ಹಾಸನ | ಪೆನ್‌ಡ್ರೈವ್ ಪ್ರಕರಣ; ಪ್ರಭಾವಿ ಕುಟುಂಬದ ಅಟ್ಟಹಾಸ ಮಟ್ಟಹಾಕಲು ಒಕ್ಕಲಿಗ ಸಮುದಾಯ ಮುಂದಾಗುವುದೇ?

Date:

Advertisements

ಹಾಸನ ನಗರದಲ್ಲಿ ಕಳೆದ ಎರಡು ಮೂರು ದಿನಗಳಿಂದ ಪೆನ್‌ಡ್ರೈವ್ ಮುಖಾಂತರ ಅಶ್ಲೀಲ ಚಿತ್ರಗಳು ಮತ್ತು ದೃಶ್ಯಗಳನ್ನು ಹಂಚಲಾಗುತ್ತಿದೆ. ಆ ಅಶ್ಲೀಲ ಚಿತ್ರಗಳು ಮತ್ತು ದೃಶ್ಯಗಳು ವಾಟ್ಸಾಪ್‌ಗಳಲ್ಲಿ ಹರಿದಾಡುತ್ತಿವೆ. ಈ ವಿಚಾರ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೊಳಗಾಗುತ್ತಿದ್ದು, ಎಲ್ಲೆಡೆ ಈ ಕೃತ್ಯದ ಕುರಿತು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ರಾಜಕೀಯ ಅಧಿಕಾರ, ಆಸ್ತಿ ಮತ್ತು ಜಾತಿಯ ಮದದಿಂದ ಮೆರೆಯುತ್ತಿರುವ ಹಾಸನ ಜಿಲ್ಲೆಯ ಪ್ರಭಾವಿ ಕುಟುಂಬದ ವ್ಯಕ್ತಿಯೊಬ್ಬ ಬಹುತೇಕ ಮಹಿಳೆಯರನ್ನು ತನ್ನ ಕಾಮದಾಹಕ್ಕೆ ನಿರಂತರವಾಗಿ ಬಳಸಿಕೊಂಡಿದ್ದೂ ಅಲ್ಲದೆ ಆ ದೃಶ್ಯಗಳನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ. ಮಹಿಳೆಯರನ್ನು ಈ ಕುಕೃತ್ಯಕ್ಕೆ ಬಳಸಿಕೊಳ್ಳಲು ಅವನು ತನಗಿರುವ ರಾಜಕೀಯ ಅಧಿಕಾರವನ್ನು ಬಳಸಿಕೊಂಡಿದ್ದಾನೆಂಬುದೂ ಸ್ಪಷ್ಟವಾಗಿದೆ.

ಇಂತಹ ಹೀನ ಕೃತ್ಯದ ಕುರಿತು ಇಡೀ ಪರಿವಾರಕ್ಕೆ ತಿಳಿದಿದ್ದರೂ ಕೂಡಾ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಅತ್ಯಂತ ಖಂಡನೀಯ. ಇಂತಹ ಕಾಮುಕನನ್ನು ಹಾಸನದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದು, ಇಂತಹ ಗಂಭೀರ ಪರಿಸ್ಥಿತಿಯಲ್ಲಿಯೂ ಕೂಡಾ ಬಿಜೆಪಿ ಯಾವುದೇ ನಿರ್ಧಾರಕ್ಕೆ ಮುಂದಾಗದೆ, ಯಾವುದೇ ಸಂಬಂಧವಿಲ್ಲದಂತೆ ಕೇವಲ ಜನಪ್ರತಿನಿಧಿಯಾಗಿ ಗೆಲ್ಲಿಸಿಕೊಳ್ಳುವತ್ತ ಗಮನ ಹರಿಸಿದೆ.

Advertisements

ಕಾಮುಕನ ಕೃತ್ಯಗಳು ಜಗಜ್ಜಾಹೀರಾಗಿದೆ. ಇದು ಕೇವಲ ಹಾಸನ ನಗರದ ವಿಷಯವಾಗಿರದೆ ಇಡೀ ದಕ್ಷಿಣ ಭಾರತದ ವಿಷಯವಾಗಿದೆ. ಹಾಗಾಗಿ ಸಂತ್ರಸ್ತ ಹೆಣ್ಣುಮಕ್ಕಳ ರಕ್ಷಣೆ ಹಾಗೂ ಇಂತಹ ಕಿಡಿಗೇಡಿಯ ದರ್ಪ ಅಡಗಿಸುವುದು ಹಾಸನ ಜಿಲ್ಲೆಯ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ. ಇದೀಗ ಸರಿಯಾದ ಸಂದರ್ಭವಾಗಿದ್ದು, ಜಿಲ್ಲೆಯ ಜನತೆ ಈಗಲಾದರೂ ಎಚ್ಚೆತ್ತುಕೊಳ್ಳಬೇಕು. ವಿಶೇಷವಾಗಿ ಒಕ್ಕಲಿಗ ಸಮುದಾಯ ಯಾವುದೇ ಮೋಹಕ್ಕೆ, ಒಕ್ಕಲುತನಕ್ಕೆ ಒಳಗಾಗದೆ ಏಪ್ರಿಲ್‌ 26ರಂದು ನಡೆಯಲಿರುವ ಚುನಾವಣೆಯಲ್ಲಿ ತಕ್ಕ ಶಾಸ್ತಿ ಮಾಡಬೇಕು.

ಈ ಸುದ್ದಿ ಓದಿದ್ದೀರಾ? ಪೆನ್‌ಡ್ರೈವ್ ಆತಂಕ ಕೊನೆಗೊಳಿಸಿ – ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ; ಸಿಪಿಐಎಂ ಆಗ್ರಹ

ಹೀನ ಕೃತ್ಯ ನಡೆಸಿರುವ ಮೈತ್ರಿ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಒಕ್ಕಲಿಗ ಸಮುದಾಯದ ಗೌರವ ಕಾಪಾಡಿಕೊಳ್ಳಬೇಕು. ಅಧಿಕಾರದ ಮದದಿಂದ ಮೆರೆಯುತ್ತಿರುವ ಇಂತಹ ಕುಟುಂಬವನ್ನು ಕೊನೆಗಾಣಿಸಬೇಕು. ಹಾಸನದಲ್ಲಿ ಬದಾಲಾವಣೆ ತರುವ ಮೂಲಕ ಕುಟುಂಬ ರಾಜಕಾರಣವನ್ನು ಕಿತ್ತೊಗೆದು, ಮಹಿಳೆಯರು ನಿರ್ಭಯದಿದ ಬದುಕುವಂತಹ ವಾತಾವರಣ ಕಲ್ಪಿಸಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಪ್ರತಿ ಮತದಾರರೂ ಕೂಡಾ ಜಾಗೃತಗೊಂಡು ಯೋಚಿಸಿ ಮತದಾನ ಮಾಡಬೇಕು. ವಿಶೇಷವಾಗಿ ಮತ್ತೊಮ್ಮೆ ಒಕ್ಕಲಿಗ ಸಮುದಾಯಕ್ಕೆ ಕಳಕಳಿಯ ಮನವಿ ತನ್ನ ಸಮುದಾಯದ ಗೌರವ ಕಾಪಾಡಿಕೊಳ್ಳುವುದೇ ಧ್ಯೇಯವಾಗಬೇಕು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X