ಟ್ವಿಟರ್‌ ಖಾತೆ ನಿರ್ಬಂಧಕ್ಕೆ ಒತ್ತಾಯ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

Date:

Advertisements
  • 39 ಯುಆರ್‌ಎಲ್‌ಗಳನ್ನು ತೆಗೆದು ಹಾಕುವಂತೆ ಕೇಂದ್ರ ಸರ್ಕಾರದಿಂದ ಆದೇಶ
  • ಕೇಂದ್ರ ಸರ್ಕಾರದ ಆದೇಶ ಪ್ರಶ್ನಿಸಿ, ಹೈಕೋರ್ಟ್‌ ಮೊರೆ ಹೋಗಿದ್ದ ಟ್ವಿಟರ್

ಕೆಲವು ಸಂದರ್ಭಗಳಲ್ಲಿ ವ್ಯಕ್ತಿಗತವಾಗಿ ಖಾತೆಗಳನ್ನು ನಿಷೇಧಿಸುವಂತೆ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯು ಜಾರಿ ಮಾಡಿರುವ ನಿರ್ಬಂಧ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್‌ ಕಂಪನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಕಾಯ್ದಿರಿಸಿದೆ.

2021ರ ಫೆ. 2022ರ ಫೆ.ವರೆಗೆ 39 ಯುಆರ್‌ಎಲ್‌ಗಳನ್ನು ಮತ್ತು 10 ನಿರ್ಬಂಧ ಆದೇಶಗಳನ್ನು ಕೇಂದ್ರ ಸರ್ಕಾರ ಟ್ವಿಟರ್‌ ಕಂಪನಿಗೆ ನೀಡಿತ್ತು ಮತ್ತು ಅವುಗಳನ್ನು ತೆಗೆದು ಹಾಕುವಂತೆ ನಿರ್ದೇಶಿಸಿತ್ತು. ಕೇಂದ್ರ ಸರ್ಕಾರದ ಒತ್ತಡದ ಕುರಿತು ಅಸಮಧಾನ ವ್ಯಕ್ತಪಡಿಸಿದ್ದ ಟ್ವಿಟರ್‌ ಕಂಪನಿ 1,474 ಖಾತೆಗಳು ಮತ್ತು 175 ಟ್ವೀಟ್‌ಗಳ ಪೈಕಿ 39 ಯುಆರ್‌ಎಲ್‌ಗಳನ್ನು ನಿರ್ಬಂಧಿಸುವ ಆದೇಶವನ್ನು ಮಾತ್ರ ಪ್ರಶ್ನಿಸಿತ್ತು.

ಟ್ವಿಟರ್‌ ಸಲ್ಲಿಸಿರುವ ಅರ್ಜಿಯನ್ನು ವಿರೋಧಿಸಿ ಕೇಂದ್ರ ಸರ್ಕಾರದ ಪರ ವಾದ ಮಂಡಿಸುತ್ತಿರುವ ವಕೀಲರು, “ಟ್ವಿಟರ್ ತನ್ನ ಬಳಕೆದಾರರ ಪರವಾಗಿ ಸಮರ್ಥಿಸಿಕೊಳ್ಳುವ ಹಕ್ಕನ್ನು ಹೊಂದಿಲ್ಲ. ಅವರು ಹೀಗೆ ಮಾಡಲು ಶಾಸನದ ಬೆಂಬಲ ಅಗತ್ಯವಿದೆ. ಪ್ರಕರಣದಲ್ಲಿ ಹಾಜರಾಗುವ ಹಕ್ಕಿನ ವಿಷಯವನ್ನು ಪರಿಗಣಿಸುವುದಾದರೆ ಟ್ವಿಟರ್‌ ಪ್ರಕರಣದಲ್ಲಿ ಬಾದಿತ ಪಕ್ಷಕಾರನೇ? ಎಂಬ ಪ್ರಶ್ನೆ ಮೂಡುತ್ತದೆ” ಎಂದು ತಿಳಿಸಿತ್ತು.

Advertisements

ಮುಂದುವರೆದು, “ಟ್ವಿಟರ್‌ ತನ್ನ ಎಲ್ಲ ಬಳಕೆದಾರರನ್ನು ಬೆಂಬಲಿಸುತ್ತದೆಯೇ? ಟ್ವಿಟರ್‌ ಮತ್ತು ಅದನ್ನು ಬಳಸುವ ಬಳಕೆದಾರರ ನಡುವೆ ಯಾವುದೇ ಸದಸ್ಯತ್ವ ಅಥವಾ ಸಂಬಂಧದ ಉದ್ಭವಿಸುವ ಪ್ರಶ್ನೆಯೇ ಬರುವುದಿಲ್ಲ. ಕೇಂದ್ರ ಸರ್ಕಾರವು ಸ್ವೇಚ್ಛೆಯಿಂದ ನಡೆದುಕೊಂಡಾಗ ಮಾತ್ರ ಸಂವಿಧಾನದ 14ನೇ ವಿಧಿ ಅಡಿಯಲ್ಲಿ ತನ್ನ ಹಕ್ಕುನ್ನು ಉಲ್ಲಂಘನೆ ಮಾಡಿದಂತಾಗುತ್ತದೆ. ಆಗ ಮಾತ್ರ ಅದನ್ನು ಉಲ್ಲೇಖಿಸಿ ಟ್ವಿಟರ್‌ ನ್ಯಾಯಾಲಯದ ಕದತಟ್ಟಬಹುದು” ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿದ್ದರು.

