ಮಧ್ಯ ಪ್ರದೇಶದ ಇಂಧೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಂಠಿ ಬಂಬ್ ಅವರು ಚುನಾವಣೆಗೆ ತಮ್ಮ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ.
ಮಧ್ಯ ಪ್ರದೇಶದ ಸಚಿವ ಕೈಲಾಶ್ ವಿಜಯವರ್ಗೀಯಾ ಅವರು ಅಕ್ಷಯ್ ಕಂಠಿ ಬಂಬ್ ಅವರ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದ ತಮ್ಮ ಅಕೌಂಟ್‌ನಲ್ಲಿ ಪೋಸ್ಟ್ ಮಾಡಿ ಪಕ್ಷಕ್ಕೆ ಸ್ವಾಗತ ಎಂದು ಬರೆದುಕೊಂಡಿದ್ದಾರೆ.
“ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಅಕ್ಷಯ್ ಕಂಠಿ ಬಂಬ್ ಅವರು ಪ್ರಧಾನಿ, ಮಧ್ಯ ಪ್ರದೇಶ ಸಿಎಂ ಬಿಜೆಪಿ ಅಧ್ಯಕ್ಷರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದು, ನಾವು ಅವರನ್ನು ಸ್ವಾಗತ ಮಾಡುತ್ತೇವೆ” ಎಂದು ವಿಜಯ ವರ್ಗೀಯ ಪೋಸ್ಟ್ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಳ್ಳುಗಾರರನ್ನು ಸೋಲಿಸುವ ಸಮಯ ಬಂದಿದೆ; ಮತದಾರರೇ ಮುಂದಾಗಬೇಕಿದೆ
ಕಾಂಗ್ರೆಸ್ ಇಂಧೋರ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಲಿ ಸಂಸದ ಶಂಕರ್ ಲಾಲ್ವಾನಿ ವಿರುದ್ಧ ಕಣಕ್ಕಿಳಿಸಿತ್ತು. ಚುನಾವಣೆಯು ಮೇ.13ರಂದು ನಡೆಯಲಿದೆ.
ಕಳೆದ ಶುಕ್ರವಾದ ಬಿಜೆಡಿಯ ಶಾಸಕ ಪರಶುರಾಮ್ ದಾಡ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಒಡಿಶಾದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಎರಡೂ ಚುನಾವಣೆಗಳು ನಡೆಯಲಿವೆ.
