ಮುಸ್ಲಿಂ ಮೀಸಲಾತಿ | ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ: ರವಿವರ್ಮ ಕುಮಾರ್

Date:

Advertisements

ಮುಸ್ಲಿಂರನ್ನು ಹಿಂದುಳಿದ ಪಟ್ಟಿಗೆ ಸೇರಿಸಿದ್ದಾರೆ ಅಂತ ಹೇಳಲಾಗುತ್ತಿದೆ. ಹಿಂದುಳಿದ ಮೀಸಲಾತಿ ಮುಸ್ಲಿಂರಿಗೆ ಕೊಡಲಾಗಿದೆ ಎಂದು ಪ್ರಧಾನಿ ಮೋದಿಯವರು ಹೇಳಿಕೆ ನೀಡಿದ್ದಾರೆ. ಇದು ಮೋದಿಯ ಮಹಾ ಸುಳ್ಳು ಎಂದು ಮಾಜಿ ಅಡ್ವೋಕೆಟ್ ಜನರಲ್ ರವಿವರ್ಮ ಕುಮಾರ್‌ ಹೇಳಿದರು.

ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟ ಬೆಂಗಳೂರಿನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಚುನಾವಣೆ ಸಂದರ್ಭದಲ್ಲಿ ಮೋದಿಯವರು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

“1874ರಲ್ಲಿ ಮೀಸಲಾತಿ ಬಂತು. 1876ರಲ್ಲಿ ಜಾತಿ ಜನಗಣತಿ ನಡೆಯಿತು. ಅದರ ಆಧಾರದ ಮೇಲೆ ಮೀಸಲಾತಿ ಒಡೆಯರ್ ಮೀಸಲಾತಿ ಕೊಟ್ಟರು. 1874ರಲ್ಲಿ 10 ಹುದ್ದೆಗಳಲ್ಲಿ ಬ್ರಾಹ್ಮಣರಿಗೆ 2 ಹುದ್ದೆ/ಉಳಿದ 8 ಹುದ್ದೆ ಮುಸ್ಲಿಂ ಮತ್ತು ಇತರರಿಗೆ ಕೊಡಲಾಯಿತು. 1874ರಿಂದ ಮುಸ್ಲಿಂರಿಗೆ ಮೀಸಲಾತಿ ಇದೆ. ಈ ಸತ್ಯವನ್ನು ಮರೆಮಾಚಿ ಸುಳ್ಳು ಹೇಳಲಾಗುತ್ತಿದೆ” ಎಂದರು.

Advertisements

ಮೀಸಲಾತಿ ಬದಲಾವಣೆ ಬಗ್ಗೆ ಈ ಸರ್ಕಾರ ಎನೂ ಮಾಡಿಲ್ಲ

“ದೇವರಾಜ್ ಅರಸು ಸರ್ಕಾರ 1972ರಲ್ಲಿ ಹಾವನೂರು ಆಯೋಗ ಮಾಡಿದೆ. 1975ರಲ್ಲಿ ಆಯೋಗ ವರದಿ ಸಲ್ಲಿಕೆ ಮಾಡಿತು. ವರದಿಗೆ ವಿರೋಧ – ಪರ ಅಭಿಪ್ರಾಯ ಬಂತು. 1977ರಲ್ಲಿ ಹಾವನೂರು ಆಯೋಗದ ವರದಿ ಜಾರಿ ಮಾಡಲಾಯಿತು. ದೇವರಾಜ್ ಅರಸು ಅವರು ವರದಿ ಜಾರಿ ಮಾಡಿ‌ ಹಿಂದುಳಿದವರಿಗೆ ಮೀಸಲಾತಿ ಕೊಟ್ಟರು. ಜೊತೆಗೆ ಮುಸ್ಲಿಂರನ್ನು ಹಿಂದುಳಿದ ಜಾತಿ ಅಂತ ಮೀಸಲಾತಿ ಕೊಡಲಾಯಿತು” ಎಂದು ವಿವರಿಸಿದರು.

