ಮೀಸಲಾತಿ ರದ್ದು ಮಾಡುವುದೇ ಬಿಜೆಪಿ ಗುರಿ; ಅದರ ನಾಯಕರ ಹೇಳಿಕೆಗಳಿಂದಲೇ ಸ್ಪಷ್ಟ: ರಾಹುಲ್ ಗಾಂಧಿ

Date:

Advertisements

ಸಂವಿಧಾನವನ್ನು ಬದಲಿಸುವ ಮೂಲಕ ಪ್ರಜಾಪ್ರಭುತ್ವವನ್ನು ನಾಶಪಡಿಸುವುದು ಮತ್ತು ದಲಿತರು, ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಜನಾಂಗದವರ ಮೀಸಲಾತಿಯನ್ನು ‘ಕಿತ್ತುಕೊಳ್ಳುವುದು’ ಬಿಜೆಪಿಯ ಉದ್ದೇಶವಾಗಿದೆ. ಇದು ಬಿಜೆಪಿ ನಾಯಕರ ಹೇಳಿಕೆಗಳಿಂದಲೇ ಸ್ಪಷ್ಟವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಕಾಂಗ್ರೆಸ್ ಇರುವವರೆಗೆ ಜಗತ್ತಿನ ಯಾವ ಶಕ್ತಿಯೂ ವಂಚಿತ ಜನರ ಮೀಸಲಾತಿಯನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ” ಎಂದು ಪ್ರತಿಪಾದಿಸಿದ್ದಾರೆ.

“ಬಿಜೆಪಿ ನಾಯಕರು ಮತ್ತು ನರೇಂದ್ರ ಮೋದಿಯವರ ನಿಕಟವರ್ತಿಗಳ ಹೇಳಿಕೆಯಿಂದ ಅವರ ಉದ್ದೇಶ – ಸಂವಿಧಾನವನ್ನು ಬದಲಾಯಿಸುವ ಮೂಲಕ ದೇಶದ ಪ್ರಜಾಪ್ರಭುತ್ವವನ್ನು ನಾಶಪಡಿಸುವುದು ಎಂಬುದು ಈಗ ಸ್ಪಷ್ಟವಾಗಿದೆ. ದಲಿತರು, ಹಿಂದುಳಿದ ವರ್ಗಗಳು ಮತ್ತು ಆದಿವಾಸಿಗಳ ಮೀಸಲಾತಿಯನ್ನು ಕಿತ್ತುಕೊಳ್ಳುವುದು ಮತ್ತು ದೇಶವನ್ನು ಮುನ್ನಡೆಸುವಲ್ಲಿ ಈ ಸಮುದಾಯಗಳ ಭಾಗವಹಿಸುವಿಕೆಯನ್ನೂ ತಡೆಯುವುದು ಬಿಜೆಪಿಯ ಗುರಿಯಾಗಿದೆ” ಎಂದು ರಾಹುಲ್ ಆರೋಪಿಸಿದ್ದಾರೆ.

Advertisements

“ಸಂವಿಧಾನ ಮತ್ತು ಮೀಸಲಾತಿಯನ್ನು ಕೊನೆಗಾಣಿಸಲು ಯತ್ನಿಸುತ್ತಿರುವ ಬಿಜೆಪಿಯ ದಾರಿಗೆ ಕಾಂಗ್ರೆಸ್ ಬಂಡೆಯಂತೆ ನಿಂತಿದೆ. ಕಾಂಗ್ರೆಸ್ ಇರುವವರೆಗೆ ಜಗತ್ತಿನ ಯಾವ ಶಕ್ತಿಯೂ ವಂಚಿತ ಜನರ ಮೀಸಲಾತಿಯನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮ್ಮು ಕಾಶ್ಮೀರ ಮೇಘಸ್ಫೋಟ: ಹತ್ತನೇ ದಿನಕ್ಕೆ ಕಾಲಿಟ್ಟ ಕಾರ್ಯಾಚರಣೆ, ಇನ್ನೂ 36 ಮಂದಿ ನಾಪತ್ತೆ

ಜಮ್ಮು ಕಾಶ್ಮೀರ ಮೇಘಸ್ಫೋಟ ದುರಂತದಲ್ಲಿ ಕನಿಷ್ಠ 68 ಮಂದಿ ಸಾವನ್ನಪ್ಪಿ 36...

ಧರ್ಮಸ್ಥಳ | ದೂರುದಾರನ ಹಿನ್ನೆಲೆ ತಿಳಿದುಕೊಂಡಿದ್ದರೆ ಸರ್ಕಾರದ ದುಡ್ಡು ಉಳೀತಿತ್ತು: ಆರ್. ಅಶೋಕ್

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಡಲಾಗಿದೆ ಎಂದು ದೂರು ಕೊಟ್ಟಿದ್ದ ಸಾಕ್ಷಿ ದೂರುದಾರನನ್ನು...

ಬ್ಯಾಂಕ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ನಿವಾಸದ ಮೇಲೆ ಸಿಬಿಐ ದಾಳಿ, ಎಫ್‌ಐಆರ್ ದಾಖಲು

ಸುಮಾರು ಎರಡು ಸಾವಿರ ಕೋಟಿ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ...

Download Eedina App Android / iOS

X