ಬಿಜೆಪಿಯಲ್ಲಿ ಬಂಡಾಯ ಎದ್ದು ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಈಶ್ವರಪ್ಪ ಅವರನ್ನು ಬಿಜೆಪಿ ಉಚ್ಚಾಟನೆ ಮಾಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಈಶ್ವರಪ್ಪ, “ಯಾವ ಉಚ್ಛಾಟನೆಗೂ ಹೆದರಲ್ಲ. ಚುನಾವಣೆಯಲ್ಲಿ ಗೆದ್ದು, ಮತ್ತೆ ಬಿಜೆಪಿ ಸೇರುತ್ತೇನೆ” ಎಂದಿದ್ದಾರೆ.
ಈಶ್ವರಪ್ಪ ಅವರನ್ನು ಬಿಜೆಪಿ ಆರು ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಿದೆ.
ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ, “ಯಡಿಯೂರಪ್ಪ ಮತ್ತು ಅವರ ಮಕ್ಕಳು ಆರಂಭದಿಂದಲೂ ಸುಳ್ಳು ಹೇಳುತ್ತಾ ಬಂದಿದ್ದಾರೆ. ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದ್ದಾರೆ. ನಾನು ಐದು ಬಾರಿ ಬಿಜೆಪಿ ಚಿಹ್ನೆಯಿಂದ ಸ್ಪರ್ಧಿಸಿದ್ದೇನೆ. ಈಗ ರೈತನ ಚಿಹ್ನೆ ಬಂದಿರುವುದು ಸಂತೋಷ ತಂದಿದೆ” ಎಂದಿದ್ದಾರೆ.
ಶಿವಮೊಗ್ಗದಲ್ಲಿ ನನಗೆ ಭಾರೀ ಬೆಂಬಲವಿದೆ. ಕ್ಷೇತ್ರದಲ್ಲಿ ಬಿಜೆಪಿಯಲ್ಲಿರುವ 60% ಮಂದಿ ನನ್ನನ್ನು ಬೆಂಬಲಿಸುತ್ತಾರೆ ಎಂದಿದ್ದಾರೆ.