ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

Date:

Advertisements

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆದಿದೆ. ರಾಜ್ಯದ ಕೆಲವೆಡೆ ಪಕ್ಷದ ಕಾರ್ಯಕರ್ತರ ನಡುವೆ ಸಣ್ಣಪುಟ್ಟ ವಾಗ್ವಾದ ನಡೆದಿದೆ. ಇನ್ನು ಕೆಲವೆಡೆ ಗ್ರಾಮಸ್ಥರು ಮತದಾನವನ್ನು ಬಹಿಷ್ಕರಿಸಿದ್ದರು. ಇಂಡಿಗನತ್ತ ಗ್ರಾಮದಲ್ಲಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದರು. ಮನವೊಲಿಸಲು ಬಂದ ಅಧಿಕಾರಿಗಳ ಮೇಲೆ ಗ್ರಾಮಸ್ಥರು ಕಲ್ಲುತೂರಾಟ ನಡೆಸಿ, ಮತ ಯಂತ್ರಗಳನ್ನು ಸುಟ್ಟು ಹಾಕಿದ ಘಟನೆ ನಡೆದಿತ್ತು. ಈ ನಡುವೆ, ಬೆಂಗಳೂರು ಶಾಂತಿಯುತ ಮತದಾನಕ್ಕೆ ಸಾಕ್ಷಿಯಾಗಿದೆ.

ಕೆಲವು ಮತಗಟ್ಟೆಗಳಲ್ಲಿ ಮತದಾರರು ತಮ್ಮ ಗುರುತಿನ ಚೀಟಿ ಹೊಂದಿದ್ದರೂ ಕೂಡ ಮತ ಪಟ್ಟಿಯಿಂದ ಮತದಾರರ ಹೆಸರು ನಾಪತ್ತೆಯಾಗಿರುವುದು ಕಂಡು ಬಂದಿತು. ಚುನಾವಣಾಧಿಕಾರಿಗಳು ಮತದಾನ ಮಾಡದಂತೆ ತಡೆದಾಗ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು. ಈ ವೇಳೆ, ಭದ್ರತೆಗಾಗಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿ ಮತಗಟ್ಟೆಯಿಂದ ಹೊರಹೋಗುವಂತೆ ಮನವೊಲಿಸಿದರು.

ಟಿ.ದಾಸರಹಳ್ಳಿ ಸಮೀಪದ ಶಿವಪುರದಲ್ಲಿ ಮತದಾನ ಬಹಿಷ್ಕಾರದ ಬೆದರಿಕೆ ಹಾಕಿದ್ದರು. ನೆಲಗದರಹಳ್ಳಿಯಲ್ಲಿ ವಿವಿಪ್ಯಾಟ್‌ ಕೈಕೊಟ್ಟಿದ್ದರಿಂದ ಸುಮಾರು 2 ಗಂಟೆ ಮತದಾನ ಸ್ಥಗಿತಗೊಂಡಿತ್ತು. ಕಾದು ಕಾದು ಸುಸ್ತಾದ ಹಲವು ಮತದಾರರು ಮನೆಗೆ ವಾಪಸ್ಸಾದರು. ಇಂತಹ ಬೆರಳೆಣಿಕೆಯ ತೊಂದರೆಗಳನ್ನು ಹೊರತುಪಡಿಸಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಯಾವುದೇ ಗೊಂದಲ, ಗಲಾಟೆಗಳಿಲ್ಲದೇ ಮತದಾನ ನಡೆಯಿತು. ಈ ನಡುವೆ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸದಸ್ಯರು ಶುಕ್ರವಾರ ಬೆಳಗ್ಗೆ ರಾಜಾಜಿನಗರದ ಮತದಾನ ಕೇಂದ್ರದ ಮುಂದೆ ಚೊಂಬು ಮತ್ತು ಗ್ಯಾಸ್ ಸಿಲಿಂಡರ್‌ ಹಿಡಿದು ಪ್ರತಿಭಟನೆ ನಡೆಸಿದರು.

Advertisements

ಕೆಲವೆಡೆ ಮತದಾರರಿಗೆ ಉಡುಗೊರೆ ಕಾರ್ಡ್ ವಿತರಿಸುವ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಇನ್ನು ಚಾಮರಾಜಪೇಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮತದಾರರ ಮನೆಗೆ ತೆರಳಿ ಹಣ ಹಂಚುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪ ಮಾಡಿದ್ದರು.

ರಾಜಕೀಯ ಪಕ್ಷದ ಕಾರ್ಯಕರ್ತರೊಬ್ಬರ ಮೇಲೆ ‘ಕಟಿಂಗ್’ ಸೀನ ಎಂದು ಗುರುತಿಸಲಾದ ರೌಡಿ ಶೀಟರ್ ಹಲ್ಲೆ ನಡೆಸಿದ್ದಾನೆ ಎಂಬ ಆರೋಪವಿದೆ. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಆರ್‌ಆರ್‌ನಗರದ ಮತಗಟ್ಟೆಯೊಂದರಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌.ಮಂಜುನಾಥ್‌ ಅವರ ಮೊದಲ ಅಕ್ಷರವನ್ನು ‘ಸಿ.ಎಸ್‌.ಮಂಜುನಾಥ್‌’ ಎಂದು ಮತಗಟ್ಟೆಯ ಪ್ರವೇಶ ದ್ವಾರದಲ್ಲಿ ಬರೆದಿದ್ದರಿಂದ ಮತದಾರರು ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣೆಗೆ ಮುನ್ನ ರೌಡಿ ಶೀಟರ್‌ಗಳ ವಿರುದ್ಧ ಪೊಲೀಸ್ ಇಲಾಖೆ ಕೈಗೊಂಡ ಭದ್ರತಾ ಕ್ರಮಗಳಿಂದ ಸುಗಮ ಚುನಾವಣೆ ನಡೆಯಲು ಸಹಾಯಕವಾಯಿತು. ಇದು ಪೊಲೀಸರಿಗೆ ಸಹಾಯ ಮಾಡಿತು.

