ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಕಾರಣ ಸೋಮವಾರ (ಏಪ್ರಿಲ್ 29) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ.
91 ವರ್ಷ ವಯಸ್ಸಿನ ಎಸ್.ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಏಪ್ರಿಲ್ 22ರಂದು ಕೂಡಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜ್ವರ, ಕೆಮ್ಮು ಕಾಣಿಸಿಕೊಂಡ ಬಳಿಕ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದರು.
ಇದನ್ನು ಓದಿದ್ದೀರಾ? ಆರೋಗ್ಯದಲ್ಲಿ ದಿಢೀರ್ ಏರುಪೇರು: ಬಿಗ್‌ಬಿ ಅಮಿತಾಭ್ ಬಚ್ಚನ್ ಆಸ್ಪತ್ರೆಗೆ ದಾಖಲು
ಇದಾದ ಕೆಲವೇ ದಿನಗಳ ಬಳಿಕ ಮತ್ತೆ ಎಸ್.ಎಂ ಕೃಷ್ಣ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಮಾಜಿ ಸಿಎಂ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಡಾ. ಸತ್ಯನಾರಾಯಣ ಮೈಸೂರು ಮತ್ತು ವೈದ್ಯಕೀಯ ತಜ್ಞರ ತಂಡವು ಎಸ್.ಎಂ ಕೃಷ್ಣ ಅವರಿಗೆ ಚಿಕಿತ್ಸೆ ನೀಡುತ್ತಿದ್ದು ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಮಣಿಪಾಲ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.