ಬಿಜೆಪಿಗೆ ಮಾರಾಟವಾಗಲು ನಿರಾಕರಿಸಿದ್ದಕ್ಕೆ ಜೈಲಿನಲ್ಲಿ ಹೊಡೆದು, ಚಿತ್ರಹಿಂಸೆ ನೀಡಿದರು: ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ

Date:

Advertisements

ಬಿಜೆಪಿ ಸೇರಲು ಮತ್ತು ಮಾರಾಟವಾಗಲು ನಿರಾಕರಿಸಿದ್ದಕ್ಕಾಗಿ ಜೈಲಿನಲ್ಲಿ ನನಗೆ ಹೊಡೆದು, ಚಿತ್ರಹಿಂಸೆ ನೀಡಲಾಯಿತು ಎಂದು ರಾಜ್ಯಸಭಾ ಸದಸ್ಯ, ಟಿಎಂಸಿ ನಾಯಕ ಸಾಕೇತ್ ಗೋಖಲೆ ಹೇಳಿದ್ದಾರೆ.

ಹಿರಿಯ ವಕೀಲ ಕಪಿಲ್ ಸಿಬಲ್‌ ಅವರೊಂದಿಗೆ ತಮ್ಮ ನೋವನ್ನು ಹಂಚಿಕೊಂಡಿರುವ ಸಾಕೇತ್ ಗೋಖಲೆ, ಸುಮಾರು ಒಂದು ವರ್ಷ ತಾವು ಜೈಲಿನಲ್ಲಿ ಅನುಭವಿಸಿದ ಸಂಕಷ್ಟಗಳ ಬಗ್ಗೆ ವಿವರಿಸಿದ್ದಾರೆ. ಜೊತೆಗೆ, ಬಿಜೆಪಿ ಮತ್ತು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಅಡಳಿತದಲ್ಲಿ ವಿಪಕ್ಷಗಳ ನಾಯಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅವರು ಬಿಚ್ಚಿಟ್ಟಿದ್ದಾರೆ.

“ನಾನು ಬಿಜೆಪಿಗೆ ಮಾರಾಟವಾಗಲು ಮತ್ತು ಸೇರಲು ನಿರಾಕರಿಸಿದ್ದೆ. ಆದ್ದರಿಂದ ನನಗೆ ಜೈಲಿನಲ್ಲಿ ಹೊಡೆದು ಚಿತ್ರಹಿಂಸೆ ನೀಡಲಾಯಿತು. ಇದು ನನ್ನೊಬ್ಬನ ಕುರಿತಾದುದ್ದಲ್ಲ” ಎಂದು ಅವರು ಹೇಳಿದ್ದಾರೆ.

Advertisements

“ಇಂತಹ ಹಿಂಸೆಗಳು ನನಗೆ ಮಾತ್ರವಲ್ಲ ಅಥವಾ ನಾನೊಂದು ನಿದರ್ಶನವೂ ಅಲ್ಲ. ಆದರೆ, ಭಾರತೀಯ ರಾಜಕೀಯದಲ್ಲಿ ಹೆಚ್ಚುತ್ತಿರುವ ಸರ್ವಾಧಿಕಾರಿದ ಲಕ್ಷಣವನ್ನು ನಾನು ಎದುರಿಸಿದ ಸಂಕಷ್ಟಗಳು ಎತ್ತಿ ತೋರಿಸುತ್ತವೆ” ಎಂದಿದ್ದಾರೆ.

“ಪ್ರಜಾಪ್ರಭುತ್ವದ ತತ್ವಗಳ ಅವನತಿ ಎದುರಾಗುತ್ತಿದೆ. ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಮೋದಿ ಮತ್ತು ಬಿಜೆಪಿಯಿಂದ ಪ್ರತಿಪಕ್ಷಗಳ ಮೇಲೆ ದಾಳಿ ಮಾಡುತ್ತಿದೆ. ಇದನ್ನು ಭಾರತದ ಜನರಿಗೆ ಅರ್ಥ ಮಾಡಿಸಲು ನಾನು ಹೇಳುತ್ತಿದ್ದೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

“ಮೋದಿಯವರ ದಾಳಿಗೆ ಒಳಗಾದ ನಮ್ಮ ಪ್ರಜಾಪ್ರಭುತ್ವವನ್ನು ಉಳಿಸಲು ನಾವು ಈಗಲೇ ಎಚ್ಚೆತ್ತು ನಿಲ್ಲದಿದ್ದರೆ, ನಾವು ಸರ್ವಾಧಿಕಾರ ದೇಶದನ್ನು ಆಳಲು ಆರಂಭಿಸುತ್ತದೆ” ಎಂದು ಅವರು ವಿವರಿಸಿದ್ದಾರೆ.

ಕ್ರೌಡ್ ಫಂಡ್ ಮಾಡಿದ ಹಣವನ್ನು ವೈಯಕ್ತಿಕ ಬಳಕೆಗಾಗಿ ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಗೋಖಲೆ ಅವರನ್ನು ಬಂಧಿಸಿ, ಜೈಲಿನಲ್ಲಿರಿಸಲಾಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X