ರೈತ ಮುಖಂಡರ ಮೇಲೆ ಬಿಜೆಪಿಗರಿಂದ ದಾಳಿ; ಅಭಿಯಾನ ತೀವ್ರಗೊಳಿಸಲು ಮುಂದಾದ ರೈತರು

Date:

Advertisements

ರೈತ ವಿರೋಧಿ ಪಕ್ಷಗಳನ್ನು ಸೋಲಿಸಿ ಎಂದು ಚಾಮರಾಜನಗರದಲ್ಲಿ ಪ್ರಚಾರ ಜಾಥಾ ನಡೆಸುತ್ತಿದ್ದ ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಪ್ರಚಾರ ನಡೆಸದಂತೆ ಬೆದರಿಕೆ ಹಾಕಿದ್ದಾರೆ. ಹಲ್ಲೆಯಿಂದಾಗಿ ಸಿಡಿದೆದ್ದಿರುವ ರೈತ ಸಂಘದ ಮುಖಂಡರು ತಮ್ಮ ಅಭಿಯಾನವನ್ನು ಮತ್ತಷ್ಟು ತೀವ್ರಗೊಳಿಸಲು ಮುಂದಾಗಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘವು ಏಪ್ರಿಲ್ 17ರಿಂದ ‘ಬಿಜೆಪಿ ಮತ್ತು ಮೈತ್ರಿ ಪಕ್ಷಗಳನ್ನು ಸೋಲಿಸಿ – ರೈತ ಸಮುದಾಯವನ್ನು ಉಳಿಸಿ’ ಅಭಿಯಾನ ನಡೆಸುತ್ತಿದೆ. ಅಭಿಯಾನದ ಭಾಗವಾಗಿ ಬುಧವಾರ ಚಾಮರಾಜನಗರದ ಬೀದಿಗಳಲ್ಲಿ ಪ್ರಚಾರ ಜಾಥಾ ನಡೆದಿದೆ. ಈ ವೇಳೆ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಮಹೇಶ್‌ ಪ್ರಭು ಹಾಗೂ ಕೆಲವು ಮುಖಂಡರ ಮೇಲೆ ಬಿಜೆಪಿಗರು ಹಲ್ಲೆ ನಡೆಸಿದ್ದಾರೆ.

ಹಲ್ಲೆ ನಡೆಸಿದ ಬಿಜೆಪಿ ವಿರುದ್ಧ ರೈತ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ವಿರುದ್ಧ ತನ್ನ ಅಭಿಯಾನವನ್ನು ತೀವ್ರಗೊಳಿಸಲು ಮುಂದಾಗಿದೆ. “ನಮ್ಮ ಅಭಿಯಾನವನ್ನು ನಾವು ಮತ್ತಷ್ಟು ಬಿರುಸುಗೊಳಿಸುತ್ತೇವೆ. ಈ ಬಾರಿ ರೈತರೆಲ್ಲರೂ ಕೂಡಿ ಈ ದ್ರೋಹಿ ಪಕ್ಷಗಳಿಗೆ ಓಟಿನ ಏಟು ನೀಡುತ್ತೇವೆ. ಎರಡನೇ ಸುತ್ತಿನ ಮತದಾನ ನಡೆಯಲಿರುವ ಉತ್ತರ ಭಾಗದ ಕ್ಷೇತ್ರಗಳಲ್ಲೂ ಅಭಿಯಾನವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರೆಸುತ್ತೇವೆ. ರೈತಕುಲದ ಈ ಹೋರಾಟಕ್ಕೆ ತಮ್ಮೆಲ್ಲರ ಸಹಕಾರವಿರಲಿ ಎಂದು ಮನವಿ ಮಾಡಿಕೊಳ್ಳುತ್ತೇವೆ. ಈ ದಾಳಿಯನ್ನು ತಾವು ತೀವ್ರ ರೀತಿಯಲ್ಲಿ ಖಂಡಿಸಬೇಕೆಂದು ಮತ್ತೊಮ್ಮೆ ನೆನಪಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

Advertisements

“ರೈತರ ಸಾಲ ಮನ್ನಾ ಮಾಡದ, ರೈತರ ಬೆಳೆಗೆ ಎಂಎಸ್‌ಪಿ ನೀಡದ, ಬರದಿಂದ ರೈತರು ಕಂಗೆಟ್ಟಿದ್ದರೂ ಬಿಡಿಗಾಸ ಪರಿಹಾರ ನೀಡದ ಕೇಂದ್ರದ ಬಿಜೆಪಿ ಮತ್ತು ಮೈತ್ರಿ ಪಕ್ಷಗಳಿಗೆ ಮತ ನೀಡುವುದಿಲ್ಲ” ಎಂಬ ಪ್ರತಿಜ್ಞೆ ಸ್ವೀಕರಿಸುತ್ತಿದ್ದಾರೆ. ರೈತರ ಈ ಅಭಿಯಾನ ರೈತವಿರೋಧಿ, ಕಾರ್ಪೋರೇಟ್ ಸಾಕು ನಾಯಿಯಾಗಿರುವ ಬಿಜೆಪಿಎ ನುಂಗಲಾರದ ತುತ್ತಾಗಿ ಪರಿಣಮಿಸಿದೆ” ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತಸಂಘದ ಗೌರವಾಧ್ಯಕ್ಷ ಚಾಮರಸ ಮಾಲೀ ಪಾಟೀಲ್, ಕಾರ್ಯಾಧ್ಯಕ್ಷ ವೀರಸಂಗಯ್ಯ ಅವರು ಈ ಬಗ್ಗೆ ಪ್ರಕಟಣೆಯಲ್ಲಿ ತಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Download Eedina App Android / iOS

X