ಯೂಟ್ಯೂಬರ್ ಧ್ರುವ್ ರಾಠಿ ವೀಡಿಯೋ ಬಳಸಿಕೊಂಡು ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತ!

Date:

Advertisements

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯ ಪ್ರೊಪಗಂಡಗಳ ವಿರುದ್ಧ ಟೊಂಕಕಟ್ಟಿ ನಿಲ್ಲುವ ಮೂಲಕ ದೇಶಾದ್ಯಂತ ಸುದ್ದಿಯಲ್ಲಿರುವ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿಯವರು ಇತ್ತೀಚೆಗಷ್ಟೇ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದರು.

ಧ್ರುವ್ ರಾಠಿಯವರು ಇತ್ತೀಚೆಗೆ ತಮ್ಮ ಪ್ರಮುಖ ಹಿಂದಿ ಚಾನೆಲ್‌ನಲ್ಲಿ ಬಿಡುಗಡೆಗೊಳಿಸಿದ್ದ ‘DICTATORSHIP Confirmed? ಎಂಬ ವೀಡಿಯೋವೊಂದು ಭಾರೀ ವೈರಲ್ ಆಗಿತ್ತು. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಹಾಗೂ ವಿಪಕ್ಷಗಳ ನಡುವಿನ ಹಲವು ವಿಚಾರಗಳಿಗೆ ಸ್ಪಷ್ಟ ರೂಪವನ್ನು ಈ ವೀಡಿಯೊ ನೀಡಿತ್ತು.

ವಿಡಿಯೋದಲ್ಲಿ ಬಿಜೆಪಿ ಈ ಬಾರಿಯ ಲೋಕಸಭಾ ಚುನಾವಣೆ ಗೆಲ್ಲಲು ವಿಪಕ್ಷಗಳನ್ನು ಹೇಗೆ ಕಟ್ಟಿ ಹಾಕಿದೆ? ಉನ್ನತ ತನಿಖಾ ಸಂಸ್ಥೆಗಳನ್ನು ಹೇಗೆ ದುರ್ಬಳಕೆ ಮಾಡಿದೆ ಎನ್ನುವ ಬಗ್ಗೆ ದಾಖಲೆ ಸಹಿತವಾಗಿ ವಿವರಿಸಿದ್ದರು. ಅಲ್ಲದೇ, ಆ ವೀಡೀಯೋದ ಕೊನೆಯಲ್ಲಿ ದೇಶದ ಪ್ರಜಾಪ್ರಭುತ್ವ ಉಳಿಯಲು ಪ್ರತಿಯೊಬ್ಬ ಪ್ರಜೆಗೆ ನನ್ನ ಸಂದೇಶವನ್ನು ತಲುಪಿಸಿ ಎಂದು ಕರೆ ನೀಡಿದ್ದರು.

Advertisements

ಧ್ರುವ್ ರಾಠಿ ಸಲಹೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಕಾಂಗ್ರೆಸ್‌ನ ಕಾರ್ಯಕರ್ತನೋರ್ವ, ಏಕಾಂಗಿಯಾಗಿ ತನ್ನಿಂದಾದ ಕೆಲಸ ಮಾಡುತ್ತಿದ್ದಾನೆ.

ಉತ್ತರ ಭಾರತದ ಕಾಂಗ್ರೆಸ್ ಕಾರ್ಯಕರ್ತ ಗಗನ್ ಜೋಶಿ ಎಂಬಾತ ಕಳೆದ 15 ದಿನಗಳಿಂದ ವಿವಿಧ ನಗರ ಹಾಗೂ ಹಳ್ಳಿಗಳಿಗೆ ತನ್ನ ಕಾರಿನಲ್ಲಿ ತೆರಳುತ್ತಾ, ಪ್ರೊಜೆಕ್ಟರ್ ಹಾಗೂ ಪಿಪಿಟಿ ಪರದೆ ಬಳಸಿಕೊಂಡು ಧ್ರುವ್ ರಾಠಿಯವರ 24 ನಿಮಿಷದ ವೀಡಿಯೋವನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸುತ್ತಿದ್ದಾರೆ. ಆ ಮೂಲಕ ಪ್ರಜಾಪ್ರಭುತ್ವ ಉಳಿಸಿ, ಇಂಡಿಯಾ ಮೈತ್ರಿಕೂಟಕ್ಕೆ ಮತ ಹಾಕಿ ಎಂದು ಕರೆ ನೀಡುತ್ತಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಧ್ರುವ್ ರಾಠಿಯವರನ್ನು ಟ್ಯಾಗ್ ಮಾಡಿ ಪೋಸ್ಟ್ ಹಾಕಿರುವ ಗಗನ್ ಜೋಶಿ, “ಧ್ರುವ್ ರಾಠಿಯವರೇ, ನಾನು ನಿಮ್ಮ ವೀಡಿಯೊಗಳನ್ನು ಈ ರೀತಿ ಬಳಸಿದ್ದೇನೆ. ಕಾಂಗ್ರೆಸ್‌ಗಾಗಿ ನನ್ನ ಏಕಾಂಗಿ ಪ್ರಚಾರ ಇದು. ಕಳೆದ 15 ದಿನಗಳಿಂದ ಪ್ರೊಜೆಕ್ಟರ್ ಬಳಸಿಕೊಂಡು ಸಾರ್ವಜನಿಕರಿಗೆ ಪ್ರದರ್ಶಿಸುತ್ತಿದ್ದೇನೆ. ವಿಷಯಕ್ಕಿಂತ ಹೇಳಬಯಸುವ ವಿಷಯದ ನಿರೂಪಣೆ ಮುಖ್ಯ. ನಿಮ್ಮ ಕೆಲಸ ಅದ್ಭುತವಾದದ್ದು. ಅದಕ್ಕಾಗಿ ಧನ್ಯವಾದಗಳು.” ಎಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. ಇದನ್ನು ಸ್ವತಃ ಧ್ರುವ್ ರಾಠಿ ಕೂಡ ರೀಟ್ವೀಟ್ ಮಾಡಿಕೊಂಡಿದ್ದಾರೆ. ಆ ಬಳಿಕ ಗಗನ್ ಹಾಕಿರುವ ಪೋಸ್ಟ್‌ ಸಾಕಷ್ಟು ವೈರಲ್ ಆಗಿದೆ.

