ಬೆಂಗಳೂರು | ಬಿಜೆಪಿಗೆ ಸೇರಿದ 2 ಕೋಟಿ ಹಣವನ್ನು ವಶಪಡಿಸಿಕೊಂಡ ಚುನಾವಣಾಧಿಕಾರಿಗಳು: ಎಫ್‌ಐಆರ್

Date:

Advertisements

ಬಿಜೆಪಿಗೆ ಸೇರಿದ ಸುಮಾರು ಎರಡು ಕೋಟಿಯಷ್ಟು ನಗದನ್ನು ಕಾರೊಂದರಲ್ಲಿ ಸಾಗಿಸುತ್ತಿದ್ದ ವೇಳೆ ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.

ಬೆಂಗಳೂರು ನಗರದ ಬಿನ್ನಿಮಿಲ್ ಹತ್ತಿರದ ಎ.ಪಿ.ಎಂ.ಸಿ ಬಳಿ ಇರುವ ಸ್ಥಿರ ಕಣ್ಗಾವಲು ಪಡೆಯ ಚೆಕ್ ಪೋಸ್ಟ್‌ನಲ್ಲಿ ಈ ಹಣವನ್ನು ಅಧಿಕಾರಿಗಳು ಏಪ್ರಿಲ್ 20ರಂದು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಕರ್ನಾಟಕ ಚುನಾವಣಾ ಆಯೋಗ ಮಾಹಿತಿ ನೀಡಿದ್ದು, “ಕಾರಿನಲ್ಲಿ ಸಾಗಿಸುತ್ತಿದ್ದ ಸೂಕ್ತ ದಾಖಲೆ ಇಲ್ಲದ 2 ಕೋಟಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ತಿಳಿಸಿದೆ.

ಪ್ರಾಥಮಿಕ ತನಿಖೆಯಲ್ಲಿ ಈ ಹಣವು ರಾಜ್ಯ ಬಿಜೆಪಿ ಪಕ್ಷದ ಕಚೇರಿಗೆ ಸಂಬಂಧಿಸಿದ್ದು ಎಂದು ತಿಳಿದು ಬಂದಿದ್ದು, ಪಕ್ಷದ ಹಣ ಎನ್ನುವ ಹಿನ್ನೆಲೆಯಲ್ಲಿ ಈ ಕುರಿತು ಆದಾಯ ತೆರಿಗೆ ಇಲಾಖೆಯವರು ಆದಾಯ ತೆರಿಗೆ ಕಾಯ್ದೆಯ ಅನ್ವಯ ಸದರಿ ಹಣವನ್ನು ಸ್ವೀಕರಿಸಲು ಬರುವುದಿಲ್ಲ ಎಂದು ಹಿಂಬರಹ ನೀಡಿರುತ್ತಾರೆ ಎಂದು ಆಯೋಗವು ಮಾಹಿತಿ ನೀಡಿದೆ.

Advertisements

ಇದನ್ನು ಓದಿದ್ದೀರಾ? ಸಿದ್ದರಾಮಯ್ಯರಿಂದ ಕನ್ನಡಿಗರು ಬದುಕಿನ ಗ್ಯಾರಂಟಿ ಕಳೆದುಕೊಂಡಿದ್ದಾರೆ: ಬಿ ಎಸ್ ಯಡಿಯೂರಪ್ಪ

ಸೂಕ್ತ ದಾಖಲೆ ಇಲ್ಲದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ವಾಹನ ಚಲಾಯಿಸುತ್ತಿದ್ದ ವೆಂಕಟೇಶ್ ಪ್ರಸಾದ್ ಹಾಗೂ ಸಹ ಪ್ರಯಾಣಿಕ ಗಂಗಾಧರ್ ಎಂಬುವವರ ಮೇಲೆ ಐಪಿಸಿ ಸೆಕ್ಷನ್ 1860 (171E, 171F, 171B, 171C); ಪ್ರಜಾ ಪ್ರತಿನಿಧಿ ಕಾಯ್ದೆಯ 1950, 1951 & 1989 (U/s-123) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡು, ಹಣವನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X