ಪೆನ್‌ಡ್ರೈವ್ ಪ್ರಕರಣ | ಬಿಜೆಪಿ, ಎನ್‌ಡಿಎ ಮೈತ್ರಿ ನಿಲುವೇನು: ಡಿಸಿಎಂ ಡಿ ಕೆ ಶಿವಕುಮಾರ್ ಪ್ರಶ್ನೆ

Date:

Advertisements

“ಪೆನ್‌ಡ್ರೈವ್ ವಿಚಾರದಲ್ಲಿ ನಾವು ಜೆಡಿಎಸ್ ಪಕ್ಷದವರನ್ನು ಪ್ರಶ್ನೆ ಮಾಡುವುದಿಲ್ಲ. ಬಿಜೆಪಿ ಹಾಗೂ ಈ ವಿಚಾರದಲ್ಲಿ ಎನ್‌ಡಿಎ ನಿಲುವೇನು ಎಂದು ತಿಳಿಸಬೇಕು” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಕೇಳಿದರು.

ಬೆಳಗಾವಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಿರುವುದು ಅವರ ಪಕ್ಷ ಹಾಗೂ ಕುಟುಂಬದ ವಿಚಾರ. ಆದರೆ ಈ ಹಗರಣದ ಹಿನ್ನೆಲೆಯಲ್ಲಿ ಮೈತ್ರಿ ಬಗ್ಗೆ ತಮ್ಮ ನಿಲುವೇನು ಎಂಬುದರ ಬಗ್ಗೆ ಬಿಜೆಪಿ ಹಾಗೂ ಎನ್‌ಡಿಎ ನಾಯಕರು ಉತ್ತರ ನೀಡಬೇಕು” ಎಂದರು.

ಪೆನ್‌ಡ್ರೈವ್ ವಿಚಾರವಾಗಿ ತನಿಖೆಯಾಗಲಿ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, “ಈ ವಿಚಾರ ನಮ್ಮ ನಿಯಂತ್ರಣದಲ್ಲಿ ಇಲ್ಲ. ಏನೇ ಇದ್ದರು ತನಿಖಾಧಿಕಾರಿಗಳು ತೀರ್ಮಾನ ಮಾಡುತ್ತಾರೆ. ಈ ವಿಚಾರದಲ್ಲಿ ಬಿಜೆಪಿ ನಾಯಕರಾದ ಆರ್.ಅಶೋಕ್, ವಿಜಯೇಂದ್ರ ನುಣುಚಿಕೊಳ್ಳಬಾರದು. ಕುಮಾರಸ್ವಾಮಿ, ಅವರ ಕುಟುಂಬ ಹಾಗೂ ಅವರ ಪಕ್ಷದವರು ಏನಾದರೂ ಮಾಡಿಕೊಳ್ಳಲಿ” ಎಂದರು.

Advertisements

ಪ್ರಜ್ವಲ್ ರೇವಣ್ಣ ಪರಾರಿಯಾಗಿರುವ ಬಗ್ಗೆ ಕೇಳಿದಾಗ, “ಪ್ರಜ್ವಲ್ ರೇವಣ್ಣ ಅವರ ವಿಚಾರವನ್ನು ತನಿಖಾಧಿಕಾರಿಗಳು ನೋಡಿಕೊಳ್ಳುತ್ತಾರೆ. ಈ ಬಗ್ಗೆ ನೀವು ನನ್ನನ್ನು ಪ್ರಶ್ನಿಸುವ ಬದಲು ಬಿಜೆಪಿ ನಾಯಕರನ್ನು ಪ್ರಶ್ನಿಸಿ. ಈ ಭಾಗದ ಬಿಜೆಪಿ ನಾಯಕರ ನಿಲುವು ಏನು ಎಂದು ತಿಳಿಸಲಿ” ಎಂದರು.

ಬೆಳಗಾವಿಯಲ್ಲಿ ಭಾನುವಾರ ಮಾತನಾಡಿದ್ದ ಪ್ರಧಾನಮಂತ್ರಿಗಳು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಾಶವಾಗಿದೆ ಎಂದು ಆರೋಪಿಸಿದ್ದ ಬಗ್ಗೆ ಕೇಳಿದಾಗ, “ಪ್ರಧಾನಮಂತ್ರಿಗಳು ಯಾವ ರೀತಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದನ್ನು ಸ್ಪಷ್ಟಪಡಿಸಬೇಕು. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮ ರಾಜ್ಯದ ಕಾನೂನು ಸುವ್ಯವಸ್ಥೆ ಅತ್ಯುತ್ತಮವಾಗಿದೆ. ಈ ಕಾರಣಕ್ಕೆ ನಮ್ಮ ರಾಜ್ಯಕ್ಕೆ ಜನ ಬಹಳ ಉತ್ಸುಕತೆಯಿಂದ ಬರುತ್ತಿದ್ದಾರೆ. ಈ ಕಾರಣಕ್ಕೆ ವಾಜಪೇಯಿ ಅವರು ವಿಶ್ವದ ನಾಯಕರು ಮೊದಲು ಬೆಂಗಳೂರಿಗೆ ಬಂದು ನಂತರ ಭಾರತದ ಇತರೆ ನಗರಗಳಿಗೆ ಹೋಗುತ್ತಿದ್ದಾರೆ ಎಂದಿದ್ದರು. ನಿಮಗೆ ಮತ ಸಿಗಲಿಲ್ಲ ಎಂದು ಕರ್ನಾಟಕ ರಾಜ್ಯದ ಬಗ್ಗೆ ಸುಳ್ಳು ಮಾತನಾಡಿದರೆ ಅದು ಭಾರತಕ್ಕೆ ಮಾಡುವ ಅಪಮಾನ. ವಿದೇಶಿಗರು ಕರ್ನಾಟಕದ ಮೂಲಕ ಭಾರತವನ್ನು ನೋಡುತ್ತಿದ್ದಾರೆ. ದೇಶದಲ್ಲೇ ಅತ್ಯುತ್ತಮ ಆಡಳಿತ ಹಾಗೂ ಪೊಲೀಸ್ ವ್ಯವಸ್ಥೆ ಇರುವ ರಾಜ್ಯ ಕರ್ನಾಟಕ” ಎಂದರು.

ಇದನ್ನು ಓದಿದ್ದೀರಾ? Fact Check | BJP ನಾಯಕನ ಅಶ್ಲೀಲ ಚಿತ್ರವನ್ನು ಡಿಕೆಶಿ ಅವರದ್ದೆಂದು ತಪ್ಪಾಗಿ ಹಂಚಿಕೊಂಡ ಜೆಡಿಎಸ್‌ ಹೆಸರಿನ ಪೇಜ್

“ಕಾಂಗ್ರೆಸ್ ಪಕ್ಷ ದಕ್ಷಿಣ ಭಾಗದ ಕ್ಷೇತ್ರಗಳಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲಿದ್ದು, ಉತ್ತರ ಭಾಗದ ಕ್ಷೇತ್ರಗಳಲ್ಲೂ ಭರ್ಜರಿ ಜಯ ಸಾಧಿಸಲಿದೆ. ಉತ್ತರ ಕ್ಷೇತ್ರಗಳಲ್ಲಿ ಜನ ನಮಗೆ ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ. ಸಂಸತ್ ಸ್ಥಾನಗಳಲ್ಲಿ ನಾವು ಈ ಹಿಂದಿನ ದಾಖಲೆ ಮುರಿಯುತ್ತೇವೆ” ಎಂದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X