯನ್ನೂ ಧನಿಗಳಿಗೆ ಮಾರಾಟ ಮಾಡುವ ಹುನ್ನಾರ ನಡೆಸಿದ್ದಾರೆಂದು ಮುಡಾದ ಅಧ್ಯಕ್ಷ ಸದಾಶಿವ ಉಳ್ಳಾಲ್ ಟೀಕಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, “ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಮೋದಿ ನೀಡಿದ್ದ ಪ್ರಕಾರ ಹತ್ತು ವರ್ಷಗಳಲ್ಲಿ ಇಪ್ಪತ್ತು ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು. ಆದರೆ, ಸರ್ಕಾರಿ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿದ್ದರಿಂದ ಆರು ಕೋಟಿ ಮಂದಿ ನೌಕರರು ಉದ್ಯೋಗ ಕಳೆದುಕೊಂಡಿದ್ದಾರೆ. ಮಂಗಳೂರಿನ ವಿಮಾನ ನಿಲ್ದಾಣ ಅದಾನಿಗೆ ಹೋಗಿದ್ದರಿಂದ ಸ್ಥಳೀಯರು ಕೆಲಸ ಕಳೆದುಕೊಂಡಿದ್ದಾರೆ. ಬಡವರು ಹತ್ತು ರೂಪಾಯಿ ಸಾಲ ಬಾಕಿಯಿಟ್ಟರೆ ಬ್ಯಾಂಕ್‌ನವರು ಮನೆ ಬಾಗಿಲಿಗೆ ಹೋಗುತ್ತಾರೆ. ಆದರೆ ಮೋದಿ ಶ್ರೀಮಂತರ ಸಾಲ ಮನ್ನಾ ಮಾಡಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ತಮ್ಮ ಬೆಳೆಗೆ ಸೂಕ್ತವಾದ ಬೆಲೆ ನೀಡುವಂತೆ ಒತ್ತಾಯಿಸಿ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸಿದರೂ ಮೋದಿ ಸರ್ಕಾರ ಸ್ಪಂದಿಸದ ಕಾರಣ ಸಾವು ಸಂಭವಿಸಿದರೂ ಕ್ರಮ ಕೈಗೊಳ್ಳಲಿಲ್ಲ. ಇ.ಡಿ, ಐಟಿ ಸಂಸ್ಥೆಗಳನ್ನು ದುರುಪಯೋಗಪಡಿಸಿ ಆಡಳಿತ ದುರುಪಯೋಗಪಡಿಸಿದರು. ನೋಟ್ ಬ್ಯಾನ್‌ನಿಂದ 130 ಮಂದಿ ಸತ್ತರೂ ಚಕಾರ ಎತ್ತದ ಮೋದಿ ಸರ್ಕಾರ, ಎಲೆಕ್ಷನ್ ಕಮಿಷನರ್, ಆರ್‌ಬಿಐ ಗವರ್ನರ್‌ ಅವರನ್ನು ರಾತ್ರೋರಾತ್ರಿ ರಾಜಿನಾಮೆ ನೀಡಲು ಕಾರಣ. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂಪಾಯಿ ಹಾಕುವ ಭರವಸೆ ನೀಡಿತ್ತಾದರೂ ಒಬ್ಬರಿಗೂ ಹಣ ಸಿಕ್ಕಿಲ್ಲ” ಎಂದು ಕಿಡಿಕಾರಿದರು.

Advertisements

“2008ರಲ್ಲಿ ಗುರುಪುರದಲ್ಲಿ 100 ಎಕರೆ ಜಮೀನು ಪ್ಲಾಸ್ಟಿಕ್ ಪಾರ್ಕ್‌ಗೆ ಮಂಜೂರಾಗಿದ್ದರೂ ಯಾವುದೇ ಕೆಲಸ ಆಗದ ಕಾರಣ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಭಗವಂತ ಖೂಬಾ ಅವರೇ ಸ್ಥಳಕ್ಕೆ ಭೇಟಿ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೂ ಈ ವಿಚಾರದಲ್ಲಿ ಸಂಸದರು ಚಕಾರ ಎತ್ತಿಲ್ಲ. ಲಾಭದಲ್ಲಿದ್ದ ಕಾರ್ಪೊರೇಷನ್, ಸಿಂಡಿಕೇಟ್, ವಿಜಯಾ ಬ್ಯಾಂಕ್‌ಗಳನ್ನು ನಷ್ಟದಲ್ಲಿದ್ದ ಯೂನಿಯನ್, ಕೆನರಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾಕ್ಕೆ ವಿಲೀನ ಮಾಡಿದರು. ಮತ್ತೆ ಬಿಜೆಪಿ ಆಡಳಿತಕ್ಕೆ ಬಂದರೆ ಪರಿಸ್ಥಿತಿ ಹೇಗಿರಬಹುದೆಂದು ಮತದಾರರು ಯೋಚಿಸಬೇಕು” ಎಂದರು.

“ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ 24 ಗಂಟೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ” ಎಂದರು.

1876 ಬೂತ್‌ಗಳನ್ನು ಸಂಪರ್ಕಿಸಿ ಗ್ಯಾರಂಟಿ ಯೋಜನೆಗಳು ತಪುಪಿವೆಯೇ ಎನ್ನುವ ಬಗ್ಗೆ ಮಾಹಿತಿ ಪಡೆಯಲಾಗಿದ್ದು, ಶೇ.80 ಜನರಿಗೆ ಲಭಿಸಿರುವುದಾಗಿ ಗೊತ್ತಾಗಿದೆ. ಯೋಜನೆಗಳು ಸಿಗದವರ ಪಟ್ಟಿ ಸಿದ್ಧಪಡಿಸಲಾಗಿದೆ. ದೇಶದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದರೆ ನೀಡಿದ ಗ್ಯಾರಂಟಿಗಳು ಜಾರಿಯಾಗುವುದರಲ್ಲಿ ಯಾವುದೇ ಸಂದೇಹ ಬೇಡ. ಆ ನಿಟ್ಟಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಿ ಕಾಂಗ್ರೆಸ್ ಆಡಳಿತಕ್ಕೆ ಬರಲು ಕೈಜೋಡಿಸಿ” ಎಂದು ಸದಾಶಿವ ಉಳ್ಳಾಲ್ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ ಲೋಕಸಭಾ ಕ್ಷೇತ್ರ; 21 ಅಭ್ಯರ್ಥಿಗಳಿಂದ 35 ನಾಮಪತ್ರ ಸಲ್ಲಿಕೆ

ಸುದ್ದಿಗೋಷ್ಟಿಯಲ್ಲಿ ಉಳ್ಳಾಲ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಮುಸ್ತಫಾ ಮಲಾರ್, ಎಐಸಿಸಿ ಅಲ್ಪಸಂಖ್ಯಾತ ವಿಭಾಗ ವೀಕ್ಷಕ ಜಾನ್ ಕೆನಡಿ, ಪ್ರಮುಖರಾದ ನೀರಜ್ ಪಾಲ್, ದುರ್ಗಾ ಪ್ರಸಾದ್, ಆರಿಫ್, ಅಭಿಷೇಕ್ ಉಳ್ಳಾಲ್ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X