- ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ
- ರಂಜಾನ್ ಸಡಗರದಲ್ಲಿ ಮುಸಲ್ಮಾನರು
ರಾಜ್ಯ ರಾಜಧಾನಿಯಲ್ಲಿ ಈ ಹಿಂದೆ ವಿವಾದದ ಬಿಂದುವಾಗಿದ್ದ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಶನಿವಾರ ಮುಸಲ್ಮಾನರು ಪವಿತ್ರ ರಂಜಾನ್ ಹಬ್ಬ ಆಚರಿಸುತ್ತಿದ್ದಾರೆ. ಈ ಸಮಯಲ್ಲಿ ಅಹಿತಕರ ಘಟನೆ ಜರುಗದಂತೆ ನೋಡಿಕೊಳ್ಳಲು ಮೈದಾನದ ಸುತ್ತ 300ಕ್ಕೂ ಹೆಚ್ಚು ಪೊಲೀಸ್‌ರನ್ನು ಬಂದೋಬಸ್ತ್‌ಗಾಗಿ ನೇಮಕ ಮಾಡಲಾಗಿದೆ.
ರಾಜ್ಯದಾದ್ಯಂತ ಮುಸ್ಲಿಂ ಸಮುದಾಯ ವಿಜೃಂಭಣೆಯಿಂದ ರಂಜಾನ್ ಹಬ್ಬ ಆಚರಿಸುತ್ತಿದೆ. ರಾಜ್ಯದೆಲ್ಲೆಡೆ ಮುಸಲ್ಮಾನರು ಮಸೀದಿಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಅದರಂತೆಯೇ ಈದ್ಗಾ ಮೈದಾನದಲ್ಲಿಯೂ ಕೂಡಾ ಸಹಸ್ರಾರು ಸಂಖ್ಯೆಯಲ್ಲಿ ಮುಸಲ್ಮಾನರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಮುಸಲ್ಮಾನರು ಈದ್ಗಾ ಮೈದಾನದಲ್ಲಿ ನಮಾಜ್ ಸಲ್ಲಿಸುವ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಮೈದಾನದ ಸುತ್ತ ಪೋಲಿಸ್ ಕಾವಲು ನಿಯೋಜಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಮುಂದಿನ ಐದು ದಿನ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಸಾಮೂಹಿಕ ನಮಾಜ್ ಬೆಳಗ್ಗೆ 9.30 ರಿಂದ 10.30 ರವರೆಗೆ ಒಂದು ಗಂಟೆ ಕಾಲ ನಡೆಯಲಿದೆ. 300 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಈದ್ಗಾ ಮೈದಾನದಲ್ಲಿ ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್ ಮೂಲಗಳ ಪ್ರಕಾರ ತಿಳಿದುಬಂದಿದೆ.