ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣದ ಹಿನ್ನೆಲೆ ವಜಾಗೊಂಡಿರುವ 26 ಸಾವಿರ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಸಿಬಿಐ ವಿಚಾರಣೆಗೊಳಿಸುವ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಕೆಲವು ದಿನಗಳ ಹಿಂದೆ ಅಕ್ರಮವಾಗಿ ನೇಮಕಗೊಂಡಿರುವ ಹಿನ್ನೆಲೆ 26 ಸಾವಿರ ಶಿಕ್ಷಕರನ್ನು ಕಲ್ಕತ್ತಾ ಹೈಕೋರ್ಟ್ ವಜಾಗೊಳಿಸಿ ಸಿಬಿಐ ತಿನಿಖೆಗೊಳಪಡಿಸುವಂತೆ ಆದೇಶಿಸಿತ್ತು.
“ರಾಜ್ಯ ಸರ್ಕಾರದ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆಗೊಳಪಡಿಸುವ ನಿರ್ದೇಶನಕ್ಕೆ ನಾವು ತಡೆ ನೀಡುತ್ತೇವೆ” ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಹಾಗೂ ನ್ಯಾಯಮೂರ್ತಿ ಮನೋಜ್ ಮಿಶ್ರಾ ನೇತೃತ್ವದ ಪೀಠ ತೀರ್ಪು ನೀಡಿದೆ.
ಏ.22 ರಂದು ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದಿಂದ ರಚಿಸಲಾಗಿದ್ದ 2016ರ ಶಾಲಾ ಶಿಕ್ಷಕ ನೇಮಕಾತಿ ಮಂಡಳಿಯನ್ನು ಉದ್ಯೋಗ ಹಗರಣದ ಹಿನ್ನೆಲೆಯಲ್ಲಿ ಸುಮಾರು 24 ಸಾವಿರ ಉದ್ಯೋಗಗಳನ್ನು ಕಲ್ಕತ್ತ ಹೈಕೋರ್ಟ್ ರದ್ದುಗೊಳಿಸಿತ್ತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಳ್ಳುಗಾರರನ್ನು ಸೋಲಿಸುವ ಸಮಯ ಬಂದಿದೆ; ಮತದಾರರೇ ಮುಂದಾಗಬೇಕಿದೆ
ನ್ಯಾಯಮೂರ್ತಿಗಳಾದ ದೇಬಾಂಗ್ಸು ಬಾಸಕ್ ಹಾಗೂ ಎಂ ಡಿ ಶಬ್ಬೀರ್ ರಶ್ದಿ ನೇತೃತ್ವದ ಪೀಠ ವಿಚಾರಣೆಯ ಸಂದರ್ಭದಲ್ಲಿ ಅಕ್ರಮವಾಗಿ ನೇಮಕಗೊಂಡಿದ್ದ ಶಾಲಾ ಶಿಕ್ಷಕರು ನಾಲ್ಕು ವಾರಗಳೊಳಗೆ ತಮ್ಮ ವೇತನವನ್ನು ವಾಪಸ್ ನೀಡಬೇಕೆಂದು ನಿರ್ದೇಶಿಸಿತ್ತು. ಶಿಕ್ಷಕರಿಂದ ಹಣ ವಾಪಸ್ ಪಡೆಯುವ ಜವಾಬ್ದಾರಿಯನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಗೆ ನೀಡಲಾಗಿತ್ತು.
ನೇಮಕಾತಿ ಸಮಿತಿಯಿಂದ ರದ್ದುಗೊಂಡವರಲ್ಲಿ ಬೋಧಕೇತರ ಸಿಬ್ಬಂದಿ ಕೂಡ ಸೇರಿದ್ದು,2016ರಲ್ಲಿ ಶಾಲಾ ಶಿಕ್ಷಕ ನೇಮಕಾತಿ ಮಂಡಳಿಯ ಮೂಲಕ ಹಲವು ರಾಜ್ಯ ಸರ್ಕಾರಗಳಿಗೆ ಹಾಗೂ ಅನುದಾನ ಸಹಿತ ಶಾಲೆಗಳಿಗೆ ಶಿಕ್ಷಕರಾಗಿ ನೇಮಕಗೊಂಡಿದ್ದರು. ಒಎಂಆರ್ ಶೀಟ್‌ಗಳ ಮೂಲಕ ಅಕ್ರಮವೆಸಗಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿತ್ತು.
ನ್ಯಾಯಪೀಠವು ನೇಮಕಾತಿಯ ಸಂದರ್ಭದಲ್ಲಿ ಕೈಗೊಳ್ಳಲಾಗಿದ್ದ 23 ಒಎಂಆರ್ ಶೀಟ್‌ಗಳನ್ನು ಮರು ಮೌಲ್ಯಮಾಪನಗೊಳಿಸಬೇಕೆಂದು ಆದೇಶಿಸಿತ್ತು.
