ಲೋಕಸಭಾ ಚುನಾವಣೆಗೆ ವಿಜಯಪುರ ಕ್ಷೇತ್ರದಿಂದ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ಅವಧಿ ಸೋಮವಾರ ಮುಕ್ತಾಯವಾಗಿದ್ದು, ಒಟ್ಟಾರೆ ನಾಲ್ಕು ಮಂದಿ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ ತೆಗೆದುಕೊಳ್ಳುವ ಮೂಲಕ ಅಂತಿಮವಾಗಿ ಎಂಟು ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಪಕ್ಷೇತರ ಅಭ್ಯರ್ಥಿಗಳಾದ ಸಂಗಪ್ಪಾ ಹುಣಶಿಕಟ್ಟಿ, ಹಾಗೂ ಬಾಬುರಾಜೇಂದ್ರ ನಾಯಿಕ, ಭಾರತೀಯ ಜವಾನ್ ಕಿಸಾನ್ ಪಕ್ಷದ ಕುಲಪ್ಪಾ ಬಿ ಚವ್ಹಾಣ, ಬಿಎಸ್‌ಪಿ ಪಕ್ಷದ ಮಲ್ಲು ಹಾದಿಮನಿ ತಮ್ಮ ಉಮೇದುವಾರಿಕೆಯನ್ನು ಏ.೨೨ ರಂದು ಹಿಂಪಡೆದಿದ್ದಾರೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸ್ಲಂ ಜನರ ಮತ ಜಾಗೃತಿ ಸಮಾವೇಶ; ಸ್ಲಂ ಜನರ ಪ್ರಣಾಳಿಕೆ-2024 ಬಿಡುಗಡೆ
ಭಾರತೀಯ ಜನತಾ ಪಕ್ಷದ ರಮೇಶ ಜಿಗಜಿಣಗಿ, ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ, ಕಾರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಗಣಪತಿ ಲಾಲಸಿಂಗ ರಾಠೋಡ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಎ) ಪಕ್ಷದ ಜಿತೇಂದ್ರ ಅಶೋಕ ಕಾಂಬ್ಲೆ, ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯೂನಿಸ್ಟ್) ಪಕ್ಷದ ನಾಗಜ್ಯೋತಿ ಬಿ ಎನ್, ರಾಷ್ಟ್ರೀಯ ಸಮಾಜ ಪಕ್ಷದ ರಾಜ್‌ಕುಮಾರ್ ಅಪ್ಪಣ್ಣ ಹೊನ್ನಕಟ್ಟಿ, ನಕಿ ಭಾರತೀಯ ಏಕತಾ ಪಕ್ಷದ ರಾಮಜಿ ಹರಿಜನ್, ಪಕೇತರ ಅಭ್ಯರ್ಥಿ ತಾರಾಬಾಯಿ ಬೋವಿ ಅಂತಿಮ ಕಣದಲ್ಲಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