ಟ್ವಿಟರ್‌ ಪರ ವಾದ ಮಂಡಿಸಿದ ವಕೀಲರು, “ಟ್ವಿಟರ್‌ನಲ್ಲಿ ವ್ಯಕ್ತಿಗತವಾಗಿ ಹೊಂದಿರುವ ಸಾವಿರಾರು ಖಾತೆಗಳನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರವು ನಮಗೆ ಒತ್ತಾಯಿಸಿ ಆದೇಶ ಮಾಡಿದೆ. ಕಾನೂನಿನ ಪ್ರಕಾರ ನಾವು ಸರ್ಕಾರದ ಆದೇಶವನ್ನು ಪಾಲಿಸಬೇಕು. ಆದರೆ, ತಮ್ಮ ಟ್ವಿಟರ್‌ ಹ್ಯಾಂಡಲ್‌ ನಿರ್ಬಂಧವಾದುದ್ದಕ್ಕೆ ವ್ಯಕ್ತಿಗತವಾಗಿ ಬಳಕೆದಾರರಿಗೆ ಯಾವುದೇ ಆಶ್ರಯ ಅಥವಾ ಪರಿಹಾರ ಇರುವುದಿಲ್ಲ” ಎಂದು ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ? : ಈ ಸುದ್ದಿ ಓದಿದ್ದೀರಾ? : ಬೆಂಗಳೂರು-ಸೇಲಂ ಮಾರ್ಗದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು

“ಕೇಂದ್ರ ಸರ್ಕಾರದಂತೆ ನಾವು ನಡೆದುಕೊಂಡರೇ, ಟ್ವಿಟರ್‌ ಬಳಕೆ ಮಾಡುವವವರ ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ದಕ್ಕೆ ತಂದಂತಾಗುತ್ತದೆ. ನಿರ್ಬಂಧ ಆದೇಶ ಮತ್ತು ಜಾರಿಯು ಗೌಪ್ಯವಾಗಿರಬೇಕು ಎಂದು ಹೇಳಲಾಗಿರುವುದರಿಂದ ನಾವು ಅದನ್ನು ಬಹಿರಂಗಪಡಿಸಿಲ್ಲ. ಈ ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದ್ದೇವೆ. 1000ಕ್ಕೂ ಅಧಿಕ ಟ್ವಿಟರ್‌ ಖಾತೆಗಳನ್ನು ನಿರ್ಬಂಧಿಸುವಂತೆ ಸರ್ಕಾರ ಆದೇಶ ಮಾಡಿದೆ. ಇದಕ್ಕೆ ಯಾವುದೇ ಸಕಾರಣ ನೀಡಿಲ್ಲ” ಎಂದು ಮನವರಿಕೆ ಮಾಡಿದ್ದರು.

“ಟ್ವಿಟರ್‌ ಬಳಕೆದಾರರ ಖಾತೆಯನ್ನು ಏತಕ್ಕಾಗಿ ನಿರ್ಬಂಧಿಸಬೇಕು ಎಂಬುದಕ್ಕೆ ಕೇಂದ್ರ ಸರ್ಕಾರವು ಸರಿಯಾದ ಕಾರಣ ನೀಡಬೇಕು. ಒಂದು ವೇಳೆ ಕೇಂದ್ರ ಸರ್ಕಾರದ ಆದೇಶ ಪಾಲಿಸಿದರೆ ಟ್ವಿಟರ್‌ ಉದ್ಯಮಕ್ಕೆ ಹಾನಿ ಉಂಟಾಗುತ್ತದೆ. ಹೀಗಾಗಿ ನಾವು ನ್ಯಾಯಾಲಯದ ಮೆಟ್ಟಿಲೇರಿದ್ದು, ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿರುವ ಒಂದು ಮಾದರಿಯನ್ನು ನ್ಯಾಯಾಲಯ ಪರಿಶೀಲಿಸಬಹುದು” ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರ ಮತ್ತು ಟ್ವಿಟರ್‌ ಪರವಾಗಿ ಮಂಡಿಸಿದ ವಾದಗಳನ್ನು ವಿಸ್ತೃತವಾಗಿ ಆಲಿಸಿದ ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಆದೇಶ ಕಾಯ್ದಿರಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X