ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರವಾಗಿದೆ, ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ನೀಡಿ ನುಡಿದಂತೆ ನಡೆದಿದ್ದೇವೆ. ಕಾಂಗ್ರೆಸ್ ಹೇಳಿದಂತೆ ಮಾಡುತ್ತದೆ. ಸಿದ್ದರಾಮಯ್ಯ ಅವರು ಜನರಿಗೆ ಉಪಯೋಗವಾಗುವಂತ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಚಿವ ಎಚ್. ಆಂಜನೇಯ ಹೇಳಿದರು.
ಚಿತ್ರದುರ್ಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಕೈ ಬಲಪಡಿಸಲು, ಮತ್ತಷ್ಟು ಅಭಿವೃದ್ಧಿಗೊಳಿಸಲು ಅವರಿಗೆ ಮತ ಹಾಕಬೇಕು. ನಾಳಿನ ಕಾಂಗ್ರೆಸ್‌ನ ಬಹಿರಂಗ ಪ್ರಚಾರಕ್ಕೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಗಾಂಧಿ ಆಗಮಿಸಲಿದ್ದಾರೆ. ಇದಕ್ಕಾಗಿ ಲಕ್ಷಾಂತರ ಜನರು ರಾಜ್ಯದ ಮೂಲೆ ಮೂಲೆಗಳಿಂದ ಬರುತ್ತಿದ್ದಾರೆ. ಪ್ರಿಯಾಂಕ ಗಾಂಧಿ ಅವರ ಜೊತೆ ಸಿಎಂ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ ಎಂದರು.
ಇದೇ ವೇಳೆ ಮಾತನಾಡಿದ, ಸ್ಥಳೀಯ ಶಾಸಕ ವೀರೇಂದ್ರ ಪಪ್ಪಿ, ನಾಳಿನ ಕಾರ್ಯಕ್ರಮಕ್ಕೆ ಪ್ರಿಯಾಂಕ ಗಾಂಧಿ ಅವರು ಆಗಮಿಸುತ್ತಿದ್ದಾರೆ. ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದರು.
ಕಾಂಗ್ರೆಸ್‌ನ ಲಕ್ಕಿ ಸ್ಟಾರ್ ಎಂದು ಕರೆಸಿಕೊಳ್ಳುವ ಪ್ರಿಯಾಂಕ ಗಾಂಧಿ ಅವರು ಬರುತ್ತಿದ್ದು, ಅವರು ವಿಧಾನ ಸಭೆ ಚುನಾವಣೆಯಲ್ಲಿ ತುಮಕೂರು, ಹಿರಿಯೂರು ಕ್ಷೇತ್ರಗಳಿಗೆ ಭೇಟಿ ನೀಡಿದ್ದು, ಅಲ್ಲಿ ಕಾಂಗ್ರೆಸ್ ಗೆದ್ದಿದೆ. ಇದರಿಂದ ನಾಳೆ ಇಲ್ಲಿಗೆ ಬರುತ್ತಿದ್ದಾರೆ. ಸಿದ್ದರಾಮಯ್ಯ ಅವರು ಐದು ಗ್ಯಾರಂಟಿಗಳನ್ನು ಪ್ರಾಮಾಣಿಕವಾಗಿ ನೀಡಿ, ಕೆಲಸ ಮಾಡುತ್ತಿದ್ದಾರೆ. ಇದರಿಂದ ಚಂದ್ರಪ್ಪ, ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಜಿಲ್ಲಾ ಚುನಾವಣಾ ಉಸ್ತುವಾರಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ಹೇಳಿದರು.
ಮಾಜಿ ಸಚಿವ ಎಚ್.ಆಂಜನೇಯ, ಸಚಿವ ಸುಧಾಕರ್, ಸ್ಥಳೀಯ ಶಾಸಕ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವೀರೇಂದ್ರ ಪಪ್ಪಿ, ಇತರರು ಹಾಜರಿದ್ದರು.
