ಲೋಕಸಭಾ ಚುನಾವಣೆ | ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಆರಂಭ: ಉತ್ಸಾಹದಿಂದ ಮತ ಚಲಾಯಿಸುತ್ತಿರುವ ಮತದಾರರು

Date:

Advertisements

ರಾಜ್ಯದ 14 ಕ್ಷೇತ್ರಗಳಲ್ಲಿ ಏ.26ರಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಸೆಲೆಬ್ರೇಟಿಗಳು, ರಾಜಕಾರಣಿಗಳು, ವಿಶೇಷ ಚೇತನರು ಸೇರಿದಂತೆ ಹಲವರು ತಮ್ಮ ತಮ್ಮ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುತ್ತಿದ್ದಾರೆ. ಇನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದಲ್ಲಿ ಹಸೆಮಣೆ ಏರುವ ಮುನ್ನ ಮದುಮಗಳಾಗಿ ಅಲಂಕಾರಗೊಂಡ ಯುವತಿಯೊಬ್ಬರು ತಮ್ಮ ಮತಗಟ್ಟೆಯಲ್ಲಿ ಮೊದಲ ಮತದಾನ ಮಾಡಿ ನಂತರ ಮದುವೆಗೆ ತೆರಳಿದ್ದಾರೆ.

ಏ.26ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಚುನಾವಣಾ ಆಯೋಗ ಮತದಾನಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದೆ.

ಬೆಂಗಳೂರಿನ ನಾಲ್ಕು ಕ್ಷೇತ್ರದ ಜತೆಗೆ ಮಂಡ್ಯ, ಮೈಸೂರು, ತುಮಕೂರಿನಲ್ಲಿ ಮತದಾನ ನಡೆಯುತ್ತಿದೆ. ಹಾಸನ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಚಿತ್ರದುರ್ಗ ಹೀಗೆ ಒಟ್ಟು 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಕಾಂಗ್ರೆಸ್‌ನ 14, ಬಿಜೆಪಿಯ 11, ಜೆಡಿಎಸ್‌ನ ಮೂವರು ಸೇರಿದಂತೆ 247 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆ ಸೇರಲಿದೆ.

Advertisements

ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 2,88,19,342 ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಈ ಪೈಕಿ 1,44,17,530 ಪುರುಷ ಮತದಾರರು, 1,43,87,585 ಮಹಿಳಾ ಮತದಾರರಿದ್ದಾರೆ.

ಮತಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ, ಮತದಾನದ ವೇಳೆ ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಮನ್‌ರೆಗಾ ಕಾರ್ಡ್, ಬ್ಯಾಂಕ್ ಪಾಸ್‌ ಬುಕ್ ಡ್ರೈವಿಂಗ್ ಲೈಸೆನ್ಸ್ ತೋರಿಸಿ ಹಕ್ಕು ಚಲಾಯಿಸಬಹುದು.

ಮತ ಚಲಾವಣೆಗೆ ಮಹಿಳಾ ಮತದಾರರು ಮುಂದೆ

ರಾಜ್ಯದ 14 ಕ್ಷೇತ್ರಗಳಲ್ಲಿ ಏಪ್ರಿಲ್ 26ರಂದು ಬೆಳಗ್ಗೆ 9 ಗಂಟೆ ವರೆಗೆ ಒಟ್ಟು ಶೇ 9.21ರಷ್ಟು ಮತದಾನವಾಗಿದೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಗಾಂಧಿನಗರ ವಿಧಾನಸಭೆ ವ್ಯಾಪ್ತಿಯ ಬೂತ್ ನಂಬರ್ 35 ರ 1,282 ಒಟ್ಟು ಮತದಾರರಲ್ಲಿ ಬೆಳಿಗ್ಗೆ 9 ಗಂಟೆಗೆ ಒಟ್ಟು 110 ಜನ ಮತದಾನ ಮಾಡಿದ್ದು, ಈ ಪೈಕಿ ಮಹಿಳೆಯರು 63 ವೋಟ್ ಮಾಡಿದ್ದರೇ, 57 ಪುರುಷರು ಮತದಾನ ಮಾಡಿದ್ದಾರೆ. ಈ ಬೂತ್‌ನಲ್ಲಿ ಮತದಾನದಲ್ಲಿ ಮಹಿಳಾ ಮತದಾರರು ಮುಂದೆ ಇದ್ದಾರೆ.

ಹಾಗೆಯೇ ಈ ಕ್ಷೇತ್ರದ ಬೂತ್ ನಂಬರ್ 117 ರಲ್ಲಿ 752 ಒಟ್ಟು ಮತದಾರರ ಪೈಕಿ ಬೆಳಿಗ್ಗೆ 9.30 ಗಂಟೆಗೆ ಒಟ್ಟು 79 ಜನ ಮತದಾನ ಮಾಡಿದ್ದಾರೆ. ಈ ಪೈಕಿ 20 ಮಹಿಳೆಯರು 59 ಪುರುಷರಿಂದ ಮತದಾನವಾಗಿದೆ.

