ಹಾವೇರಿ | ವಿದ್ಯಾರ್ಥಿನಿಯರನ್ನು ಚುಡಾಯಿಸುವ ಕಾಮುಕ ಕಿಡಿಗೇಡಿಗಳ ಮೇಲೆ ಕ್ರಮಕ್ಕೆ ಆಗ್ರಹ

Date:

Advertisements

ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಚುಹಾವೇರಡಾಯಿಸುವ, ಲೈಂಗಿಕವಾಗಿ ಪ್ರಚೋದಿಸುವ ಕಾಮುಕ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಲು ಹಾಗೂ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಲು ಒತ್ತಾಯಿಸಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳಲ್ಲಿ ವಿದ್ಯಾರ್ಥಿನಿಯರು ಮನವಿ ಸಲ್ಲಿಸಿದರು.

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ರಾಣೇಬೆನ್ನೂರ ತಾಲೂಕು ಸಮಿತಿಯ ನೇತೃತ್ವದಲ್ಲಿ ಮಂಗಳವಾರ (ಏ.23) ವಸತಿ ನಿಲಯಗಳಲ್ಲಿ ವಿದ್ಯಾರ್ಥಿನಿಯರು ಶಹರ ಪೋಲಿಸ್ ಠಾಣೆ ಪಿಎಸ್ಐ ಅವರಿಗೆ ಮನವಿ ಪತ್ರ ನೀಡಿದರು.

ಎಸ್ಎಫ್ಐ ಸಂಘಟನೆಗೆ ವಿದ್ಯಾರ್ಥಿನಿಯರ ದೂರಿನ ಮೇರೆಗೆ ನಗರದ ಶಹರ ಪೊಲೀಸ್ ಠಾಣೆ ಪಿಎಸ್ಐ ಅವರಿಗೆ ಕರೆ ಮಾಡಿ ವಸತಿ ನಿಲಯದ ಆವರಣದಲ್ಲಿ ಸಭೆ ಏರ್ಪಡಿಸಿ ವಿದ್ಯಾರ್ಥಿಗಳು ಪ್ರತಿನಿತ್ಯ ಅನುಭವಿಸುತ್ತಿರುವ ಸಮಸ್ಯೆಗಳನ್ನು ಹೇಳಿಕೊಂಡರು.

Advertisements

ರಾಣೇಬೆನ್ನೂರಿನ ಹೊರವಲಯದ ಕಮಲಾ ನಗರ ಹಾಗೂ ಈಶ್ವರಿ ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಸುತ್ತ-ಮುತ್ತಲೂ ಅನೇಕ ದಿನಗಳಿಂದ ವಿದ್ಯಾರ್ಥಿನಿಯರು ಹೋಗುವಾಗ ಬರುವಾಗ ಕೆಲವರು ಚೂಡಾಯಿಸುವುದು, ರೇಗಿಸುವುದು ಹಾಗೂ ಹಾಸ್ಟೆಲ್ ಹಿಂಭಾಗದಲ್ಲಿ ಬಂದು ಅರೆ ಬೆತ್ತಲೆಯಲ್ಲಿ ನಿಲ್ಲುವುದು, ಲೈಂಗಿಕವಾಗಿ ಪ್ರಚೋದಿಸುವ, ಸೈಕೊ ಕಾಮುಕರ ಹಾವಳಿಯಿಂದ ವಿದ್ಯಾರ್ಥಿನಿಯರು ದಿನ ನಿತ್ಯವೂ ನರಕಯಾತನೆ ಅನುಭವಿಸುತ್ತಿದ್ದಾರೆ ಎಂದು ದೂರಿದರು.

ಈ ಕಾಮುಕರ ಹಾವಳಿಯಿಂದಾಗಿ ಮನೆಯಿಂದ ಓಡಾಡಲು ಬಸ್ಸಿನ ಸಮಸ್ಯೆ ಬೇರೆ, ಪರೀಕ್ಷೆಯ ಸಮಯ ಇರುವುದರಿಂದ ಮನೆಯಲ್ಲಿ ತಿಳಿಸಿದರೆ ಶಾಲೆ, ಕಾಲೇಜು ಬಿಡಿಸುತ್ತಾರೆ ಎಂಬ ಭಯದಿಂದ, ದಿನ ನಿತ್ಯವೂ ಪುಂಡರ ಹಾವಳಿಯಿಂದ ನರಳುತ್ತಿದ್ದಾರೆ. ಆದರಿಂದ ಪೋಲಿಸ್ ಇಲಾಖೆ ಸ್ವಯಂ ದೂರ ದಾಖಲಿಸಿಕೊಂಡು ಕಾಮುಕ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಎಸ್‌ಎಫ್‌ಐ ಒತ್ತಾಯಿಸಿತು.

