ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

Date:

Advertisements

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ ತುಂಬ ನೋಟುಗಳು ತುಂಬಿವೆ ಎಂಬ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ₹500 ಮುಖಬೆಲೆಯ ನೋಟುಗಳ 62 ಬಂಡಲ್ ಪತ್ತೆಯಾಗಿದೆ ಎಂದು ಹೇಳಲಾಗಿದೆ.

ಅಬಕಾರಿ ಇಲಾಖೆ ಅಧಿಕಾರಿ ವಿಜಯಕುಮಾರ ಮತ್ತು ಅಬಕಾರಿ ಇನ್ಸ್‌ಪೆಕ್ಟರ್ ಪಾಂಡುರಂಗ ನೇತೃತ್ವವದ ತಂಡ ಅಕ್ರಮಮಧ್ಯ ಇರುವ ಮಾಹಿತಿ ಮೇಲೆ ಗೌಳಿಗಲ್ಲಿಯ ಚೋಟುಸಾಬ ಎಂಬುವವರ ಮನೆ  ಮೇಲೆ ದಾಳಿ ನಡೆಸಿದಾಗ ಗೋಣಿ ಚೀಲದಲ್ಲಿ ತುಂಬಿರುವ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ.

₹500 ಮುಖಬೆಲೆಯ ಜ಼ೆರಾಕ್ಸ್‌ ನೋಟುಗಳು ಇರುವುದು ಪತ್ತೆಯಾಗಿದೆ. 62 ಬಂಡಲ್‌ಗಳಲ್ಲಿರುವ ನೋಟಿನ ಪರಿಶೀಲನೆ ನಡೆಸಲಾಗುತ್ತಿದೆ. ₹500ರ ಮುಖಬೆಲೆಯ ಜ಼ೆರಾಕ್ಸ್ ನೋಟುಗಳನ್ನು ಸಂಗ್ರಹಿಸಿಟ್ಟಿರುವ ಕುರಿತು ಹಲವಾರು ಸಂಶಯಗಳು ವ್ಯಕ್ತವಾಗುತ್ತಿವೆ. ಈಗಾಗಲೇ ನಕಲಿ ನೋಟಿನ ಹಾವಳಿ ಹೆಚ್ಚಾಗಿರುವ ಸಂದರ್ಭದಲ್ಲಿ ಬಂಡಲ್‌ಗಳನ್ನು ಚೀಲದಲ್ಲಿ ಸಂಗ್ರಹಿಸಿರುವುದು ವ್ಯವಸ್ಥಿತ ಜಾಲ ಕಾರ್ಯನಿರ್ವಹಿಸುವ ಶಂಕೆ ವ್ಯಕ್ತವಾಗಿದೆ.

Advertisements

ಪ್ರಕರಣದ ಹಿಂದಿನ ಉದ್ದೇಶ ತನಿಖೆಯ ಬಳಿಕ ಬಯಲಾಗಬೇಕಿದೆ. ಅಬಕಾರಿ ಇಲಾಖೆ ಅಧಿಕಾರಿಗಳು ನೀಡಿರುವ ದೂರಿನ ಮೇರೆಗೆ ಲಿಂಗಸೂಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ಪುಂಡಲೀಕ್ ಪಟತರ್ ತನಿಖೆ ಕೈಗೊಂಡಿದ್ದಾರೆ. ಗುರುವಾರ ರಾತ್ರಿ ನಡೆದ ದಾಳಿಯಲ್ಲಿ ಪತ್ತೆಯಾಗಿರುವ ಘಟನೆಯ ಕುರಿತಂತೆ ಸಹಾಯಕ ಚುನಾವಣಾಧಿಕಾರಿ ಹಾಗೂ ಸಹಾಯಕ ಆಯುಕ್ತ ಶಿಂಧೆ ಅವಿನಾಶ್ ಸಂಜೀವನ್ ಅವರಿಗೆ ಮಾಹಿತಿ ಒದಗಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಹಿಂದು ಕಾರ್ಯಕರ್ತನ ಮೇಲೆ ಬಿಜೆಪಿಗರ ಹಲ್ಲೆ

ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಹಣ ಚಲಾವಣೆ ಮಾಡುವ ಉದ್ದೇಶ ಹೊಂದಿರುವ ಕುರಿತಂತೆ ಚುನಾವಣಾ ಹಾಗೂ ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಹಣದ ಮೂಲ ಹಾಗೂ ವ್ಯವಹಾರ ಕುರಿತಾಗಿ ಮಾಹಿತಿಗಳು ಲಭ್ಯವಾಗಬೇಕಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ...

ಗದಗ | ಒಳಮೀಸಲಾತಿ ಜಾರಿ, ಬಹುದಿನಗಳ ಕನಸು ನನಸು ಮಾಡಿದ ಎಲ್ಲರಿಗೂ ಅಭಿನಂದನೆ: ಎಸ್. ಎನ್. ಬಳ್ಳಾರಿ

ಪರಿಶಿಷ್ಟ ಜಾತಿಗಳ ಮೂರು ದಶಕಗಳ ಒಳಮೀಸಲಾತಿ ಹೋರಾಟವನ್ನು ಮಾನ್ಯ ಸುಪ್ರೀಂ ಕೋರ್ಟ್...

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

Download Eedina App Android / iOS

X