ರಾಯ್‌ಬರೇಲಿ ಮತ್ತು ಅಮೇಥಿಗೆ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿದ್ದು, ಅಮೇಥಿಯನ್ನು ಮರಳಿ ಗೆಲ್ಲಲು ಎಲ್ಲಾ ಪ್ರಯತ್ನಗಳನ್ನು ಮಾಡುವ ನಿರೀಕ್ಷೆಯಲ್ಲಿರುವ ರಾಹುಲ್ ಗಾಂಧಿ ಅವರನ್ನು ರಾಯ್‌ಬರೇಲಿಯಿಂದ ಕಾಂಗ್ರೆಸ್‌ನ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.
ಐದು ವರ್ಷಗಳ ಹಿಂದೆ ಬಿಜೆಪಿ ತೆಕ್ಕೆಗೆ ಸೇರಿದ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಅಮೇಥಿಯಲ್ಲಿ ಕಾಂಗ್ರೆಸ್ ಗಾಂಧಿ ಕುಟುಂಬದ ದೀರ್ಘಕಾಲದ ನಿಷ್ಠಾವಂತ ಕೆಎಲ್ ಶರ್ಮಾ ಅವರನ್ನು ಕಣಕ್ಕಿಳಿಸಿದೆ. ಈ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸುವ ನಿರೀಕ್ಷೆಯಿತ್ತು.
Congress releases another list of candidates for the upcoming #LokSabhaElections2024
Rahul Gandhi to contest from Raebareli and Kishori Lal Sharma from Amethi. pic.twitter.com/2w4QQcn9ok
— ANI (@ANI) May 3, 2024
ಮೇ 20 ರಂದು ಐದನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು (ಮೇ 3) ಇಬ್ಬರೂ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ.
ಇದನ್ನು ಓದಿದ್ದೀರಾ? ಅಮೇಥಿಯಲ್ಲಿ ರಾಹುಲ್ ಗಾಂಧಿ vs ಸೃತಿ ಇರಾನಿ?
ಪ್ರಿಯಾಂಕಾ ಗಾಂಧಿ ಅವರಿಗೆ ಟಿಕೆಟ್ ನೀಡದಿರುವುದು ಪಕ್ಷದಲ್ಲಿ ಅಸಮಾಧಾನಕ್ಕೆ ಕಾರಣವಾಗಬಹುದು ಎಂದು ಕಾಂಗ್ರೆಸ್‌ನ ಹಲವು ನಾಯಕರು ಶಂಕಿಸಿದ್ದಾರೆ. ಇನ್ನು 353 ಸ್ಥಾನಗಳಿಗೆ ಮತದಾನ ಬಾಕಿಯಿದ್ದು, ಕಾಂಗ್ರೆಸ್ 330 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.
2019ರಲ್ಲಿ ರಾಹುಲ್ ಗಾಂಧಿ ವಯನಾಡು ಮತ್ತು ಅಮೇಥಿಯಲ್ಲಿ ಸ್ಪರ್ಧಿಸಿದ್ದರು. ವಯನಾಡಿನಲ್ಲಿ ಗೆದ್ದರೆ ಅಮೇಥಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ಪರಾಭವಗೊಂಡಿದ್ದರು. ಅದಕ್ಕೂ ಹಿಂದೆ 2004ರಿಂದ 2019ರವರೆಗೆ ರಾಹುಲ್ ಗಾಂಧಿ ಅಮೇಥಿಯ ಸಂಸದರಾಗಿದ್ದರು.