ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಾಂಗ್ರೆಸ್ ಪಕ್ಷದ ಬೆಂಬಲಿಗನಾಗಿರುವ ನವೀನ್ ಗೌಡ ಸೇರಿ ಜೊತೆಗಾರರ ಮೇಲೆ ದೂರು ದಾಖಲಾಗಿದೆ.
ಹಾಸನ ಸೈಬರ್ ಪೊಲೀಸ್ ಠಾಣೆಯಲ್ಲಿ ಪೂರ್ಣಚಂದ್ರ ತೇಜಸ್ವಿ ಎಂಬುವವರು ದೂರು ನೀಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ನವೀನ್ ಗೌಡ ಹಾಗೂ ಜೊತೆಗಾರರು ಫೋಟೋ ಮಾರ್ಫ್ ಮಾಡಿ ವೀಡಿಯೋ ರೆಡಿ ಮಾಡಿದ್ದಾರೆ. ವಿಡಿಯೋವನ್ನು ಪೆನ್‌ಡ್ರೈವ್ ಮತ್ತು ಸಿಡಿ ಮೂಲಕ ಹಾಸನದ ವಿವಿಧ ಕಡೆಗಳಲ್ಲಿ ಹಂಚಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ಆರೋಪಿಸಲಾಗಿದೆ.
ಇದನ್ನು ಓದಿದ್ದೀರಾ? ಹಾಸನ ಪೆನ್‌ಡ್ರೈವ್ ಪ್ರಕರಣ: ಜರ್ಮನಿಗೆ ತೆರಳಿರುವ ಸಂಸದ ಪ್ರಜ್ವಲ್ ರೇವಣ್ಣ?
ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜನರ ದಿಕ್ಕು ತಪ್ಪಿಸಲಾಗಿದೆ. ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್‌ನಲ್ಲಿ ಹಾಸನದ ಮನೆ ಮನೆಗೂ ಹಂಚಿಕೆ ಮಾಡಿದ್ದಾರೆ. ಹೀಗಾಗಿ ನವೀನ್ ಗೌಡ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಪೂರ್ಣಚಂದ್ರ ತೇಜಸ್ವಿ ಎಂಬುವವರು ನೀಡಿದ ದೂರಿನಲ್ಲಿ ಒತ್ತಾಯಿಸಲಾಗಿದೆ.
