ದೆಹಲಿಯಲ್ಲಿ ಎಎಪಿ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿರುವುದಕ್ಕೆ ಕಾಂಗ್ರೆಸ್‌ನಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಇತ್ತೀಚೆಗೆ, ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ, ದೆಹಲಿಯ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಪಕ್ಷ ತೊರೆದಿದ್ದಾರೆ.
ದೆಹಲಿಯ ಮಾಜಿ ಶಾಸಕರಾದ ನೀರಜ್ ಬಸೋಯಾ, ನಸ್ಸೆಬ್ ಸಿಂಗ್ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ತಮ್ಮ ನಿರ್ಧಾರಕ್ಕೆ ಎಎಪಿ ಜೊತೆಗಿನ ಮೈತ್ರಿಯೇ ಕಾರಣ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ನೀರಜ್ ಬಸೋಯ ಅವರು ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಳುಹಿಸಿದ್ದಾರೆ.
“ಕಳೆದ 7 ವರ್ಷಗಳಲ್ಲಿ ಎಎಪಿ ಹಲವಾರು ಹಗರಣಗಳಲ್ಲಿ ಭಾಗಿಯಾಗಿದೆ ಎಂಬ ಆರೋಪಗಳಿವೆ. ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್, ಸತ್ಯೇಂದ್ರ ಜೈನ್ ಮತ್ತು ಮನೀಶ್ ಸಿಸೋಡಿಯಾ ಈಗಾಗಲೇ ಜೈಲಿನಲ್ಲಿದ್ದಾರೆ. ದೆಹಲಿ ಅಬಕಾರಿ ನೀತಿ ಹಗರಣ ಮತ್ತು ದೆಹಲಿ ಜಲ್ ಬೋರ್ಡ್ ಹಗರಣದಂತಹ ವಿವಿಧ ವಿಷಯಗಳಲ್ಲಿ ಎಎಪಿ ವಿರುದ್ಧ ಗಂಭೀರ ಭ್ರಷ್ಟಾಚಾರದ ಆರೋಪಗಳಿವೆ. ಅಂತಹ ಪಕ್ಷದೊಂದಿಗಿನ ಮೈತ್ರಿ ಅತ್ಯಂತ ಅವಮಾನಕರ” ಎಂದು ಬಸೋಯಾ ತಮ್ಮ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.