ಶಿವಮೊಗ್ಗ | ಭದ್ರಾವತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ‘ರೋಡ್ ಶೋ’

Date:

Advertisements

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಪ್ರಮುಖ ರಸ್ತೆಗಳಲ್ಲಿ ಭಾನುವಾರ (ಏ.28) ಸಂಜೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು, ಸಹಸ್ರಾರು ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿದರು.

ರೋಡ್‌ ಶೋನಲ್ಲಿ ಕಾರ್ಯಕರ್ತರು ‘ಗೀತಕ್ಕ’ ಅವರನ್ನು ಬೆಂಬಲಿಸಿ ಎಂದು ಘೋಷಣೆ ಕೂಗುವ ಮೂಲಕ ಮತ ಪ್ರಚಾರ ನಡೆಸಿದರು. ರೋಡ್‌ ಶೋ ಸಂಜೆ 6ಕ್ಕೆ ತಾಲೂಕಿನ ಬೊಮ್ಮನಕಟ್ಟೆಯಿಂದ ಪ್ರಾರಂಭವಾಯಿತು. ರೋಡ್‌ ಶೋ ಮೂಲಕ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರು ಸಾಗುತ್ತಿದ್ದಾಗ ಮಹಿಳೆಯರು ಆರತಿ ಬೆಳಗುವುದು ಹಾಗೂ ಕಾರ್ಯಕರ್ತರು ಹೂವಿನ ಹಾರ ಹಾಕುವ ಮೂಲಕ ಶುಭ ಕೋರಿದರು.

ರೋಡ್ ಶೋ ಪೇಪರ್ ಟೌನ್- ಚೌಡಮ್ಮನ ದೇವಸ್ಥಾನ, ಕೂಲಿ ಬ್ಲಾಕ್ ಸೆಡ್, ಮೇಲೂರ್ ಸೆಡ್, ಉಜ್ಜಯಿನಿಪುರ, ಸುರ್ಗಿತೋಪು, ಆಂಜನೇಯ ಅಗ್ರಹಾರ, ಜಿಂಕ್ ಲೈನ್ ಮುಖಾಂತರ ತೆರೆದ ವಾಹನದಲ್ಲಿ ಮತಯಾಚನೆ ಕಾರ್ಯ ನಡೆಯಿತು.

Advertisements

ಅತ್ಯುತ್ಸಾಹದಲ್ಲಿ ಪಾಲ್ಗೊಂಡಿದ್ದ ನೂರಾರು ಯುವಕರು ಮೆರವಣಿಗೆ ಉದ್ದಕ್ಕೂ ಪಟಾಕಿ ಸಿಡಿಸಿ, ಸಂಭ್ರಮಿಸಿದರು. ರಸ್ತೆಯ ಇಕ್ಕೆಲಗಳಲ್ಲೂ ಕಿಕ್ಕಿರಿದು ಸೇರಿದ್ದ ಸಾವಿರಾರು ಜನರು ಗೀತಾ ಶಿವರಾಜಕುಮಾರ ಅವರ ಉತ್ಸಾಹ ಇಮ್ಮಡಿಗೊಳಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಮಾತನಾಡಿ, ಮಹಿಳೆಯರು ಮನಸ್ಸು ಮಾಡಿದರೆ, ಏನು ಬೇಕಾದರು ಸಾಧಿಸಬಹುದು. ಇಲ್ಲಿನ ವಿಐಎಸ್‌ಎಲ್ ಕಾರ್ಖಾನೆ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳು ಗಾಢವಾಗಿ ಬೇರೂರಿ ನಿಂತಿವೆ. ಈ ಎಲ್ಲಾ ಸಮಸ್ಯೆಗಳಿಗೆ ಕೇಂದ್ರದ ಹಂತದಲ್ಲಿ ಪರಿಹಾರ ಒದಗಿಸಲು ಮತ ನೀಡಿ ಅವಕಾಶ ಕಲ್ಪಿಸಿಕೊಡಿ ಎಂದು ಕೋರಿದರು.

ಶಾಸಕ ಬಿ.ಕೆ.ಸಂಗಮೇಶ್ ಮಾತನಾಡಿ, ಜಿಲ್ಲೆಯ ಸರ್ವೋತೋಮುಖ ಏಳಿಗೆಗೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ ಎಂದು ಕೋರಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಬಲ್ಕೀಸ್ ಭಾನು ಮಾತನಾಡಿ, ಇಲ್ಲಿನ ಸ್ಥಳೀಯ ಸಮಸ್ಯೆಗಳ ಪರಿಹರಿಸಲು ಶಾಸಕ ಸಂಗಮೇಶ್ ಅವರ ಕೈ ಬಲಪಡಿಸಿ ಕ್ಷೇತ್ರವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯಲು ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದು ಕೋರಿದರು.

ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ನಟ ಶಿವರಾಜಕುಮಾರ, ಮುಖಂಡರಾದ ಬಿ.ಕೆ.ಮೋಹನ್, ಗಣೇಶ್, ಭದ್ರಾವತಿ ಕಾಂಗ್ರೆಸ್ ಸಂಯೋಜಕ ಬಿಆರ್‌ಪಿ ರಮೇಶ್ ಸೇರಿ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X