ಹಾಸನ ‘ಪೆನ್‌ಡ್ರೈವ್’ ಪ್ರಕರಣಕ್ಕೆ ಸಂಬಂಧಿಸಿದವರ ಬಂಧನಕ್ಕೆ ಆಗ್ರಹ; ಏ.29ರಂದು ಪ್ರತಿಭಟನೆ

Date:

Advertisements

ಇಡೀ ನಾಗರಿಕ ಸಮಾಜವೇ ಬೆಚ್ಚಿಬೀಳುವಂತ ಘಟನೆ ಹಾಸನದಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟದಿಂದ ಏಪ್ರಿಲ್‌ 29ರಂದು ನಗರದ ಮಹಾರಾಜ ಪಾರ್ಕ್‌ ಎದುರು ಬೃಹತ್‌ ಪ್ರತಿಭಟನೆ ನಡಸಲಾಗುವುದು ಎಂದು ಹಲವು ಸಂಘಟನಾಕಾರರು ಪತಿಭಟನೆ ನಡೆಸಲು ಮುಂದಾಗಿದ್ದಾರೆ.

“ಪೆನ್‌ಡ್ರೈವ್ ಮುಖಾಂತರ ಮಹಿಳೆಯರ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳನ್ನು ಬಿಡುಗಡೆ ಮಾಡಿ ವಾಟ್ಸ್‌ಆಪ್ ಮೂಲಕ ವ್ಯಾಪಕವಾಗಿ ಹರಡಲಾಗುತ್ತಿದೆ. ಹಾಸನ ಜಿಲ್ಲೆಯ ಪ್ರಭಾವಿ ವ್ಯಕ್ತಿಯೊಬ್ಬರು ನೂರಾರು ಮಹಿಳೆಯರನ್ನು ಅಕ್ರಮವಾಗಿ ಲೈಂಗಿಕವಾಗಿ ಬಳಸಿಕೊಂಡು ಅವರ ಖಾಸಗಿ ದೃಶ್ಯಗಳನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿರುವ ದೃಶ್ಯಗಳು ವ್ಯಾಪಕವಾಗಿ ಹಂಚಿಕೆಯಾಗುತ್ತಿವೆ” ಎಂದು ಪ್ರತಿಭಟನಾಕಾರರರು ಕಳವಳ ವ್ಯಕ್ತಪಡಿದ್ದಾರೆ.

“ಅಶ್ಲೀಲ ದೃಶ್ಯಗಳಲ್ಲಿರುವ ಮಹಿಳೆಯರ ಖಾಸಗಿ ಬದುಕು ಛಿದ್ರಗೊಂಡಿದೆ. ಆದರೆ ಮಹಿಳೆಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ಅವರ ಖಾಸಗಿ ದೃಶ್ಯಗಳನ್ನು ಚಿತ್ರೀಕರಿಸಿಕೊಂಡಿರುವ ಪ್ರಭಾವಿ ವ್ಯಕ್ತಿ ಹಾಗೂ ಮಹಿಳೆಯರ ಖಾಸಗಿ ಲೈಂಗಿಕ ದೃಶ್ಯಗಳನ್ನು ಸಾರ್ವಜನಿಕವಾಗಿ ಹರಡುತ್ತಿರವ ವ್ಯಕ್ತಿಗೆ ಯಾವುದೇ ಶಿಕ್ಷೆಯಾಗುತ್ತಿಲ್ಲ. ಇಂತಹ ವಿಕ್ಷಿಪ್ತ ಮತ್ತು ವಿಕೃತ ಲೈಂಗಿಕ ಅಕ್ರಮದಿಂದಾಗಿ ಹಾಸನ ಜಿಲ್ಲೆಯ ಜನರು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ ಎಂದರು.

Advertisements

“ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟ ನೂರಾರು ಮಹಿಳೆಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ಅದನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿರುವ ಜಿಲ್ಲೆಯ ಪ್ರಭಾವಿ ವ್ಯಕ್ತಿ ಮತ್ತು ಆ ದೃಶಗಳನ್ನು ಸಾರ್ವಜನಿಕವಾಗಿ ಬಿತ್ತರಿಸಿ ಮಹಿಳೆಯರ ಖಾಸಗಿ ಬದುಕಿಗೆ ಧಕ್ಕೆ ತಂದಿರುವ ವ್ಯಕ್ತಿಯನ್ನು ಕೂಡಲೇ ಬಂಧಿಸಿ ಶಿಕ್ಷೆಗೊಳಪಡಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸ್‌ ತನ್ನದೇ ಛಾಪು ಮೂಡಿಸಿದೆ: ಮಂಜುನಾಥ ಸುಣಗಾರ

ಈ ಪ್ರತಿಭಟನೆ ಬೆಂಬಲಿಸುವ ಎಲ್ಲರೂ ನಾಳೆ ಬೆಳಿಗ್ಗೆ 11ಕ್ಕೆ ಸರಿಯಾಗಿ ಹಾಸನದ ಮಹಾರಾಜ ಪಾರ್ಕ್‌ನಲ್ಲಿ ಬಂದು ಸೇರಬೇಕೆಂದು ಮನವಿ ಮಾಡಿದ್ದಾರೆ.

ಹಾಸನ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟ(ದಲಿತ, ರೈತ, ಕಾರ್ಮಿಕ, ಮಹಿಳಾ, ಅಲ್ಪಸಂಖ್ಯಾತ, ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಹಾಗೂ ವ್ಯಕ್ತಿಗಳ ಐಕ್ಯ ವೇದಿಕೆ)ಗಳ ಕಾರ್ಯಕರ್ತರು ಇದೆದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X