ಶಿವಮೊಗ್ಗ | ಕ್ಷೇತ್ರದ ರಕ್ಷಣೆಗೆ, ಅಭಿವೃದ್ಧಿಗೆ ಆದ್ಯತೆ: ಗೀತಾ ಶಿವರಾಜ್‌ಕುಮಾರ್

Date:

Advertisements

ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕಾರವು ರಾಜಕಾರಣಿಗಳ ಬಳಿಯಿದೆ. ಸಮಸ್ಯೆಗಳು ಸಾಕಷ್ಟಿವೆ. ಆದರೂ, ಕೆಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಸಾಧ್ಯವಾಗಿಲ್ಲ. ಮುಂದಿನ ದಿನದಲ್ಲಿ ಕ್ಷೇತ್ರದ ರಕ್ಷಣೆ ನನ್ನದು ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ, ಬ್ಯಾಕೋಡು, ಎಸ್.ಎಸ್.ಭೋಗ್, ಹೆರಬೆಟ್ಟು, ಅರಳಗೋಡು, ಭಾನುಕುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗೀತಾ ಮತ್ತು ನಟ ಶಿವರಾಜ್‌ಕುಮಾರ್ ಪ್ರಚಾರ ಸಭೆ ನಡೆಸಿದ್ದಾರೆ. ಸಭೆಗಳಲ್ಲಿ ಗೀತಾ ಮಾತನಾಡಿದರು.

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತವಿದೆ. ಕೇಂದ್ರದಲ್ಲಿಯೂ ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿದರೆ, ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು” ಎಂದು ಗೀತಾ ಶಿವರಾಜಕುಮಾರ್ ಹೇಳಿದರು.

Advertisements

“ಮಲೆನಾಡಿನ ಜನರ ಒಡಲ ಸಂಕಟವನ್ನು ಹತ್ತಿರದಿಂದ ಆಲಿಸುವ ಅವಕಾಶ ನನಗೆ ದೊರಕಿದೆ. ಇಲ್ಲಿನ ಸಮಸ್ಯೆಗಳ ಅಂತರಾಳ ಕೂಡ ಅರಿವಿಗೆ ಬಂದಿವೆ. ಇಲ್ಲಿ, ಕುಡಿಯುವ ನೀರು, ಬಗರ್ ಹುಕುಂ ಸಮಸ್ಯೆ, ಭೂ-ಹಕ್ಕು, ರಸ್ತೆ, ಸಾರಿಗೆ ಹೀಗೆ ಹತ್ತು ಹಲವು ಸಮಸ್ಯೆಗಳ ಬಗ್ಗೆ ಜನರು ಅಳಲು ತೋಡಿಕೊಂಡಿದ್ದಾರೆ. ಆದ್ದರಿಂದ, ಇಲ್ಲಿ ಜನರ ನಾಡಿ ಮಿಡಿತಕ್ಕೆ ಹತ್ತಿರವಾಗಿ ಮೂಲ ಸೌಕರ್ಯಗಳನ್ನು ಒದಗಿಸಲು ಶ್ರಮಿಸುತ್ತೇನೆ” ಎಂದರು.

“ಕಳೆದ 15 ವರ್ಷದ ಆಡಳಿತದ ಅವಧಿಯಲ್ಲಿ ಕ್ಷೇತ್ರದ ಸ್ಥಿತಿ ಗತಿಯನ್ನೇ ಉನ್ನತ ಸ್ಥಾನಕ್ಕೆ ಏರಿಸಬಹುದಾಗಿತ್ತು. ಕೇಂದ್ರದ ಹಂತದಲ್ಲಿ ಅನೇಕ ಸಮಸ್ಯೆಗಳಿಗೆ ಇಲ್ಲಿ ಪರಿಹಾರ ಕಂಡುಕೊಳ್ಳಬಹುದಾಗುತ್ತು. ಆದರೂ, ಅದು ಸಾಧ್ಯವಾಗದಿರುವುದು ಆಶ್ಚರ್ಯ ಮೂಡಿಸುತ್ತದೆ” ಎಂದರು.

ಶಾಸಕ ಬೇಳೂರು ಗೋಪಾಲಕೃಷ್ಣ ಮಾತ‌ನಾಡಿ, “ಕ್ಷೇತ್ರದಲ್ಲಿ ರೈತರ ಕೃಷಿ ಚಟುವಟಿಕೆ ಸೇರಿದಂತೆ, ಕುಡಿಯುವ ನೀರಿನ ಸಮಸ್ಯೆ ವ್ಯತಿರಿಕ್ತ ಹಂತ ತಲುಪಿದೆ. ಮುಂದಿನ ದಿನದಲ್ಲಿ ಶರಾವತಿ ನದಿ ನೀರು ಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು‌” ಎಂದು ಹೇಳಿದರು.

“ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿಯವರು ಟೀಕಿಸುತ್ತಿದ್ದಾರೆ. ಇಲ್ಲಿ, ಬಿಪಿಪಿಯವರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ. ಅದಕ್ಕೆ ಉತ್ತರವಾಗಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ ಹರಸಬೇಕು” ಎಂದರು.

“ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಗೀತಾಗೆ ಕ್ಷೇತ್ರದ ಜನರು ಅವಕಾಶ ಕಲ್ಪಿಸಿಕೊಡಬೇಕು. ಮಲೆನಾಡಿನ ಸಂಮೃದ್ಧ ಹಸಿರು, ಗೀತಾಗೆ ಉಸಿರಾಗಬೇಕು. ಇದಕ್ಕೆ ಕ್ಷೇತ್ರದ ಮತದಾರರು ಆಶೀರ್ವದಿಸಬೇಕು. ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಹಾದಿಯಲ್ಲಿ ಸಾಗಲು ಗೀತಾಗೆ ಮುಕ್ತ ಅವಕಾಶ ಕಲ್ಪಿಸಿಕೊಡಬೇಕು” ಎಂದು ನಟ ಶಿವರಾಜ್‌ಕುಮಾರ್ ಮನವಿ ಮಾಡಿದರು.

ತುಮರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಟಿ.ಸತ್ಯನಾರಾಯಣ, ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಅಶೋಕ್ ಬೇಳೂರು, ಪ್ರಭಾವಾತಿ ಚಂದ್ರಕಾಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಓಂಕಾರ ಮುರಕ್ಕಿ, ಶ್ರೀದೇವಿ ರಾಮಚಂದ್ರ, ಪ್ರೇಮಾ ಸಂತೋಷ್, ರಘುಪತಿ ಹೋನಗೋಡು, ಸಂತೋಷ ಶೆಟ್ಟಿ, ಸುಧಾಕರ ಮಾವಿನಕೈ, ಆನಂದ ಬಾಳ, ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X