ಪಂಜಾಬ್‌| ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಲೋಕಸಭೆ ಚುನಾವಣೆಗೆ ಸ್ಪರ್ಧೆ

Date:

Advertisements

ಪ್ರಸ್ತುತ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಅಸ್ಸಾಂನ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್, ಪಂಜಾಬ್‌ನ ಖದೂರ್ ಸಾಹಿಬ್ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಅಮೃತಪಾಲ್ ವಕೀಲರು ತಿಳಿಸಿದ್ದಾರೆ.

ಆದರೆ ಅಮೃತಪಾಲ್ ಸಿಂಗ್ ತಂದೆ ತಾರ್ಸೆಮ್ ಸಿಂಗ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಗುರುವಾರ ತಮ್ಮ ಮಗನನ್ನು ಭೇಟಿಯಾದ ನಂತರವೇ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸುವುದಾಗಿ ಹೇಳಿದ್ದಾರೆ. ಜೊತೆಗೆ ಅಮೃತಪಾಲ್ ಸಿಂಗ್ ಈ ಹಿಂದೆ ರಾಜಕೀಯಕ್ಕೆ ಸೇರಲು ಯಾವುದೇ ಆಸಕ್ತಿಯನ್ನು ತೋರಿಸಿಲ್ಲ ಎಂದೂ ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಕೇಂದ್ರ, ರಾಜ್ಯ ಸರ್ಕಾರದೊಂದಿಗೆ ಶಾಂತಿ ಒಪ್ಪಂದಕ್ಕೆ ಅಸ್ಸಾಂ ಪ್ರತ್ಯೇಕತಾವಾದಿ ಗುಂಪು ಉಲ್ಫಾ ಸಹಿ

Advertisements

ಅಮೃತಪಾಲ್ ಸಿಂಗ್ ವಕೀಲ ರಾಜ್‌ದೇವ್ ಸಿಂಗ್ ಖಾಲ್ಸಾ ಅವರು ಬುಧವಾರ ದಿಬ್ರುಗಢ ಜೈಲಿನಲ್ಲಿ ಅಮೃತಪಾಲ್‌ರನ್ನು ಭೇಟಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಿದ್ದಾರೆ ಎಂದಿದ್ದಾರೆ.

“ನಾನು ದಿಬ್ರುಗಢ್ ಕೇಂದ್ರ ಕಾರಾಗೃಹದಲ್ಲಿ ಭಾಯಿ ಸಾಹಬ್ (ಅಮೃತಪಾಲ್ ಸಿಂಗ್) ಅವರನ್ನು ಭೇಟಿ ಮಾಡಿದ್ದೇನೆ. ಭೇಟಿ ವೇಳೆ ಖಾಲ್ಸಾ ಪಂಥ್‌ನ ಹಿತಾಸಕ್ತಿಯಿಂದ ಅವರು ಈ ಬಾರಿ ಖಾದೂರ್ ಸಾಹಿಬ್‌ನಿಂದ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ನಾನು ಅವರಿಗೆ ವಿನಂತಿಸಿದೆ. ಅವರು ನನ್ನ ಮನವಿಯನ್ನು ಸ್ವೀಕರಿಸಿದ್ದಾರೆ. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಸಿಖ್ ಪ್ರತ್ಯೇಕತಾವಾದಿಯ ಕೊಲ್ಲುವ ಸಂಚನ್ನು ವಿಫಲಗೊಳಿಸಿ ಭಾರತಕ್ಕೆ ಎಚ್ಚರಿಕೆ ನೀಡಿದ ಅಮೆರಿಕ

ವಾರಿಸ್ ಪಂಜಾಬ್ ಡಿ ಸಂಘಟನೆಯ ಮುಖ್ಯಸ್ಥ ಅಮೃತಪಾಲ್ ಸಿಂಗ್‌ನನ್ನು ಕಳೆದ ವರ್ಷ ಏಪ್ರಿಲ್‌ನಲ್ಲಿ ಬಂಧಿಸಲಾಗಿದ್ದು ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು ಹೇರಲಾಗಿದೆ. ಅಮೃತಪಾಲ್ ಅವರು ಪ್ರಸ್ತುತ ತಮ್ಮ ಒಂಬತ್ತು ಸಹಚರರೊಂದಿಗೆ ದಿಬ್ರುಗಢ ಜೈಲಿನಲ್ಲಿದ್ದಾರೆ.

ಖಲಿಸ್ತಾನಿ ಭಯೋತ್ಪಾದಕ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆಯನ್ನು ಹತ್ಯೆಗೈದ ಬಳಿಕ ಅಮೃತಪಾಲ್ ಸಿಂಗ್‌ ಕಳೆದ ವರ್ಷ ಮಾರ್ಚ್‌ನಲ್ಲಿ ಜಲಂಧರ್ ಜಿಲ್ಲೆಯಲ್ಲಿ ವಾಹನಗಳನ್ನು ಬದಲಿಸಿ, ರೂಪ ಬದಲಿಸಿ ಪೊಲೀಸರಿಂದ ತಪ್ಪಿಸಿಕೊಂಡಿದ್ದ. ಅದಾದ ಬಳಿಕ ಕಳೆದ ವರ್ಷ ಏಪ್ರಿಲ್ 23 ರಂದು ಮೊಗಾದ ರೋದ್ ಗ್ರಾಮದಲ್ಲಿ ಒಂದು ತಿಂಗಳಿಗೂ ಹೆಚ್ಚು ಕಾಲ ಶೋಧ ಕಾರ್ಯಾಚರಣೆ ನಡೆಸಿ ಬಳಿಕ ಬಂಧಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

Download Eedina App Android / iOS

X