ಪ್ರತಿ ಮತಗಟ್ಟೆ ಕೇಂದ್ರದಲ್ಲಿ ನಿಯೋಜನೆಗೊಂಡಿದ್ದ ಭದ್ರತಾ ಪಡೆಗಳು ನಗರದ ಯಾವುದೇ ಭಾಗದಲ್ಲಿ ಅಹಿತಕರ ಘಟನೆಗಳು ವರದಿಯಾಗದಂತೆ ಎಚ್ಚರ ವಹಿಸಿದ್ದರು. ಚುನಾವಣಾ ಆಯೋಗ ವೆಬ್‌ಕಾಸ್ಟಿಂಗ್ ಮೂಲಕ ನಿಗಾ ಇರಿಸಿತ್ತು. ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ದಕ್ಷಿಣದ ನಿರ್ಣಾಯಕ ಬೂತ್‌ಗಳಲ್ಲಿ ಅರೆಸೇನಾ ಪಡೆಗಳ ನಿಯೋಜನೆ ಮಾಡಲಾಗಿತ್ತು. ಇದು ಬೆಂಗಳೂರಿನಲ್ಲಿ ಚುನಾವಣೆ ಸುಗಮವಾಗಿ ನಡೆಯಲು ಕಾರಣವಾಯಿತು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ಬೆಂಗಳೂರು ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಐದು ಸಂಸತ್ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮತದಾನ ನಡೆಯಿತು. ಇದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನವಾಗಿತ್ತು. ಇದರಲ್ಲಿ ರಾಜ್ಯದ ದಕ್ಷಿಣ ಭಾಗದ 14 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಿತು. ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರಗಳಿವೆ. ಹಿರಿಯ ಅಧಿಕಾರಿಗಳು ಭದ್ರತಾ ವ್ಯವಸ್ಥೆಗಳ ಮೇಲ್ವಿಚಾರಣೆ ನಡೆಸಿದರು.

ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 13,000ಕ್ಕೂ ಹೆಚ್ಚು ಪೊಲೀಸರು, 4,000 ಹೋಮ್ ಗಾರ್ಡ್ಸ್‌, 11 ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್‌), 14 ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್‌ಆರ್‌ಪಿ) ಹಾಗೂ 40 ನಗರ ಸಶಸ್ತ್ರ ಮೀಸಲು (ಸಿಎಆರ್‌) ತುಕಡಿಗಳನ್ನು ನಿಯೋಜಿಸಲಾಗಿತ್ತು.

ಎಲ್ಲ ಪೊಲೀಸ್ ಠಾಣೆಗಳಲ್ಲಿ 7,533 ಬಂದೂಕುಗಳನ್ನು ಠೇವಣಿ ಇಡಲಾಗಿತ್ತು. ಸೆಕ್ಷನ್ 144 ಕೂಡ ಜಾರಿ ಮಾಡಲಾಗಿತ್ತು. ಏಪ್ರಿಲ್ 24 ರಂದು ಸಂಜೆ 5 ರಿಂದ ಏಪ್ರಿಲ್ 26 ರ ಮಧ್ಯರಾತ್ರಿಯವರೆಗೆ ಮದ್ಯವನ್ನು ಸಹ ನಿಷೇಧ ಮಾಡಿಲಾಗಿತ್ತು.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಮಾತನಾಡಿ, “ನಗರದಲ್ಲಿ ಚುನಾವಣೆ ಸಂಪೂರ್ಣವಾಗಿ ಶಾಂತಿಯುತವಾಗಿ ನಡೆದಿದೆ. ಎಲ್ಲ ಐದು ಲೋಕಸಭಾ ಕ್ಷೇತ್ರಗಳ ಚುನಾವಣೆಯು ಸಂಪೂರ್ಣವಾಗಿ ಶಾಂತಿಯುತವಾಗಿ ನಡೆಯಿತು. ಇದು ಘಟನೆ ಮತ್ತು ಹಿಂಸಾಚಾರ ಮುಕ್ತ ಚುನಾವಣೆಯಾಗಿದೆ” ಎಂದು ಹೇಳಿದರು.

ಬೆಂಗಳೂರು ಕೇಂದ್ರದಲ್ಲಿ ಶೇ.52.81, ಬೆಂಗಳೂರು ದಕ್ಷಿಣದಲ್ಲಿ ಶೇ.53.15 ಹಾಗೂ ಬೆಂಗಳೂರು ಉತ್ತರದಲ್ಲಿ ಶೇ.54.42 ರಷ್ಟು ಮತದಾನವಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

Download Eedina App Android / iOS

X