ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಿಂಗಸಂದ್ರದ ಮಣಿಪಾಲ್ ಕಂಟ್ರಿ ರೋಡ್ನಲ್ಲಿರುವ ಟಿಂಬರ್ ಯಾರ್ಡ್ನಲ್ಲಿ ಏ.23ರಂದು ಮಧ್ಯರಾತ್ರಿ 12.30ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ.
ಮೊದಲಿಗೆ ಮರದ ಪೀಸ್‌ಗಳನ್ನು ಇಟ್ಟಿದ್ದ ಟಿಂಬರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ, ಲೋವಬಲ್ ಸ್ಪೋರ್ಟ್ ಹೆಸರಿನ ಗಾರ್ಮೆಂಟ್ಸ್ ಕಟ್ಟಡ, ವಾಹನ ವಾಶ್ ಕೇಂದ್ರಕ್ಕೂ ಹಬ್ಬಿದೆ. ಜತೆಗೆ, ಬಲಭಾಗದಲ್ಲಿದ್ದ ಗ್ಯಾರೇಜ್‌ಗೂ ಬೆಂಕಿ ಹಬ್ಬಿದೆ.
ಬೆಂಕಿ ಅವಘಡದಿಂದ ಕಾರ್ ವಾಶ್ ಸರ್ವಿಸ್‌ನಲ್ಲಿದ್ದ 2 ಕಾರುಗಳು, ಗ್ಯಾರೇಜ್‌ನಲ್ಲಿದ್ದ 1 ಬಿಎಮ್‌ಡಬ್ಲೂ ಕಾರು, 1 ಟಾಟಾ ಏಸ್ ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಬೈಕ್‌ಗಳು ಬೆಂಕಿಗಾಹುತಿಯಾಗಿವೆ. ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಬೆಂಕಿ ತಗುಲಿದ ಪರಿಣಾಮ ₹5 ಕೋಟಿಗೂ ಹೆಚ್ಚು ಮೌಲ್ಯದ ಬಟ್ಟೆ ನಾಶವಾಗಿದೆ. ಅದೃಷ್ಟವಶಾತ್ ಅಗ್ನಿ ಅವಘಡದಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ.
ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ಬಿಜೆಪಿ ಭದ್ರಕೋಟೆ ಬೆಂ. ದಕ್ಷಿಣದ ಮತದಾರರು ಹೇಳುತ್ತಿರೋದೇನು?
ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ 5ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸಿವೆ.