ಶಿವಮೊಗ್ಗ | ಸಂಸತ್ತಿನಲ್ಲಿ ಕ್ಷೇತ್ರದ ಧ್ವನಿಯಾಗುವೆ, ಅವಕಾಶ ಕೊಡಿ: ಗೀತಾ ಶಿವರಾಜಕುಮಾರ

Date:

Advertisements

ಶಿವಮೊಗ್ಗ ಕ್ಷೇತ್ರದ ಧ್ವನಿಯಾಗಿ ಸಂಸತ್ತಿನಲ್ಲಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವೆ. ಆದ್ದರಿಂದ ಇಲ್ಲಿ ಒಂದು ಅವಕಾಶ ಕಲ್ಪಿಸಿಕೊಡಿ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಆಯನೂರು, ಕುಂಸಿ, ಚೋರಡಿ, ಉಳವಿಯಲ್ಲಿ ಶುಕ್ರವಾರ (ಮೇ.3) ಗೀತಾ ಶಿವರಾಜಕುಮಾರ ಪರ ಆಯೋಜಿಸಿದ್ದ ರೋಡ್ ಷೋನಲ್ಲಿ ಪಾಲ್ಗೊಂಡು ಮಾತನಾಡಿದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಎಲ್ಲಾ ವರ್ಗದವರಿಗೆ ವರದಾನವಾಗಿದೆ. ‘ಗ್ಯಾರಂಟಿʼಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಅವುಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಮತದಾರರು ಸುಳ್ಳು ವದಂತಿಗಳಿಗೆ ಕಿವಿಕೊಡಕೂಡದು ಎಂದರು.

Advertisements

ಕ್ಷೇತ್ರದ ಸಮಸ್ಯೆಗಳು ಗಮನದಲ್ಲಿವೆ. ಇಲ್ಲಿ, ಬಗರ್ ಹುಕುಂ, ಶರಾವತಿ ಸಂತ್ರಸ್ತರ ಸಮಸ್ಯೆ ಸೇರಿ ಅನೇಕ ಸಮಸ್ಯೆಗಳು ಜೀವಂತವಾಗಿವೆ. ಆ ಎಲ್ಲಾ ಸಮಸ್ಯೆಗಳಿಗೆ ಪ್ರಮಾಣಿಕವಾಗಿ ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ‌. ಆದ್ದರಿಂದ, ಇಲ್ಲಿ ಮತ ನೀಡಿ ಆಶೀರ್ವದಿಸಿ ಎಂದು ಕೋರಿದರು.

ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಮಾತನಾಡಿ, ಕೇವಲ ಚುನಾವಣೆಯಲ್ಲಿ ಮತಗಳಿಕೆಯ ರಾಜಕೀಯ ಸ್ವಾರ್ಥದಿಂದ ಐದು ಗ್ಯಾರಂಟಿ ಯೋಜನೆಗಳನ್ನು ನಾವು ಘೋಷಿಸಿಲ್ಲ. ಇಲ್ಲಿ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ಮತ್ತು ದುರಾಡಳಿತದ ಫಲವನ್ನು ಉಣ್ಣುತ್ತಿರುವ ರಾಜ್ಯದ ಜನರ ಸಂಕಷ್ಟಗಳ ಹೊರೆಯನ್ನು ತುಸು ಹಗುರುಗೊಳಿಸುವ ಸದಾಶಯದಿಂದ ಈ ಯೋಜನೆಗಳನ್ನು ಘೋಷಿಸಿದ್ದೆವು. ಅದರಂತೆ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಆದ್ದರಿಂದ ಗೀತ ಶಿವರಾಜಕುಮಾರ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದರು.

ನಟ ದುನಿಯಾ ವಿಜಯ್ ಮಾತನಾಡಿ, ರಾಜ್ಯದ ಕಟ್ಟಕಡೆಯ ಮನುಷ್ಯನಿಗೂ ಪ್ರಾಥಮಿಕ ಅವಶ್ಯಕತೆಗಳಾದ ಅನ್ನ, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗದ ಭಾಗ್ಯ ಲಭಿಸಬೇಕು. ಬಡವ-ಬಲ್ಲಿದರೆಂಬ ಭೇದ ಇಲ್ಲದೆ ಎಲ್ಲರೂ ನಿರ್ಭಯವಾಗಿ ಘನತೆ ಮತ್ತು ಗೌರವದಿಂದ ಬದುಕುವ ವಾತಾವರಣವನ್ನು ನಿರ್ಮಾಣ ಮಾಡಬೇಕು. ಕೃಷಿ ಸಂಪತ್ತು ಬೆಳೆಯಬೇಕು. ಉದ್ಯಮ ಕ್ಷೇತ್ರದ ಪ್ರಗತಿಯಾಗಬೇಕು. ದುಡಿಯುವ ಕೈಗಳಿಗೆ ಉದ್ಯೋಗ ಸಿಗಬೇಕು. ಆದ್ದರಿಂದ, ಕ್ಷೇತ್ರದ ರಕ್ಷಣೆಗೆ ಗೀತಾಕ್ಕಗೆ ಮತ ನೀಡಿ ಆಶೀರ್ವದಿಸಿ ಎಂದರು.

ನಟ ಶಿವರಾಜಕುಮಾರ ಮಾತನಾಡಿ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಒದಗಬೇಕು. ಅದು ಪ್ರಮಾಣಿಕ ಸೇವೆಯಲ್ಲಿ ತೊಡಗಿಸಿಕೊಂಡಾಗ ಮಾತ್ರ ಸಾಧ್ಯ. ಇಲ್ಲಿ ಪತ್ನಿ ಗೀತಾ ಉದ್ದೇಶ ಪರಿಶುದ್ಧವಾಗಿದೆ. ಆದ್ದರಿಂದ, ಗೀತಾಗೆ ನಿಮ್ಮ ಅಮೂಲ್ಯವಾದ ಮತ ನೀಡಿ ಆಶೀರ್ವದಿಸಿ ಎಂದು ಕೋರಿದರು.

ಕಾಂಗ್ರೆಸ್ ಮುಖಂಡ ಶ್ರೀನಿವಾಸ ಕರಿಯಣ್ಣ ಮಾತನಾಡಿ, ಐದು ಗ್ಯಾರಂಟಿ ಯೋಜನೆಗಳನ್ನು ಜಾತಿ-ಧರ್ಮ-ವರ್ಗ ನೋಡದೆ ಜಾರಿಗೊಳಿಸಿದ್ದೇವೆ. ಈ ಯೋಜನೆಗಳು ಅರ್ಹ ಫಲಾನುಭವಿಗಳ ಕೈಸೇರಿವೆ. ಆದ್ದರಿಂದ, ಈ ಋಣ ತೀರಿಸಲು ಗೀತಕ್ಕಗೆ ಮತ ನೀಡಬೇಕು ಎಂದರು.

ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷೆ ಜಿ.ಪಲ್ಲವಿ, ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷ ರವಿಕುಮಾರ್, ಬಗರ್ ಹುಕುಂ ಸಮಿತಿ ಮಾಜಿ ಅಧ್ಯಕ್ಷ ಮಸ್ಕರ್ ರಾಜಪ್ಪ, ತುಪ್ಪೂರು ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣ ಮೂರ್ತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಾಂತವೀರ ನಾಯ್ಕ್, ಕೆಪಿಸಿಸಿ ಸದಸ್ಯ ವೈ.ಎ‍ಚ್.ನಾಗರಾಜ, ಟಿ.ನೇತ್ರಾವತಿ, ಚೋರಡಿ ಗ್ರಾಮದ ಕಾಂಗ್ರೆಸ್ ಮುಖಂಡರಾದ ರಾಜೇಶ್, ಲೋಹಿತ್ ಬದನಗೋಡು ಸೇರಿ ನೂರಾರು ಕಾರ್ಯಕರ್ತರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X