ಕೆರೆಯಲ್ಲಿ ಈಜಾಡಲು ತೆರಳಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
ಸುರಪುರ ತಾಲೂಕಿನ ನಗನೂರು ಗ್ರಾಮದ ಹೈಯಾಳಪ್ಪ (11) ಶರಣಬಸವ (10) ಹಾಗೂ ಅನಿಲ್ (10) ಮೃತ ಮೂವರು ಬಾಲಕರು ಎಂದು ತಿಳಿದು ಬಂದಿದೆ.
ಗ್ರಾಮದ ಕೆರೆಯಲ್ಲಿ ಈಜಾಡಲು ತೆರಳಿದ್ದ ಬಾಲಕರು ಕೆಸರಿನಲ್ಲಿ ಸಿಲುಕಿ ಹೊರಬರಲಾಗದೆ ಮೃತಪಟ್ಟಿದ್ದಾರೆ. ಮಾಹಿತಿ ತಿಳಿದ ಗ್ರಾಮಸ್ಥರು ಮೃತ ಬಾಲಕರ ಶವ ಹೊರತೆಗೆದಿದ್ದಾರೆ. ಘಟನಾ ಸ್ಥಳದಲ್ಲಿ ಮೃತ ಬಾಲಕರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಯಾದಗಿರಿ ಎಸ್ಪಿ ಸಂಗೀತಾ.ಜಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಬಾಲಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಶಹಾಪುರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಬೀದರ್ ಲೋಕಸಭಾ | ಮುಗಿದ ನಾಮಪತ್ರ ಭರಾಟೆ, ಶುರುವಾಗಿ ಮತಬೇಟೆ
ಈ ಕುರಿತು ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.