ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

Date:

Advertisements

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಲೋ ಬಿಪಿಯಿಂದ ಮೃತಪಟ್ಟಿದ್ದಾರೆ.

ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋಧಮ್ಮ (55) ಮೃತ ಮಹಿಳಾ ಸಿಬ್ಬಂದಿ. ಯಶೋದಮ್ಮ ಅವರು ಲೋ ಬಿಪಿಯಿಂದಾಗಿ ಅಸ್ವಸ್ಥಗೊಂಡಿದ್ದರು. ಇವರನ್ನು ಕೂಡಲೇ ಚಳ್ಳಕೆರೆ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಚಳ್ಳಕೆರೆ ತಹಶೀಲ್ದಾರ್‌ ರೆಹನ್‌ ಪಾಷಾ ಅವರನ್ನು ಸಂಪರ್ಕಿಸಿದಾಗ ಮಾತನಾಡಿ, “ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಯಶೋಧ ಎಂಬುವವರಿಗೆ ಮುಂಚಿನಿಂದಲೂ ಶುಗರ್‌ ಇತ್ತೆಂಬುದು ತಿಳಿದುಬಂದಿದೆ. ಅವರು ಕರ್ತವ್ಯಕ್ಕೆ ಬರುವಾಗ ಆರಾಮಾಗಿಯೇ ಇದ್ದರು. ಸುಮಾರು 11ರವರೆಗೆ ಕೆಲಸವನ್ನೂ ಮಾಡಿದ್ದಾರೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಅಕ್ರಮ ಮದ್ಯ ಮಾರಾಟ ನಿಲ್ಲಿಸದಿದ್ದರೆ ಚುನಾವಣೆ ಬಹಿಷ್ಕಾರ; ಗ್ರಾಮಸ್ಥರ ಎಚ್ಚರಿಕೆ

“ಬೆಳಿಗ್ಗೆ 11ರ ಬಳಿಕ ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದಿದ್ದಾರೆ. ಅವರನ್ನು ಕೂಡಲೇ ಗ್ರಾಮದಿಂದ ಕೇವಲ 6ಕಿಮೀ ದೂರದಲ್ಲಿರುವ ಚಳ್ಳಕೆರೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೂ ಚಿಕಿತ್ಸೆಗೆ ಸ್ಪಂದಿಸದ ಕಾರಣ ಮೃತಪಟ್ಟಿದ್ದಾರೆ” ಎಂದು ಪ್ರತಿಕ್ರಿಯಿಸಿದರು.

ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಚಳ್ಳಕೆರೆ ಆಸ್ಪತ್ರೆಗೆ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ ಎನ್ನಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು...

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

Download Eedina App Android / iOS

X