ವಿಜಯಪುರ | ಅನುಭವಿ ಆಲಗೂರರ ಜಯದಿಂದ ಜಿಲ್ಲೆ ಅಭಿವೃದ್ಧಿ: ಶಾಸಕ ಯಶವಂತರಾಯಗೌಡ

Date:

Advertisements

ಸಜ್ಜನ ಹಾಗೂ ಅನುಭವಿಯಾದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರರಿಗೆ ಮತ ನೀಡಿದರೆ ವಿಜಯಪುರ ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ಇಂಡಿ ತಾಲೂಕಿನ ಅಗರಖೇಡ ಹಾಗೂ ಹಿರೇಬೇನೂರಲ್ಲಿ ಗುರುವಾರ ನಡೆದ ಜಿ.ಪಂ ವ್ಯಾಪ್ತಿಯ ಲೋಕಸಭೆ ಚುನಾವಣೆ ಸಭೆಯಲ್ಲಿ ಮಾತನಾಡಿ, “ಭೀಮೆಯ ದಡದ ಗ್ರಾಮಗಳಿಗೆ ಹಲವು ಅನುಕೂಲ ಮಾಡಿಕೊಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ನೀರಾವರಿ, ಪ್ರವಾಸೋದ್ಯಮ, ಲಿಂಬೆ ಬೆಳೆಗಳಿಗೆ ಪ್ರಾತಿನಿಧ್ಯ ಸೇರಿದಂತೆ ನೂರಾರು ಕೆಲಸಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಕೆಲಸ ಮಾಡುವವರಿಗೆ ಮತ ನೀಡಿದರೆ ಅವರಿಗೆ ಉತ್ತೇಜನ ಸಿಗುತ್ತದೆ. ಆಧ್ಯಾತ್ಮಿಕ ಸ್ವರೂಪದ ನೆಲ ಇದಾಗಿದೆ. ಈ ಕ್ಷೇತ್ರವನ್ನು ಹಿಂದೆಂದೂ ಕಾಣದಂತಹ ಅಭಿವೃದ್ಧಿ ಮಾಡಿದ್ದೇವೆ. ಸಾವಿರಾರು ಕೋಟಿ ರೂ. ಅನುದಾನ ನೀಡಿದ್ದೇವೆ. ಇಂಡಿ ನಗರಕ್ಕೆ ನಿರಂತರ ನೀರು, ರಸ್ತೆ, ಭೀಮಾಶಂಕರ ಸಕ್ಕರೆ ಕಾರಖಾನೆ ನಮ್ಮ ಸಾಧನೆಗಳು” ಎಂದು ಹೇಳಿದರು.

ಅಭ್ಯರ್ಥಿ ಪ್ರೊ.ರಾಜು ಆಲಗೂರ ಮಾತನಾಡಿ, “ಮೋದಿಯವರು ಉದ್ಯಮಪತಿಗಳ ಬಗ್ಗೆ ತೋರಿದ ಕಾಳಜಿ ರೈತರಿಗೆ ತೋರಿಸಿದ್ದರೆ ಈ ದೇಶ ಉದ್ಧಾರವಾಗುತ್ತಿತ್ತು” ಎಂದು ಹೇಳಿದರು.

Advertisements

ಉದ್ಯಮಿಗಳ ಹದಿನಾಲ್ಕು ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿರುವ ಮೋದಿಯವರ ಕಣ್ಣಿಗೆ ರೈತರ ಕೇವಲ ಒಂದೂವರೆ ಲಕ್ಷ ಕೋಟಿ ಸಾಲ ಕಾಣಲಿಲ್ಲ. ಇಲ್ಲಿನ ಸಂಸದ ಏನೊಂದು ಕೆಲಸ ಮಾಡಿಲ್ಲ. ಜಿಲ್ಲೆಯ ಅಭಿವೃದ್ಧಿಗೆ ನನಗೆ ಮತ ನೀಡಿದರೆ ನಿಮ್ಮ ಸೇವಕನಾಗಿ ದುಡಿಯುವೆ” ಎಂದು ಕೋರಿದರು.

ಇಲಿಯಾಸ್ ಬೋರಾಮಣಿ ಅವರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಾಕಾರವಾಗಿದ್ದನ್ನು  ವಿವರಿಸಿ, ತಾಲೂಕಿಗೆ ಪ್ರತಿ ತಿಂಗಳು ಹದಿಮೂರು ಕೋಟಿಯಷ್ಟು ಹಣ ಈ ಯೋಜನೆಯಿಂದ ಬರುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | 2,326 ಮತಗಟ್ಟೆಗಳು, 14,880 ಸಿಬ್ಬಂದಿಗಳೊಂದಿಗೆ ಮತದಾನಕ್ಕೆ ಸಕಲ ಸಿದ್ಧತೆ

ಮುಖಂಡರಾದ ಅಣ್ಣಾರಾಯ ಬಿದರಕೋಟಿ, ಜಟ್ಟೆಪ್ಪ ರವಳಿ, ಎಂ.ಆರ್.ಪಾಟೀಲ, ಕಲ್ಯಾಣಗೌಡ ಪಾಟೀಲ, ಭೀಮಣ್ಣ ಕವಲಗಿ, ಶೈಲಶ್ರೀ ಜಾದ್ವ, ಸಿದ್ಧರಾಯ ಐರೋಡಗಿ, ಕಲ್ಲನಗೌಡ, ಬ್ಲಾಕ್ ಅಧ್ಯಕ್ಷರಾದ ಜಾವೇದ್ ಮೋಮಿನ್, ಕಲ್ಲನಗೌಡ ಬಿರಾದಾರ, ಶ್ರೀಶೈಲ, ಪೈಗಂಬರ್ ದೇಸಾಯಿ, ಭೋಜಪ್ಪಗೌಡ ಸಾಹುಕಾರ, ದಸ್ತಗೀರ್, ಗಿರೀಶಗೌಡ ಪಾಟೀಲ, ಭೀಮಣ್ಣ ಕವಲಗಿ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X