14 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ನಿಂದ ಹೆಚ್ಚುವರಿ ಉಸ್ತುವಾರಿ ಸಚಿವರ ನೇಮಕ

Date:

Advertisements

ಕರ್ನಾಟಕದ ಎರಡನೇ ಹಂತದ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಿಗೆ ಸಚಿವರನ್ನು ಹೆಚ್ಚುವರಿ ಉಸ್ತುವಾರಿಗಳನ್ನಾಗಿ ಕಾಂಗ್ರೆಸ್‌ ನೇಮಿಸಿದೆ.

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್‌ ಈ ಕುರಿತು ನಿರ್ದೇಶನ ನೀಡಿದ್ದು, ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲು 14 ಲೋಕಸಭಾ ಕ್ಷೇತ್ರಗಳಿಗೆ ಹೆಚ್ಚುವರಿ ಉಸ್ತುವಾರಿಯನ್ನಾಗಿ ಸಚಿವರನ್ನು ನೇಮಿಸಲಾಗಿದೆ. ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಕೋರಿದ್ದಾರೆ.

“ರಾಜ್ಯದಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ತಾವುಗಳು (ಸಚಿವರು) ಅತ್ಯಂತ ವ್ಯವಸ್ಥಿತವಾಗಿ ಚುನಾವಣೆ ಪ್ರಚಾರ ಕೈಗೊಂಡಿದ್ದೀರಿ. ತಮಗೆ ಪಕ್ಷದ ಪರವಾಗಿ ಧನ್ಯವಾದ ತಿಳಿಸುವೆ. 2ನೇ ಹಂತದ ಚುನಾವಣೆ ಮೇ 7ರಂದು ನಡೆಯಲಿದ್ದು, ಪ್ರಸ್ತುತ ಚುನಾವಣೆಯೂ ಅತ್ಯಂತ ಮಹತ್ವದ್ದಾಗಿದ್ದರಿಂದ ಉಳಿದ ಕ್ಷೇತ್ರಗಳ ಗೆಲುವಿಗೆ ಶ್ರಮಿಸಿ” ಎಂದು ಡಿಕೆ ಶಿವಕುಮಾರ್‌ ಮನವಿ ಮಾಡಿದ್ದಾರೆ.

Advertisements

ಯಾವ ಕ್ಷೇತ್ರಕ್ಕೆ ಯಾರು ಹೆಚ್ಚುವರಿ ಉಸ್ತುವಾರಿ?

ದಾವಣಗೆರೆ ಲೋಕಸಭಾ ಕ್ಷೇತ್ರ – ಡಾ. ಜಿ ಪರಮೇಶ್ವರ್‌
ಧಾರವಾಡ ಲೋಕಸಭಾ ಕ್ಷೇತ್ರ – ದಿನೇಶ್‌ ಗುಂಡೂರಾವ್‌
ಉತ್ತರ ಕನ್ನಡ ಲೋಕಸಭಾ ಕ್ಷೇತ್ರ – ಕೆ ಜೆ ಜಾರ್ಜ್‌
ಚಿಕ್ಕೋಡಿ ಲೋಕಸಭಾ ಕ್ಷೇತ್ರ – ಕೆ ಎಚ್‌ ಮುನಿಯಪ್ಪ
ಹಾವೇರಿ ಲೋಕಸಭಾ ಕ್ಷೇತ್ರ – ಕೃಷ್ಣ ಬೈರೇಗೌಡ
ಬಳ್ಳಾರಿ ಲೋಕಸಭಾ ಕ್ಷೇತ್ರ – ರಾಮಲಿಂಗಾರೆಡ್ಡಿ
ಬೆಳಗಾವಿ ಲೋಕಸಭಾ ಕ್ಷೇತ್ರ – ಬೈರತಿ ಸುರೇಶ್‌
ಕೊಪ್ಪಳ ಲೋಕಸಭಾ ಕ್ಷೇತ್ರ – ಡಾ. ಎಂ ಸಿ ಸುಧಾಕರ್‌
ರಾಯಚೂರು ಲೋಕಸಭಾ ಕ್ಷೇತ್ರ – ಕೆ ಎನ್‌ ರಾಜಣ್ಣ
ಬೀದರ್‌ ಲೋಕಸಭಾ ಕ್ಷೇತ್ರ – ಕೆ ವೆಂಕಟೇಶ್‌
ಶಿವಮೊಗ್ಗ ಲೋಕಸಭಾ ಕ್ಷೇತ್ರ – ಎನ್‌ ಚಲುವರಾಯಸ್ವಾಮಿ
ಬಿಜಾಪುರ ಲೋಕಸಭಾ ಕ್ಷೇತ್ರ – ಎಚ್‌ ಸಿ ಮಹದೇವಪ್ಪ
ಬಾಗಲಕೋಟೆ ಲೋಕಸಭಾ ಕ್ಷೇತ್ರ – ಡಿ ಸುಧಾಕರ್‌

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X