ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಮುಂದೆ ಚುನಾವಣೆ ನಡೆಯಲ್ಲ: ಪತ್ರಕರ್ತ ಜಿ ಪಿ ಬಸವರಾಜು ಕಳವಳ

Date:

Advertisements

2024ರ ಲೋಕಸಭಾ ಚುನಾವಣೆ ಪ್ರಜಾಪ್ರಭುತ್ವದ ಅಳಿವು ಉಳಿವಿನ ಚುನಾವಣೆ. ಈ ಬಾರಿಯ ಚುನಾವಣೆಯಲ್ಲಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಮುಂದೆ ದೇಶದಲ್ಲಿ ಚುನಾವಣೆಗಳೇ ನಡೆಯುವುದಿಲ್ಲ ಎಂದು ಪತ್ರಕರ್ತ ಜಿ ಪಿ ಬಸವರಾಜು ಕಳವಳ ವ್ಯಕ್ತಪಡಿಸಿದರು.

ಚಾಮರಾಜನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಡಾ.ಅಂಬೇಡ್ಕರ್ ಅವರ ಸಂವಿಧಾನವನ್ನು ಗಾಳಿಗೆ ತೂರುವ ಕೆಲಸ 10 ವರ್ಷಗಳಿಂದ ನಡೆಯುತ್ತಿದೆ. ಇ.ಡಿ, ಸಿಬಿಐ ಸ್ವಾಯತ್ತ ಸಂಸ್ಥೆಗಳಾಗಿ ಕೆಲಸ ಮಾಡುತ್ತಿಲ್ಲ. ಕೇಂದ್ರದ ವಿರುದ್ಧ ದನಿ ಎತ್ತಿದವರ ಮೇಲೆ ಆಯುಧವನ್ನಾಗಿ ಬಳಸಿಕೊಳ್ಳಲಾಗುತ್ತಿದೆ. ಒಕ್ಕೂಟ ವ್ಯವಸ್ಥೆಗೆ ದೊಡ್ಡ ಅಪಾಯ ಬಂದೊದಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಆರ್‌ಎಸ್‌ಎಸ್ ಸಿದ್ಧಾಂತವೇ ಬಿಜೆಪಿ ಸಿದ್ಧಾಂತ ಎಂದು ಹೇಳಿದ್ದಾರೆ. ಅಂದರೆ ವರ್ಣ ವ್ಯವಸ್ಥೆ, ಜಾತಿ ವ್ಯವಸ್ಥೆಯನ್ನು ಪ್ರಜಾಪ್ರಭುತ್ವ ವ್ಯವಸ್ಥೆಗೆ ಜೋಡಿಸಲಾಗುತ್ತಿದೆ” ಎಂದು ಬೇಸರ ಹೊರಹಾಕಿದರು.

Advertisements

“ಪ್ರಧಾನಿ ನರೇಂದ್ರಮೋದಿಯವರು ಒಂದು ಧರ್ಮದ ವಿರುದ್ಧ ಇನ್ನೊಂದು ಧರ್ಮದವರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಸೀತೆ, ಲಕ್ಷ್ಮಣ, ಹನುಮಂತನ ಜೊತೆ ಇದ್ದ ರಾಮನನ್ನು ಒಂಟಿ ಮಾಡಲಾಗಿದೆ. ಧರ್ಮವನ್ನು ಸ್ವಾರ್ಥಕ್ಕೆ, ರಾಜಕಾರಣಕ್ಕೆ ಬಳಸಿಕೊಳ್ಳುವುದು ನೀಚತನ. ಪ್ರಧಾನಿ ಸ್ಥಾನದಲ್ಲಿ ಯಾರೂ ಇಷ್ಟೊಂದು ಕೀಳುಮಟ್ಟಕ್ಕೆ ಇಳಿದಿರಲಿಲ್ಲ. ಈ ಲೋಕಸಭಾ ಚುನಾವಣೆಯಲ್ಲಿ ಯಾರೂ ಬಿಜೆಪಿಗೆ ಮತ ಹಾಕಬೇಡಿ” ಎಂದು ಜನಾಂದೋಲನಗಳ ಮಹಾಮೈತ್ರಿಯ ಸಂಘಟನಾ ಕಾರ್ಯದರ್ಶಿ ಉಗ್ರನರಸಿಂಹೇಗೌಡ ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X