ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರುವ ಬದಲು ಪಕ್ಷೇತರರಾಗಬಹುದಿತ್ತು : ಬಿ ವೈ ವಿಜಯೇಂದ್ರ

Date:

Advertisements
  • ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಗೆ ವಿಜಯೇಂದ್ರ ಬೇಸರ
  • ಯಡಿಯೂರಪ್ಪ ಕೇವಲ ವ್ಯಕ್ತಿಯಲ್ಲ ಒಂದು ಶಕ್ತಿ ಎಂದ ಬಿವೈವಿ

ಲಿಂಗಾಯತ ವೀರಶೈವರೆಂದು ಜಾತಿ ಒಡೆಯಲು ಹೋದ ಕಾಂಗ್ರೆಸ್ ಪಕ್ಷ ಸೇರುವ ಬದಲು ಜಗದೀಶ್ ಶೆಟ್ಟರ್ ಪಕ್ಷೇತರರಾಗಬಹುದಿತ್ತು ಎಂದು ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ಮೈಸೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಶೆಟ್ಟರ್ ಹಿರಿಯರು ಅವರ ಬಗ್ಗೆ ಕೀಳಾಗಿ ಮಾತನಾಡುವುದಿಲ್ಲ. ಆದರೆ ವೀರೇಂದ್ರ ಪಾಟೀಲ್ ಅವರಂತಹ ದೊಡ್ಡ ನಾಯಕರನ್ನೇ ಸರಿಯಾಗಿ ನಡೆಸಿಕೊಳ್ಳದ ಕಾಂಗ್ರೆಸ್ ಇವರಿಗೇನು ಸ್ಥಾನಮಾನ ಕೊಡುತ್ತದೆಂದು ಆ ಪಕ್ಷ ಸೇರಿದರೋ ತಿಳಿಯದು ಎಂದರು.

ಅವರು ಕಾಂಗ್ರೆಸ್ ಸೇರಿದ್ದರ ಬಗ್ಗೆ ನೋವಿದೆ. ಬೇರೆ ಬೇರೆ ಜಾತಿಗಳನ್ನು ಒಡೆಯಲು ಪ್ರಯತ್ನಿಸಿದ್ದ ಕಾಂಗ್ರೆಸ್ ಪಕ್ಷವನ್ನ ಜಗದೀಶ್ ಶೆಟ್ಟರ್ ಸೇರಿದ್ದು ನಿಜಕ್ಕೂ ದುರಂತ. ಸಮಾಜ ಸಮಾಜಗಳನ್ನು ಒಡೆದು ಬೆಂಕಿ ಹಾಕುವ ಪಕ್ಷ ಕಾಂಗ್ರೆಸ್ ಎಂದು ಕಿಡಿಕಾರಿದರು.

Advertisements

ಇನ್ನು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶದಲ್ಲಿ ಕಾಂಗ್ರೆಸ್ ಪಕ್ಷ ದಿವಾಳಿಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಹೈಕಮಾಂಡ್‌ಗೆ ಎಟಿಎಂ ಆಗಲು ಪಿತೂರಿ ನಡೆಸಿದೆ. ಇದಕ್ಕೆ ರಾಜ್ಯದ ಜನ ಅವಕಾಶ ನೀಡುವುದಿಲ್ಲ ಎಂದರು.

ಯಡಿಯೂರಪ್ಪ, ಕಾಮನ್ ಮ್ಯಾನ್ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಡಿದ ಅಭಿವೃದ್ಧಿ ಕೆಲಸ ಬಿಜೆಪಿಗೆ ಸ್ಪಷ್ಟ ಬಹುಮತ ತಂದು ಕೊಡುತ್ತದೆ. ಬಿಜೆಪಿ ಒಬ್ಬರು ಇಬ್ಬರ ಮೇಲೆ ಡಿಪೆಂಡ್ ಆಗಿಲ್ಲ. ಇದು ಕಾರ್ಯಕರ್ತರ ಪಕ್ಷ ಎಂದರು.

ಇನ್ನು ತಮ್ಮ ತಂದೆ ಪಕ್ಷದ ಹಿರಿಯ ನಾಯಕ ಬಿಎಸ್‌ವೈ ಅವರನ್ನು ಪಕ್ಷ ಮೂಲೆಗುಂಪು ಮಾಡುತ್ತಿದೆ. ಬಳಸಿ ಬಿಸಾಡುವಂತೆ ನಡೆದುಕೊಳ್ಳುತ್ತದೆ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಯಡಿಯೂರಪ್ಪ ಒಂದು ಶಕ್ತಿ ಇದ್ದಂತೆ. ಅವರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?:“ನಮ್ಮಲ್ಲಿ ಮಾತನಾಡೋಕೆ ಪ್ರತಾಪ್ ಸಿಂಹನಂತವರು ಇದ್ದಾರೆ ನಾನೇಕೆ ಮಾತನಾಡಲಿ” : ಬಿ ಎಲ್ ಸಂತೋಷ್

ಬಳಿಕ ಜೆಡಿಎಸ್ ಮೇಲೂ ವಾಗ್ಪ್ರಹಾರ ನಡೆಸಿದ ಅವರು, ಜೆಡಿಎಸ್ ಪಕ್ಷ ಅತಂತ್ರ ಪರಿಸ್ಥಿತಿ ಕನಸು ಕಾಣುತ್ತಿದೆ. ಪ್ರಜ್ಞಾವಂತ ಮತದಾರರು ಬಿಜೆಪಿಯನ್ನು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುತ್ತಾರೆ ಎಂದರು.

ವರುಣಾ ಕ್ಷೇತ್ರದಲ್ಲಿನ ಪ್ರಚಾರ ಕಾರ್ಯದ ಬಗ್ಗೆ ಮಾತನಾಡಿದ ಬಿಜೆಪಿ ಉಪಾಧ್ಯಕ್ಷರು ವರುಣ ಜನ ನನ್ನನ್ನು ರಾಜ್ಯಕ್ಕೆ ಪರಿಚಯ ಮಾಡಿಸಿದವರು. ವರುಣ ಕ್ಷೇತ್ರದ ಕಾರ್ಯಕರ್ತರ ಸಭೆ ನಡೆಸಿದ್ದೇನೆ. ಈ ಬಾರಿ ವರುಣ ಮತದಾರರು ಬದಲಾವಣೆ ಬಯಸಿದ್ದಾರೆ. ಮತ್ತೆ ವರುಣಗೆ ನಾನು ಪ್ರಚಾರಕ್ಕೆ ಬರುತ್ತೇನೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X