₹4.8 ಕೋಟಿ ನಗದು ವಶ; ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲು

Date:

Advertisements

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿಚಕ್ಷಣ ದಳದ (ಎಫ್‌ಎಸ್‌ಟಿ) ಅಧಿಕಾರಿಗಳು ₹4.8 ಕೋಟಿ ನಗದು ವಶಪಡಿಸಿಕೊಂಡಿದ್ದು, ಈ ಸಂಬಂಧ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಗೋವಿಂದಪ್ಪ ಎಂಬವರ ಮನೆಯಿಂದ ಈ ಭಾರಿ ಮೊತ್ತದ ನಗದು ವಶಪಡಿಸಿಕೊಳ್ಳಲಾಗಿದ್ದು, 500 ರೂಪಾಯಿಗಳ ಬಂಡಲ್‌ಗಳಾಗಿ ಇವುಗಳನ್ನು ಕೂಡಿಡಲಾಗಿತ್ತು. ಗೋವಿಂದಪ್ಪ ಅವರನ್ನು ವಿಚಾರಣೆಗೆ ಗುರಿಪಡಿಸಿದ ಬಳಿಕ ಅವರು ನೀಡಿದ ಮಾಹಿತಿ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆಯ ಬೆನ್ನಲ್ಲೇ ಆದಾಯ ತೆರಿಗೆ ಅಧಿಕಾರಿಗಳು ಧಾವಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಚುನಾವಣಾ ಆಯೋಗ ಒಟ್ಟು 50 ಕೋಟಿ ರೂಪಾಯಿ ಮೌಲ್ಯದ ನಗದು, ಮದ್ಯ, ಮಾದಕ ವಸ್ತು ಮತ್ತು ಉಡುಗೊರೆಗಳನ್ನು ವಶಪಡಿಸಿಕೊಂಡಿದೆ.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X