ಛತ್ತೀಸ್‌ಗಢದ ಬೆಮೆತಾರಾ ಜಿಲ್ಲೆಯಲ್ಲಿ ಸರಕು ಸಾಗಣೆ ವಾಹನವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರಲ್ಲಿ ಐವರು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದ್ದಾರೆ.
ಭಾನುವಾರ ತಡರಾತ್ರಿ ಕಥಿಯಾ ಗ್ರಾಮದ ಬಳಿ ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
Chhattisgarh | Death toll in Bemetara accident rises to 9
9 people died and 23 are injured and have been shifted to the hospital for treatment: Ranveer Sharma, Collector Bemetara https://t.co/MyiVmMm68l
— ANI (@ANI) April 29, 2024
ಮೃತರು ಪಥರಾ ಗ್ರಾಮದವರಾಗಿದ್ದು ತಿರಯ್ಯ ಗ್ರಾಮದಲ್ಲಿ ನಡೆದ ಕುಟುಂಬ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ರಸ್ತೆ ಬದಿ ನಿಂತಿದ್ದ ಮಿನಿ ಟ್ರಕ್‌ಗೆ ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ
ಮೃತರನ್ನು ಭೂರಿ ನಿಶಾದ್ (50), ನೀರಾ ಸಾಹು (55), ಗೀತಾ ಸಾಹು (60), ಅಗ್ನಿಯಾ ಸಾಹು (60), ಖುಷ್ಬು ಸಾಹು (39), ಮಧು ಸಾಹು (5), ರಿಕೇಶ್ ನಿಶಾದ್ (6) ಮತ್ತು ಟ್ವಿಂಕಲ್ ನಿಶಾದ್ ( 6) ಎಂದು ಗುರುತಿಸಲಾಗಿದೆ. ಉಳಿದ ಮೃತರ ಮಾಹಿತಿ ಲಭ್ಯವಾಗಿಲ್ಲ.
ಈ ಬಗ್ಗೆ ಎಎನ್‌ಐಗೆ ಮಾಹಿತಿ ನೀಡಿದ ಬೆಮೆತಾರಾ ಜಿಲ್ಲಾಧಿಕಾರಿ ರಣವೀರ್ ಶರ್ಮಾ “9 ಮಂದಿ ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ತಿಳಿಸಿದ್ದಾರೆ.
ತೀವ್ರವಾಗಿ ಗಾಯಗೊಂಡ ನಾಲ್ವರನ್ನು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ರಾಯ್‌ಪುರಕ್ಕೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.