ಗಗನ್ ಜೋಶಿಯವರ ಈ ಪ್ರಯತ್ನಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಒಳ್ಳೆಯ ಆಲೋಚನೆ ಇದು. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನ ಇಂದು ಅಪಾಯದಲ್ಲಿದೆ. ಲೋಕಸಭಾ ಚುನಾವಣೆ ಮುಗಿಯುವವರೆಗೂ ನಿಮ್ಮ ಈ ಕಾರ್ಯ ಮುಂದುವರಿಸಿಕೊಂಡು ಹೋಗಿ ಎಂದು ಹಾರೈಸಿದ್ದಲ್ಲದೇ, ”ಎಲ್ಲ ಕಡೆ ಈ ರೀತಿಯ ಕೆಲಸಗಳನ್ನು ಮಾಡಬೇಕಾದ ಅನಿವಾರ್ಯತೆ ಇದೆ” ಎಂದು ನೆಟ್ಟಿಗರು ಸಲಹೆ ನೀಡಿದ್ದಾರೆ.

‘DICTATORSHIP’ ವೀಡಿಯೋದಲ್ಲಿ ಯೂಟ್ಯೂಬರ್ ಧ್ರುವ್ ರಾಠಿ, ಕಾಂಗ್ರೆಸ್ ಪಕ್ಷದ ಖಾತೆಗಳನ್ನು ಬ್ಲಾಕ್ ಮಾಡಿರುವುದು, ನರೇಂದಅವರನ್ನು ತಡೆಯಲು ಬಿಜೆಪಿ ಏನೇನು ಮಾಡಿದೆ. ಎಲೆಕ್ಷನ್ ಬಾಂಡ್‌ಗಳು ರಾಜಕೀಯ ನಾಯಕರ ಬಂಧನಕ್ಕೆ ಹೇಗೆ ಕಾರಣವಾಗಿದೆ ಎನ್ನುವುದನ್ನು ಸಾಕಷ್ಟು ಆಧಾರಗಳೊಂದಿಗೆ ತಮ್ಮ ಪ್ರಮುಖ ಹಿಂದಿ ಚಾನೆಲ್‌ನಲ್ಲಿ ವಿವರಿಸಿದ್ದರು.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸದ್ಯ ಜರ್ಮನಿಯಿಂದ ವಾಪಸ್ ಭಾರತಕ್ಕೆ ಆಗಮಿಸಿರುವ ಧ್ರುವ್ ರಾಠಿ, ಬಿಜೆಪಿ ಹರಡುತ್ತಿರುವ ನಿರಂತರ ಸುಳ್ಳುಗಳ ವಿರುದ್ಧ ಬಹಿರಂಗವಾಗಿಯೇ ಸಮರ ಸಾರಿದ್ದಾರೆ.

ಕನ್ನಡ ಸೇರಿ 5 ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದ ಧ್ರುವ್ ರಾಠಿ

‘ಮಿಷನ್ 100 ಕೋಟಿ’ ಎಂಬ ಯೋಜನೆಯನ್ನು ಘೋಷಿಸಿದ್ದ ಧ್ರುವ್ ರಾಠಿ, ಎಐ ತಂತ್ರಜ್ಞಾನ ಬಳಸಿಕೊಂಡು ಇತ್ತೀಚೆಗಷ್ಟೇ ಕನ್ನಡ ಸೇರಿ ಐದು ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದರು.

ಈ ಬಗ್ಗೆ ಏಪ್ರಿಲ್ 18ರಂದು ಟ್ವೀಟ್ ಮಾಡಿದ್ದ ಹರ್ಯಾಣ ಮೂಲದ ರಾಠಿ, “ತಮಿಳು, ತೆಲುಗು, ಬೆಂಗಾಳಿ, ಕನ್ನಡ, ಮರಾಠಿ ಸೇರಿ ಇಂದು 5 ಭಾರತೀಯ ಭಾಷೆಗಳಲ್ಲಿ ನನ್ನ ವಿಡಿಯೋ ಬಿಡುಗಡೆಯಾಗಿದೆ. ಈ ರಾಜ್ಯಗಳ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಪ್ರಮುಖ ವೀಡಿಯೊ ಈಗಾಗಲೇ ಈ ಚಾನಲ್‌ಗಳಲ್ಲಿ ಲೈವ್ ಆಗಿದೆ” ಎಂದು ತಿಳಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X