ಹಾಸನ | ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ

Date:

Advertisements

ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯ ಸ್ಲಂ ಮಹಿಳಾ ಘಟಕ ಪ್ರತಿಭಟನೆ ನಡೆಸಿದೆ.

ಪ್ರತಿಭಟನೆ ನೇತೃತ್ವವಹಿಸಿ ಮಹಿಳಾ ಘಟಕದ ಸಂಚಾಲಕರಾದ ಅನುಪಮ ಮಾತನಾಡಿ, ಪ್ರಜ್ವಲ್ ಕರ್ಮಕಾಂಡ ಮೊದಲೇ ಗೊತ್ತಿದ್ದರು ಹಾಸನದಿಂದ ಲೋಕಸಭೆ ಸ್ಪರ್ಧಿಸಲು ಅವಕಾಶ ನೀಡಿದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಹೆಣ್ಣು ಮಕ್ಕಳಿಗೆ ದ್ರೋಹ ಬಗೆದಿವೆ, ತಾಳಿ ಬಗ್ಗೆ ಮಾತನಾಡುವ ಪ್ರಧಾನಿಗಳು ಈ ಪ್ರಕರಣದ ಬಗ್ಗೆ ಮೌನವಹಿಸಿರುವುದು ಏಕೆ? ಮಂಗಳಸೂತ್ರ ಬರೀ ಮಾತಿಗಾಗಿ ಅಥವಾ ರಾಜಕಾರಣಕ್ಕೆ ಬಳಸಿಕೊಳ್ಳುವುದು ಎಷ್ಟು ಸರಿ. ತಕ್ಷಣ ಚುನಾವಣಾ ಆಯೋಗ ಈ ಪ್ರಕರಣದ ಬಗ್ಗೆ ಮಧ್ಯೆ ಪ್ರವೇಶ ಮಾಡಬೇಕೆಂದು ಆಗ್ರಹಿಸಿದರು.

ಬೆಳಗುಂಬ ರಸ್ತೆಯ ಸ್ಲಂ ಭವನದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಪ್ರಜ್ವಲ್ ಪೆನ್‌ಡ್ರೖವ್  ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದ್ದು ಕೂಡಲೇ ಅವರನ್ನು ಬಂಧಿಸಿ ದೌರ್ಜನ್ಯಕ್ಕೆ ಒಳಗಾದ ಹಾಗೂ ಸಾವಿರಾರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯನಡೆಸಿರುವ ಆರೋಪದ ಹಿನ್ನಲೆಯಲ್ಲಿ ಮಹಿಳಾ ಆಯೋಗದ ಶಿಫಾರಸಿನ ಮೇಲೆ ರಾಜ್ಯ ಸರ್ಕಾರ ಕ್ರಮವಹಿಸಿರುವುದನ್ನು ಸಂಘಟನೆ ಸ್ವಾಗತಿಸುತ್ತದೆ ಎಂದರು.

Advertisements

ಆದರೆ, ಆರೋಪಿಗೆ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಪ್ರಮುಖ ರಾಜಕಾರಣಿಗಳ ಬೆಂಬಲವಿರುವುದರಿಂದ ಈಗಾಗಲೇ ವಿದೇಶಕ್ಕೆ ಪಲಾಯನಗೊಂಡಿದ್ದು ತಕ್ಷಣವೇ ಎಸ್‌ಐಟಿ ಬಂಧಿಸಿ ನೊಂದ ಮಹಿಳೆಯರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಸ್ಲಂ ಮಹಿಳಾ ಸಮಿತಿ ಆಗ್ರಹಿಸಿದೆ.

ಪ್ರತಿಭಟನೆಯಲ್ಲಿ ಸ್ಲಂ ಸಮಿತಿಯ ಕಾರ್ಯದರ್ಶಿ ಅರುಣ್, ತಿರುಮಲಯ್ಯ ಪದಾಧಿಕಾರಿಗಳಾದ ಮಂಗಳಮ್ಮ, ಪೂರ್ಣಿಮಾ, ಸಂದ್ಯಾಯಾದವ್, ಹನುಮಕ್ಕ, ಶಾರದಮ್ಮ, ಗಂಗಾ, ಸುಧಾ, ಪಾರ್ವತಮ್ಮ, ವಸಂತಮ್ಮ, ದೇವಿಕಾ, ಶಾಂತಮ್ಮ, ಮುಂತಾದವರು ಪಾಲ್ಗೊಂಡಿದದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X