ಈ ಸುದ್ದಿ ಓದಿದ್ದೀರಾ? ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ ಎಂದ ನಟಿ ಶೃತಿ: ಮಹಿಳಾ ಆಯೋಗದಿಂದ ನೋಟಿಸ್

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬಸವನಗುಡಿಯ ಸುರಾನ ಕಾಲೇಜಿನಲ್ಲಿ 61, 62 ಹಾಗೂ 63 ಕ್ರಮ ಸಂಖ್ಯೆಯಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಮತದಾರರು ಸರತಿಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ಬೆಳಿಗ್ಗೆ 9 ಗಂಟೆ ವೇಳೆಗೆ ಶೇ.10 ರಷ್ಟು ಮತದಾನ ನಡೆದಿದೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 226 ವಾರ್ಡ್‌ನಲ್ಲಿ ವಿಶೇಷ ಚೇತನರು ಮತದಾನ ಚಲಾಯಿಸಿದರು.

ಬೆಂಗಳೂರು ಉತ್ತರ ಕ್ಷೇತ್ರದ ಗೆದ್ದಲಹಳ್ಳಿಯ ಸರ್ಕಾರಿ ಮಾಧ್ಯಮ ಪ್ರಾಥಮಿಕ ಶಾಲೆಯ ಮತಗಟ್ಟೆ 191ರಲ್ಲಿ ಬೆಳಿಗ್ಗೆ 9.30 ಗಂಟೆಗೆ ಪುರುಷ ಹಾಗೂ ಮಹಿಳಾ ಮತದಾರರು ಸೇರಿದಂತೆ ಒಟ್ಟು 203 ಜನ ಮತ ಚಲಾಯಿಸಿದ್ದಾರೆ. ಮತಗಟ್ಟೆ 94ರಲ್ಲಿ ಒಟ್ಟು ಮತದಾರಲ್ಲಿ  1,100 ಮತದಾರರಿದ್ದು, 71 ಮಹಿಳೆಯರು, 81 ಪುರುಷ, ಮತದಾರರು ಸೇರಿದಂತೆ ಒಟ್ಟು 152 ಮತದಾರರು ತಮ್ಮ ಮತ ಚಲಾಯಿಸಿದ್ದಾರೆ.

ಮತಗಟ್ಟೆ 192ರಲ್ಲಿ ಒಟ್ಟು 1,119 ಮತದಾರರಿದ್ದು, 32 ಮಹಿಳಾ 54 ಪುರುಷ ಮತದಾರು ಒಟ್ಟು 86 ಮತಗಟ್ಟೆ 195 ರಲ್ಲಿ ಒಟ್ಟು  624 ರಿದ್ದು 35 ಮಹಿಳೆ 56  ಪುರುಷ ಮತದಾರರು ಸೇರಿದಂತೆ  91 ಜನ ಮತ ಚಲಾಯಿಸಿದ್ದಾರೆ.

ಮತಗಟ್ಟೆ 196ರಲ್ಲಿ ಒಟ್ಟು 679 ರಲ್ಲಿ 53 ಪುರುಷ 44 ಮಹಿಳಾ ಮತದಾರರು ಸೇರಿದಂತೆ ಒಟ್ಟರೆ 97 ಜನ ಮತ ಚಲಾಯಿಸಿದ್ದಾರೆ. ಮತಗಟ್ಟೆ 197 ರಲ್ಲಿ ಒಟ್ಟು 736 ರಲ್ಲಿ 45 ಪುರುಷ 31 ಮಹಿಳಾ ಮತದಾರರು ಸೇರಿದಂತೆ ಒಟ್ಟರೆ 76 ಜನ ಮತ ಚಲಾಯಿಸಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಬೆಳಗ್ಗೆ 9 ಗಂಟೆವರೆಗೆ ಶೇ 7.70 ರಷ್ಟು ಮತದಾನವಾಗಿದೆ. ಹಾಸನದಲ್ಲಿ ಶೇಕಡಾ 8.2ರಷ್ಟು ಮತದಾನವಾಗಿದೆ. ಚಿಕ್ಕಬಳ್ಳಾಪುರದಲ್ಲಿ ಶೇ 8.70 ರಷ್ಟು ಮತದಾನವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ 12.75ರಷ್ಟು ಮತದಾನ‌ವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.12.75ರಷ್ಟು ಮತದಾನ‌ವಾಗಿದೆ.

ಬೆಂಗಳೂರಿನಲ್ಲಿ ‘ಪೆಟ್ರೋಲ್ ಅಂಕಲ್’ ಎಂದೇ ಖ್ಯಾತಿ ಗಳಿಸಿದ್ದ ವ್ಯಕ್ತಿಯೊಬ್ಬರು ಜನರಲ್ಲಿ ವಿಭಿನ್ನವಾಗಿ ಮತದಾನ ಜಾಗೃತಿ ಮೂಡಿಸಿದ್ದಾರೆ. ಮೊಹಮ್ಮದ್ ಆರಿಫ್ ಸೇಠ್ ಎಂಬುವವರು ತಮ್ಮ ಕೈಯಲ್ಲಿ ಮತದಾನ ಜಾಗೃತಿ ಪ್ಲೆಕಾರ್ಡ್ ಹಿಡಿದು ವಿಧಾನಸೌಧದ ಮುಂಭಾಗದ ರಸ್ತೆಯಲ್ಲಿ ಓಡಾಡುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X