ವಾತಾವರಣದಲ್ಲಿ ಏರುತ್ತಿರುವ ಬಿಸಿ ಗಾಳಿಯ ಕಾರಣದಿಂದಾಗಿ ತೆಲಂಗಾಣ ದಲ್ಲಿ ಲೋಕಸಭೆ ಚುನಾವಣೆಯ ಮತದಾನದ ಸಮಯವನ್ನು ವಿಸ್ತರಿಸಿ ಕೇಂದ್ರ ಚುನಾವಣಾ ಆಯೋಗ ಆದೇಶ ನೀಡಿದೆ.
ಮತದಾನದ ಸಮಯವು ಈ ಮೊದಲು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಇತ್ತು. ಬದಲಾದ ಸಮಯದಲ್ಲಿ ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೂ ವಿಸ್ತರಿಸಲಾಗಿದೆ. ಬಿಸಿ ಗಾಳಿ ಇರುವ ಕಾರಣದಿಂದಾಗಿ ಈ ನಿರ್ಧಾರವು ಚುನಾವಣಾ ಪ್ರಕ್ರಿಯೆಯಲ್ಲಿ ಮತದಾರರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಗುರಿ ಹೊಂದಿದೆ.
“ಬಿಸಿ ಗಾಳಿ ಹಾಗೂ ತಾಪಮಾನ ಹೆಚ್ಚಿರುವುದರಿಂದ ಚುನಾವಣಾ ಪ್ರಕ್ರಿಯೆಯಲ್ಲಿ ಮತದಾರರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ವಿವಿಧ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳ ಮನವಿಯ ಮೇರೆಗೆ ಮುಖ್ಯ ಚುನಾವಣಾ ಅಧಿಕಾರಿಯ ಮನವಿಯನ್ನು ಪರಿಗಣಿಸಲಾಗಿದ್ದು,ತೆಲಂಗಾಣದ 17 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಅವಧಿಯನ್ನು ಒಂದು ಗಂಟೆಗಳ ಕಾಲ ವಿಸ್ತರಿಸಲಾಗಿದೆ” ಎಂದು ಆಯೋಗದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನೋಟಾವನ್ನು ಅಭ್ಯರ್ಥಿಯನ್ನಾಗಿ ಪರಿಗಣಿಸಲು ಇದು ಸಕಾಲ
ತೆಲಂಗಾಣದ ಮುಖ್ಯ ಚುನಾವಣಾ ಅಧಿಕಾರಿ ಕೂಡ ರಾಜ್ಯದಲ್ಲಿ ಮತದಾನದ ಅವಧಿಯನ್ನು ಹೆಚ್ಚಿಸಬೇಕೆಂದು ಮನವಿ ಮಾಡುದ ಕಾರಣ ಕೇಂದ್ರ ಚುನಾವಣಾ ಆಯೋಗ ಈ ನಿರ್ಧಾರ ಕೈಗೊಂಡಿದೆ.
ತೆಲಂಗಾಣದ ಎಲ್ಲ 17 ಲೋಕಸಭಾ ಕ್ಷೇತ್ರಗಳಿಗೆ ಮೇ 13 ರಂದು ಚುನಾವಣೆ ನಡೆಯಲಿದೆ. ಆಡಳಿತರೂಢ ಕಾಂಗ್ರೆಸ್, ವಿಪಕ್ಷ ಬಿಆರ್ಎಸ್, ಬಿಜೆಪಿ ಹಾಗೂ ಎಐಎಂಐಎಂ ಪಕ್ಷಗಳು ಕಣದಲ್ಲಿವೆ.