ಮುಸ್ಲಿಮರಿಗೆ ಕೊಟ್ಟ ಮೀಸಲಾತಿಗೆ ಸುಮಾರು 150ವರ್ಷ ಇತಿಹಾಸವಿದೆ. ಇದರ ವಿರುದ್ದ ಕೋ ಚನ್ನಬಸಪ್ಪ ಮೊಕದ್ದಮೆ ಹೂಡಿದರು. ಲಿಂಗಾಯತ ಪರ ವಾದ ಮಂಡಿಸಿದರು. ಸೋಮಶೇಖರ್ ಎಂಬುವರು ವಾದಿಯಾಗಿದ್ದರು. ಸೋಮಶೇಖರ್ ಕೇಸ್ ಅಂತ ಕರೆಯಲಾಗ್ತಿದೆ. 1979ರಲ್ಲಿ ಹೈಕೋರ್ಟ್ ಮುಸ್ಲಿಂ ಮೀಸಲಾತಿ ಪರ ತೀರ್ಪು ಕೊಟ್ಟಿತು. ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಲಾಯಿತು. ಸುಪ್ರೀಂ ಕೋರ್ಟ್ ಸಹ ಮುಸ್ಲಿಂ ಮೀಸಲಾತಿ ಎತ್ತಿಹಿಡಿಯಿತು” ಎಂದರು.

“ಮೋದಿಯವರು ಸುಳ್ಳು ಹೇಳುತ್ತಿದ್ದಾರೆ. ಇದು ಈಗಿನ ಮೀಸಲಾತಿ ಅಲ್ಲ. ಇದು 150 ವರ್ಷಗಳಿಂದ ಕೊಡಲಾಗಿದೆ. ಮುಸ್ಲಿಂರಿಗೆ ಶೇ.4 ಮೀಸಲಾತಿ ರಾಮಕೃಷ್ಣ ಹೆಗಡೆ ಸರ್ಕಾರ ಮಾಡಿದ್ದು. ಲಿಂಗಾಯತರಿಗೆ ಹಿಂದುಳಿದ 3ಬಿ ಅನ್ವಯ ಮೀಸಲಾತಿ ಕೊಡಲಾಯಿತು. 2ಬಿ ಅನ್ವಯ ಮುಸ್ಲಿಂರಿಗೆ ಮೀಸಲಾತಿ ನೀಡಲಾಯಿತು. ಇದು ಕಾಂಗ್ರೆಸ್ ಸರ್ಕಾರ ಮಾಡಿದ್ದಲ್ಲ” ಎಂದರು.

“ದೇವೆಗೌಡರು ತಮ್ಮ ಸರ್ಕಾರದಲ್ಲಿ ಈ ಆದೇಶ ಮಾಡಿದ್ದು. ಕುಮಾರಸ್ವಾಮಿ, ಯಡಿಯೂರಪ್ಪ, ಸದಾನಂದಗೌಡ, ಶೆಟ್ಟರ್ ಸರ್ಕಾರ ಈ ಮೀಸಲಾತಿಯನ್ನು ಮುಂದುವರಿಸಲಾಗಿದೆ. ಧರ್ಮದ ಆಧಾರಿತ ಮುಸ್ಲಿಂ ಮೀಸಲಾತಿ ಕೊಟ್ಟಿಲ್ಲ, ಇದು ಸುಳ್ಳು” ಎಂದರು.

ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಹಂಸರಾಜ್ ಗಂಗಾರಾಮ್ ಅಹೀರ್ ಬಿಜೆಪಿ ಬಾಲಬುಡುಕ. ಚುನಾವಣೆಯಲ್ಲಿ ಸೋತವನು ಅವನು. ಆತನಿಗೆ ಕಾಂಗ್ರೆಸ್ ಮೇಲೆ ಸಿಟ್ಟಿದೆ. ಈಗ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಆಗಿದ್ದಾರೆ. 1993ರಲ್ಲಿ ಆಯೋಗ ಅಸ್ತಿತ್ವಕ್ಕೆ ಬಂದಿದೆ.
ಯಾವತ್ತೂ ರಾಷ್ಟ್ರೀಯ ಆಯೋಗ ಕರ್ನಾಟಕ ಮೀಸಲಾತಿ ಬಗ್ಗೆ ಚಕಾರ ಎತ್ತಿಲ್ಲ” ಎಂದು ಕಿಡಿಕಾರಿದರು.

“ಮುಸ್ಲಿಂರಿಗೆ ಕೊಟ್ಟ ಮೀಸಲಾತಿಯನ್ನು ಬೊಮ್ಮಾಯಿ ಸರ್ಕಾರ ಕಿತ್ತು ಹಾಕಿತ್ತು. ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಲಾಯಿತು. ಈ ಪ್ರಕರಣದ ವಿಚಾರದಲ್ಲಿ ಬೊಮ್ಮಾಯಿ ಸರ್ಕಾರ, ಮೀಸಲಾತಿ ಆದೇಶ ಜಾರಿ ಮಾಡಲ್ಲ ಅಂತ ಹೇಳಿತು. ಅದು ಇನ್ನೂ ಕೋರ್ಟ್‌ನಲ್ಲಿದೆ” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X