ಯಾದಗಿರಿ | ಅಂಗಡಿ, ಸಂತೆ ಪ್ರದೇಶದಲ್ಲಿ ಎಸ್‌ಯುಸಿಐ ಚುನಾವಣಾ ಪ್ರಚಾರ

Date:

Advertisements

ಯಾದಗಿರಿಯಲ್ಲಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷ ಚುನಾವಣಾ ಪ್ರಚಾರದ ಅಂಗವಾಗಿ ಇಂದು ನಗರದ ಹಳೆ ಬಸ್ ನಿಲ್ದಾಣದ ಸುತ್ತ ಮುತ್ತ ಅಂಗಡಿಗಳಲ್ಲಿ, ಸಂತೆಯಲ್ಲಿರುವ ಜನರ ನಡುವೆ ಚುನಾವಣಾ ಪ್ರಚಾರ ಕೈಗೊಂಡಿತು.

ಜನವಿರೋಧಿಯಾದ ಬಿಜೆಪಿ, ಕಾಂಗ್ರೆಸ್ ಪಕ್ಷಗಳನ್ನು ಸೋಲಿಸಿ ಹೋರಾಟದ ಎಸ್‌ಯುಸಿ ಐ (ಕಮ್ಯುನಿಸ್ಟ್)  ಪಕ್ಷದ ಅಭ್ಯರ್ಥಿ ರಾಮಲಿಂಗಪ್ಪ ಅವರನ್ನು ಗೆಲ್ಲಿಸುವಂತೆ ಪ್ರಜ್ಞಾವಂತ ಮತದಾರರಲ್ಲಿ ಕಾರ್ಯಕರ್ತರು ಮನವಿ ಮಾಡಿದರು.

ನಮ್ಮ ಬದುಕಿನ ಆಗು-ಹೋಗುಗಳಿಗೆ, ಬೆಲೆ ಏರಿಕೆ, ನಿರುದ್ಯೋಗ, ಬಡತನ, ವೇಶ್ಯಾವಾಟಿಕೆ, ರೈತರ ಆತ್ಮಹತ್ಯೆ ಮುಂತಾದ ಸಮಸ್ಯೆಗಳಿಗೆ ಕಾರಣವಾಗಿರುವ ಈ ರಾಜಕೀಯ ವ್ಯವಸ್ಥೆಯನ್ನು ಸೋಲಿಸಿ. ಜನಪರ ವ್ಯವಸ್ಥೆಯ ಜಾರಿಗಾಗಿ ಹೋರಾಟದ ಅಭ್ಯರ್ಥಿಯನ್ನು ಚುನಾಯಿಸಿವಂತೆ ಜನರಲ್ಲಿ ಮನವಿ ಮಾಡಿದರು.

Advertisements

ಈ ಸಂದರ್ಭದಲ್ಲಿ ಪಕ್ಷದ ಸದಸ್ಯರಾದ ಕೆ. ಸೋಮಶೇಖರ್, ಡಿ.ಉಮಾದೇವಿ, ಚನ್ನಬಸವ ಜಾನೇಕಲ್, ಚಾಂದ್ ಪಾಶಾ, ಶಿಲ್ಪಾ ಬಿ.ಕೆ, ಸುಭಾಷ್ಚಂದ್ರ  ಬಿ.ಕೆ, ಪೀರಸಾಬ್, ಹೇಮಂತ್ ಹಾಗೂ ಮುಂತಾದವರು ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X