ಬೇಡಿಕೆಗಳು

1) ಕಮಲಾ ನಗರ ಹಾಗೂ ಈಶ್ವರಿ ನಗರಗಳ ಬಿಸಿಎಮ್ ಇಲಾಖೆಯ ಹಾಸ್ಟೆಲ್ ಎದುರು ಚೂಡಾಯಿಸುವ, ಲೈಂಗಿಕವಾಗಿ ಪ್ರಚೋದಿಸುವ ಕಾಮುಕರು ಮೇಲೆ ಸ್ವಯಂ ದೂರ ದಾಖಲಿಸಬೇಕು.

2) ಸೂಕ್ತ ತನಿಖೆ ನಡೆಸಿ ಕೂಡಲೇ ಕಾಮುಕ ಕಿಡಿಗೇಡಿಗಳನ್ನು ಬಂಧಿಸಬೇಕು.

3) ಕಾನೂನಾತ್ಮಕ ಶಿಕ್ಷೆಗೆ ಒಳಪಡಿಸಬೇಕು.

4) ಈ ಪ್ರಕರಣ ಅನೇಕರಿಗೆ ಮಾದರಿ ರೂಪದಲ್ಲಿ ಕಾರ್ಯಚರಣೆ ನಡೆಸಿ ಮುಂದೆ ಈ ರೀತಿ ಯಾರು ಮಾಡದಂತೆ ನೋಡಿಕೊಳ್ಳಬೇಕು.

5) ಈ ಎರಡೂ ಹಾಸ್ಟೆಲ್‌ಗಳಿಗೆ ಹೆಚ್ಚುವರಿ ಸಿಸಿ ಕ್ಯಾಮರಾಗಳನ್ನು ಅಳವಡಿಸಬೇಕು.

6)  ನಗರದ ಹೊರ ವಲಯದಲ್ಲಿರುವ ಶಾಲಾ ಕಾಲೇಜು ವಿವಿ ಹಾಗೂ ವಿದ್ಯಾರ್ಥಿ ವಸತಿ ನಿಲಯಗಳಿಗೆ ಬೀಟ್ ಪೊಲೀಸರನ್ನು ನೇಮಿಸಬೇಕು.

7) ಕೆಎಸ್‌ಆರ್‌ಟಿಸಿ ಸಮಾಜ ಕಲ್ಯಾಣ, ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಡಿಡಿಪಿಐ, ಡಿಡಿಪಿಯು, ಎಲ್ಲಾ ಶಾಲಾ ಕಾಲೇಜುಗಳಿಗೆ ನೋಟಿಸ್ ಹಾಕಿ ವಿದ್ಯಾರ್ಥಿನಿಯರ ರಕ್ಷಣೆಗಾಗಿ ಸಭೆ ನಡೆಸಲು ಸೂಚಿಸಬೇಕು.

8) ವರದ ಪಡೆ ತನ್ನ ಕಾರ್ಯವನ್ನು ಇನ್ನಷ್ಟು ಚುರುಕುಗೊಳಿಸಲು ಸೂಚಿಸಬೇಕು.

9) ನಗರದ ಹೊರವಲಯ ಹಾಗೂ ನಗರದಲ್ಲಿ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು.

10) ದುರಸ್ತಿಯಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಬದಲಾಯಿಸಿ ಹೊಸ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು.

11) ಶಾಲಾ-ಕಾಲೇಜು ಹಾಗೂ ಮಹಿಳೆಯರು ಕೆಲಸ ಮಾಡುವಂತಹ ಪದೇಶಗಳಲ್ಲಿ ಲೈಂಗಿಕ ಕಿರುಕುಳ ವಿರೋಧಿ ಸಮಿತಿಯನ್ನು ರಚನೆ ಮಾಡಬೇಕು.

12) ಪ್ರೊ. ವರ್ಮಾ ಸಮಿತಿಯ ಶಿಫಾರಸ್ಸುಗಳನ್ನು ಜಾರಿ ಮಾಡಬೇಕು.

13) ಬಸ್ ನಿಲ್ದಾಣ, ಹಾಸ್ಟೆಲ್, ಶಾಲಾ – ಕಾಲೇಜು ಗಳಲ್ಲಿ ದೂರು ಪೆಟ್ಟಿಗೆ ಹಾಕಬೇಕು, ಸರಿಯಾಗಿ ನಿರ್ವಹಿಸಬೇಕು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X