ಲೋಕಸಭಾ ಚುನಾವಣೆ | ಪತ್ರಿಕಾ ಛಾಯಾಗ್ರಾಹಕರಿಗಾಗಿ ರಾಜ್ಯಮಟ್ಟದ ಫೋಟೋಗ್ರಫಿ ಸ್ಪರ್ಧೆ

Date:

Advertisements

ಸಾರ್ವತ್ರಿಕ ಲೋಕಸಭಾ ಚುನಾವಣೆ – 2024ರ ಮತದಾನ ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ನಡೆಯಲಿದ್ದು, ಜಗತ್ತಿನ ಅತಿದೊಡ್ಡ ಪ್ರಜಾಪಭುತ್ವ ದೇಶವಾಗಿರುವ ಭಾರತದಲ್ಲಿ ಚುನಾವಣೆಯನ್ನು ‘ಪ್ರಜಾಪ್ರಭುತ್ವದ ಹಬ್ಬ’ದಂತೆ ಆಚರಿಸಲಾಗುತ್ತಿದೆ.

ಕಳೆದ ಲೋಕಸಭಾ ಚುನಾವಣೆ – 2019 ಹಾಗೂ ಸಾರ್ವತ್ರಿಕ ಕರ್ನಾಟಕ ವಿಧಾನಸಭೆ ಚುನಾವಣೆ-2023 ರ ಸಂದರ್ಭದಲ್ಲಿ ಹಮ್ಮಿಕೊಳ್ಳಲಾದ ಮಾದರಿಯಲ್ಲಿ ಈ ಬಾರಿಯು ಸಹ ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಅಂಗವಾಗಿ ಮಾಧ್ಯಮಗಳಲ್ಲಿ ಕಾರ್ಯ ನಿರ್ವರ್ಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಾಹಕರಿಗಾಗಿ ಮತದಾನದ ವಿಷಯದ ಬಗ್ಗೆ ರಾಜ್ಯಮಟ್ಟದ ಛಾಯಾ ಚಿತ್ರಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.

ಕಳೆದ ಎರಡು ಸಾರ್ವತ್ರಿಕ ಚುನಾವಣೆಗಳ ಸಂದರ್ಭದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯ ಮೂಲಕ ಚುನಾವಣಾ ಸಂಬಂಧಿತ ಅತ್ಯುತ್ತಮ ಹಾಗೂ ಸಂಗ್ರಹಯೋಗ್ಯ ಛಾಯಾಚಿತ್ರಗಳನ್ನು ಭಾರತ ಚುನಾವಣಾ ಆಯೋಗ ಪ್ರಶಂಸಿಸುವುದರ ಜೊತೆಗೆ, ತನ್ನ ವರದಿ ಹಾಗೂ ಪುಸ್ತಕಗಳ ಮುಖಪುಟಗಳಲ್ಲಿ ಬಳಸಿಕೊಂಡಿದೆ.

Advertisements

ಈ ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ರ ನಿಮಿತ್ತ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಿ, ಅತ್ಯುತ್ತಮ ಛಾಯಾಚಿತ್ರ ತೆಗೆದ ಛಾಯಾಗ್ರಾಹಕರಿಗೆ ಪ್ರಮಾಣ ಪತ್ರ ಹಾಗೂ ನಗದು ಬಹುಮಾನವನ್ನು ನೀಡಲಾಗುತ್ತಿದೆ.

ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ಪತ್ರಿಕಾ ಛಾಯಾಗ್ರಾಹಕರು, ಹವ್ಯಾಸಿ ಛಾಯಾಗ್ರಾಹಕರು ತಾವು ತೆಗೆದ ಗರಿಷ್ಠ 5 ಅತ್ಯುತ್ತಮ ಛಾಯಾಚಿತ್ರಗಳನ್ನು ಸೂಕ್ತ ಶೀರ್ಷಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೀಡಿರುವ ಅಕ್ರಿಡಿಟೇಷನ್ ಕಾರ್ಡ್ ಅಥವಾ ತಮ್ಮ ಮಾಧ್ಯಮ ಕಚೇರಿ ನೀಡಿರುವ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್, ಮನೆವಿಳಾಸ, ಮೊಬೈಲ್ ಸಂಖ್ಯೆ ಸೇರಿದಂತೆ ಮತ್ತಿತರ ವಿವರಗಳನ್ನು ಇ-ಮೇಲ್ ಐಡಿ : mediacellceokarnataka@gmail.com ಸಲ್ಲಿಸುವಂತೆ ಚುನಾವಣಾ ಆಯೋಗ ತಿಳಿಸಿದೆ.

ಫೋಟೋಗಳನ್ನು ಮೇ 15, 2024ರ ಬುಧವಾರ ಸಂಜೆ 5 ಗಂಟೆಯೊಳಗೆ ಇ-ಮೇಲ್ ಮೂಲಕ ಸಲ್ಲಿಸಲು ಆಯೋಗ ತಿಳಿಸಿದೆ.

ಬಹುಮಾನಗಳ ವಿವರ ಹೀಗಿದೆ:

  1. ಪ್ರಥಮ ಬಹುಮಾನ: ₹25,000
  2. ದ್ವಿತೀಯ ಬಹುಮಾನ: ₹15,000
  3. ತೃತೀಯ ಬಹುಮಾನ: ₹10,000
  4. ಸಮಾಧಾನಕರ ಬಹುಮಾನ: ₹6,000
  5. ವಿಶೇಷ ಬಹುಮಾನ : ₹5,000/-
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X