ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಗಂಭೀರ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಗೆ ಉತ್ತರ ಪ್ರದೇಶದ ಕೈಸರ್‌ಜಂಗ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿರಾಕರಿಸಿದೆ.
ಈತನ ಪುತ್ರ ಕರಣ್ ಭೂಷಣ್ ಸಿಂಗ್‌ಗೆ ಟಿಕೆಟ್ ನೀಡಲಾಗಿದೆ. 2019ರವರೆಗೆ ಕಳೆದ ಮೂರು ಬಾರಿ ಕೈಸರ್‌ಜಂಗ್ ಕ್ಷೇತ್ರದಿಂದ ಬ್ರಿಜ್ ಭೂಷಣ್ ಸಿಂಗ್‌ಗೆ ಟಿಕೆಟ್ ನೀಡಲಾಗಿತ್ತು. ಮೂರು ಬಾರಿಯೂ ಬ್ರಿಜ್ ಭೂಷಣ್ ಆಯ್ಕೆಯಾಗಿದ್ದ.
ಕರಣ್ ಭೂಷಣ್ ಸಿಂಗ್ ಪ್ರಸ್ತುತ ಉತ್ತರ ಪ್ರದೇಶದ ಕುಸ್ತಿ ಒಕ್ಕೂಟದ ಅಧ್ಯಕ್ಷನಾಗಿದ್ದು, ಉತ್ತರ ಪ್ರದೇಶದ ಗೋಂಡಾದ ಸಹಕಾರಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷನಾಗಿ ಕೂಡ ಕಾರ್ಯನಿರ್ವಹಿಸುತ್ತಿದ್ದಾನೆ.
ಹಾಲಿ ಬಿಜೆಪಿ ಸಂಸದ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಹಲವು ಆರೋಪವೆಸಗಿರುವ ಕಾರಣ ಟಿಕೆಟ್ ನಿರಾಕರಿಸಲಾಗಿದೆ. ಈತ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿ 6 ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪ ಈತನ ಮೇಲಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನೋಟಾವನ್ನು ಅಭ್ಯರ್ಥಿಯನ್ನಾಗಿ ಪರಿಗಣಿಸಲು ಇದು ಸಕಾಲ
ಬ್ರಿಜ್ ಭೂಷಣ್‌ನನ್ನು ಭಾರತೀಯ ಕುಸ್ತಿ ಒಕ್ಕೂಟದಿಂದ ವಜಾಗೊಳಿಸಿ ಕಾನೂನು ಕ್ರಮ ಕೂಗೊಳ್ಳಬೇಕೆಂದು ಭಾರತದ ಅಗ್ರಮಾನ್ಯ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಭಜರಂಗ್ ಪುನಿಯಾ ಸೇರಿದಂತೆ ಹಲವು ಕ್ರೀಡಾಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಹಲವು ವಾರಗಳ ಕಾಲ ಪ್ರತಿಭಟನೆ ನಡೆಸಿದ್ದರು.
ಕ್ರೀಡಾಪಟುಗಳ ಹೋರಾಟಕ್ಕೆ ಕೇಂದ್ರ ಸರ್ಕಾರ ಮಣಿದಿರಲಿಲ್ಲ. ಆತನ ಪರವಾಗಿಯೆ ಬಿಜೆಪಿ ನಾಯಕರು ವಕಾಲತ್ತು ವಹಿಸುತ್ತಿದ್ದರು. ದೇಶಾದ್ಯಂತ ಆಕ್ರೋಶ ತೀವ್ರಗೊಂಡ ನಂತರ ಅಂತಿಮವಾಗಿ ದೆಹಲಿ ಪೊಲೀಸರು ಬ್ರಿಜ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಕೇಂದ್ರ ಸರ್ಕಾರ ಕುಸ್ತಿ ಒಕ್ಕೂಟವನ್ನು ಅಮಾನತುಗೊಳಿಸಿತ್ತು. ವಿಶ್ವ ಕುಸ್ತಿ ಫೆಡರೇಷನ್ ಕೂಡ ಭಾರತದ ಕುಸ್ತಿ ಒಕ್ಕೂಟದ ಮಾನ್ಯತೆಯನ್ನು ಹಿಂಪಡೆದಿತ್ತು.
