ಪ್ರೇಯಸಿಯ ಮದುವೆ ದಿನವೇ ಯುವಕನೋರ್ವ ಶವವಾಗಿ ಪತ್ತೆಯಾಗಿರುವ ಧಾರುಣ ಘಟನೆ ಬೀದರ್ ಹೊರವಲಯದ ನೌಬಾದ್ ಸಮೀಪದ ರೈಲ್ವೆ ಹಳಿ ಹತ್ತಿರ ನಡೆದಿದೆ.
ಬೀದರ್ ತಾಲೂಕಿನ ನಿಜಾಂಪುರ ಗ್ರಾಮದ ವೆಂಕಟೇಶ ಕುಮಾರ್ (22) ಮೃತ ಯುವಕ ಎಂದು ಗುರುತಿಸಲಾಗಿದೆ.
ನೌಬಾದ್ ಹೈವೇ ಬ್ರಿಡ್ಜ್ ಬಳಿಯ ರೈಲ್ವೆ ಹಳಿ ಮೇಲೆ ವೆಂಕಟೇಶ ಕುಮಾರ್ ತುಂಡರಿಸಿದ್ದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತ ಯುವಕ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಕಳೆದ 3 ವರ್ಷಗಳಿಂದ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ, ಯುವತಿ ಮದುವೆ ದಿನವೇ ವೆಂಕಟೇಶ್ ಕುಮಾರ್ ಶವವಾಗಿ ಪತ್ತೆಯಾಗಿದ್ದಾನೆ.
ರೈಲ್ವೆ ಹಳಿ ಮೇಲೆ ತುಂಡು ತುಂಡಾಗಿ ಬಿದ್ದ ಯುವಕ ಶವದಿಂದ 1ಕಿ.ಮೀ. ದೂರದಲ್ಲಿ ವೆಂಕಟೇಶ್ ಬೈಕ್ ಕೂಡ ಪತ್ತೆಯಾಗಿದೆ. ಇದು ಆತ್ಮಹತ್ಯೆಯಲ್ಲ, ಇದು ಕೊಲೆ ಎಂದು ಮೃತ ಯುವಕನ ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ. ಯುವಕನ ಸಾವು ಕೊಲೆಯೋ? ಆತ್ಮಹತ್ಯೆಯೋ ಎಂಬುದು ನಿಖರವಾಗಿ ತಿಳಿದು ಬಂದಿಲ್ಲ.
ಯುವತಿಯ ಕುಟುಂಬಸ್ಥರೇ ಕೊಲೆ ಮಾಡಿದ್ದಾರೆಂದು ಮೃತ ಯುವಕನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಘಟನಾ ಸ್ಥಳದಲ್ಲಿ ವೆಂಕಟೇಶ್ ಸಂಬಂಧಿಕರು ಆಕ್ರಂದನ ಮುಗಿಲು ಮುಟ್ಟಿದೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಎದೆಯ ಮೇಲೆ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ
ಬೀದರ್ ನಗರದ ನ್ಯೂಟೌನ್ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.