ದಕ್ಷಿಣ ಕನ್ನಡ | ಬಂಟ ಬ್ರಿಗೇಡ್ ಹೆಸರಲ್ಲಿ ನಕಲಿ ಪತ್ರ: ಬಿಜೆಪಿ ದೂರು

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರಿಗೆ ಬೆಂಬಲ ನೀಡುವಂತೆ ಬಂಟ ಬ್ರಿಗೇಡ್ ಹೆಸರಿನಲ್ಲಿ ನಕಲಿ ಪತ್ರ ಹರಿಯಬಿಡಲಾಗಿದೆ ಎಂದು ಬಿಜೆಪಿ ಚುನಾವಣಾಧಿಕಾರಿಗೆ ದೂರು ನೀಡಿದೆ.

ಬಿಜೆಪಿ ಕಾನೂನು ಪ್ರಕೋಷ್ಠದ ಸಹ ಸಂಚಾಲಕ ದೇವಿ ಪ್ರಸಾದ್ ಎ ಸಾಮಾನಿ ಅವರು ಈ ಬಗ್ಗೆ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಜಿಲ್ಲೆಯಲ್ಲಿ ಬಂಟ ಬ್ರಿಗೇಡ್ ಎಂಬ ಹೆಸರಿನ ಯಾವುದೇ ಸಂಘಟನೆ ಇರುವುದಿಲ್ಲ ಹಾಗೂ ಅಂತಹ ಸಂಘಟನೆಯ ಯಾವುದೇ ಕಾರ್ಯಚಟುವಟಿಕೆಗಳು ನಡೆದಿರುವುದಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.WhatsApp Image 2024 04 25 at 6.00.17 PM

Advertisements

ಈ ನಕಲಿ ಪತ್ರದ ಮೂಲಕ ಕಾಂಗ್ರೆಸ್ ಅಭ್ಯರ್ಥಿಯು ದುರ್ಲಾಭ ಪಡೆಯುತ್ತಿದ್ದಾರೆಂದು ದೂರುದಾರರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | 2,326 ಮತಗಟ್ಟೆಗಳು, 14,880 ಸಿಬ್ಬಂದಿಗಳೊಂದಿಗೆ ಮತದಾನಕ್ಕೆ ಸಕಲ ಸಿದ್ಧತೆ

“ಜಾತಿ ಜಾತಿಗಳ ನಡುವೆ ದ್ವೇಷ ಉಂಟು ಮಾಡಲು ಈ ರೀತಿಯ ಪತ್ರ ಸೃಷ್ಟಿಸಲಾಗಿದೆ” ಎಂದು ದೂರಿನಲ್ಲಿ ತಿಳಿಸಿದೆ.

ಈ ನಕಲಿ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಬಗ್ಗೆ ಕೂಡಲೇ ಸೂಕ್ತ ಕ್ರಮ ಜರಗಿಸುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

Download Eedina App Android / iOS

X