- ಹಲವು ಷರತ್ತುಗಳನ್ನು ವಿಧಿಸಿ, ಜಾಮೀನು ಮಂಜೂರು ಮಾಡಲಾಗಿದೆ
- ಕೆಎಸ್‌ಡಿಎಲ್‌ನಲ್ಲಿ ಟೆಂಡರ್ ನೀಡಲು ಲಂಚ ಪಡೆಯುತ್ತಿದ್ದಾಗ ಸೆರೆ
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ ಟೆಂಡರ್ ನೀಡಲು ಲಂಚ ಪಡೆಯುತ್ತಿದ್ದಾಗ ಬಂಧಿನವಾಗಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್‌ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶಿಸಿದೆ.
ಕೆಎಸ್‌ಡಿಎಲ್‌ನಿಂದ ಟೆಂಡರ್ ನೀಡಲು ಶ್ರೇಯಸ್ ಕಶ್ಯಪ್ ಕಂಪೆನಿಯಿಂದ ಮಾ.2 ರಂದು 40 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಮಾಡಾಳ್ ಪ್ರಶಾಂತ್ ಅವರನ್ನು ಬಂಧಿಸಿದ್ದರು. ಬಳಿಕ, ಪ್ರಶಾಂತ್ ಮನೆ ಮೇಲೆ ದಾಳಿ ನಡೆಸಿದ್ದರು. ಅಲ್ಲಿ 2 ಕೋಟಿ ರೂ. ಹಣ ಪತ್ತೆಯಾಗಿತ್ತು.
ಇದೇ ಆರೋಪದ ಮೇಲೆ ಪ್ರಶಾಂತ್ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ‘ಭ್ರಷ್ಟಚಾರ ನಿಯಂತ್ರಣ ಕಾಯ್ದೆ’ ಅಡಿ ಸ್ವಯಂ ಪ್ರೇರಿತವಾಗಿ ಎರಡು ಎಫ್ಐಆರ್ ದಾಖಲಿಸಿದ್ದರು.
ಈ ಸುದ್ದಿ ಓದಿದ್ದೀರಾ? : ವಿನಯ್ ಕುಲಕರ್ಣಿಗಿಲ್ಲ ಧಾರವಾಡಕ್ಕೆ ಪ್ರವೇಶ; ಅರ್ಜಿ ವಜಾ ಮಾಡಿದ ಹೈಕೋರ್ಟ್
ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ 5 ಲಕ್ಷ ರೂ. ಮೊತ್ತದ ಬಾಂಡ್, ಇಬ್ಬರ ಶ್ಯೂರಿಟಿ ಪಡೆದು, 3 ವಾರಕ್ಕೊಮ್ಮೆ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಬೇಕು, ಪಾಸ್ ಪೋರ್ಟ್ನ್ನು ತನಿಖಾಧಿಕಾರಿಗೆ ನೀಡಬೇಕು ಎಂಬ ಷರತ್ತನ್ನು ನೀಡಿ ಜಾಮೀನು ಮಂಜೂರು ಮಾಡಿದೆ.
ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈಗಾಗಲೇ ಜಾಮೀನು ನೀಡಿತ್ತು.