ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನದ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಹಲವು ಜನ ತಮ್ಮ ಮತದಾನ ಮಾಡಲು ಮತಗಟ್ಟೆಗೆ ತೆರಳುತ್ತಿದ್ದಾರೆ. ಇದರಲ್ಲಿ ಅಚ್ಚರಿಯೆಂಬಂತೆ ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ಮಾಡಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರದಲ್ಲಿ ತಾಯಿ-ಮಗಳು-ಮೊಮ್ಮಗಳು ಸೇರಿದಂತೆ ಒಂದೇ ಕುಟುಂಬದ 85 ಮಂದಿ ಮತ ಹಾಕಿದ್ದಾರೆ. ಚಿಕ್ಕಬಳ್ಳಾಪುರ ನಗರದ ಮತಗಟ್ಟೆ ಸಂಖ್ಯೆ 161ರಲ್ಲಿ ವಾರ್ಡ್ ನಂಬರ್ 19ರ ನಿವಾಸಿಗಳು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಈ ಕುಟುಂಬದ ಸದಸ್ಯರೆಲ್ಲರೂ ಮತದಾನದ ದಿನ ಒಂದೆಡೆ ಸೇರಿ, ಎಲ್ಲರೂ ಸೇರಿ ಮತಗಟ್ಟೆಗೆ ತೆರಳಿ ಮತದಾನ ಮಾಡುವ ಸಂಪ್ರದಾಯವನ್ನು ರೂಢಿ ಮಾಡಿಕೊಂಡು ಬಂದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಏ.29 ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ : ಹವಾಮಾನ ಇಲಾಖೆ
ಚಿಕ್ಕಬಳ್ಳಾಪುರದಲ್ಲಿ ಬೆಳಗ್ಗೆ 9 ಗಂಟೆಯವರೆಗೆ 8.74% ಮತದಾನವಾಗಿದೆ. ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಡಾ.ಸುಧಾಕರ್ ಹಾಗೂ ಕಾಂಗ್ರೆಸ್‍ನಿಂದ ರಕ್ಷಾ ರಾಮಯ್ಯ ಚುನಾವಣಾ ಅಖಾಡದಲ್ಲಿದ್ದಾರೆ.