ಪ್ರಜ್ವಲ್ ಲೈಂಗಿಕ ಹಗರಣ | ಭವಾನಿ ರೇವಣ್ಣಗೂ ನೋಟಿಸ್‌ ನೀಡಿದ ಎಸ್‌ಐಟಿ

Date:

Advertisements

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಲೈಂಗಿಕ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಅವರಿಗೆ ಎಸ್‌ಐಟಿ 3ನೇ ನೋಟಿಸ್ ನೀಡಿದೆ. ರೇವಣ್ಣ ಮಾತ್ರವಲ್ಲದೆ, ರೇವಣ್ಣ ಪತ್ನಿ, ಪ್ರಜ್ವಲ್ ತಾಯಿ ಭವಾನಿ ರೇವಣ್ಣಗೂ ನೋಟಿಸ್‌ ನೀಡಿದೆ ಎಂದು ತಿಳಿದುಬಂದಿದೆ.

ಎಸ್‌ಐಟಿ ಜಾರಿ ಮಾಡಿದ್ದ ನೋಟಿಸ್‌ಅನ್ನು ಹೊಳೆನರಸೀಪುರದಲ್ಲಿರುವ ರೇವಣ್ಣ ಮನೆಗೆ ಸ್ಥಳೀಯ ಪೊಲೀಸರು ರವಾನಿಸಿದ್ದಾರೆ. ಗುರುವಾರ ಅಥವಾ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಲೈಂಗಿಕ ಹಗರಣ ಬೆಳಕಿಗೆ ಬಂದ ಬಳಿಕ, ಪ್ರಜ್ವಲ್‌ ದೇಶಬಿಟ್ಟು ಪರಾರಿಯಾಗಿದ್ದಾರೆ. ಅವರಿಗೂ ನೋಟಿಸ್‌ ನೀಡಲಾಗಿದೆ. ಜರ್ಮನಿಗೆ ತೆರಳಿದ್ದ ಆತ ,ಈಗ ದುಬೈನಲ್ಲಿದ್ದಾರೆ ಎಂದು ವರದಿಯಾಗಿದೆ. ವಿಚಾರಣೆಗೆ ಹಾಜರಾಗುವಂತೆ ರೇವಣ್ಣಗೆ ಎರಡು ನೋಟಿಸ್‌ ನೀಡಿದ್ದರೂ, ರೇವಣ್ಣ ವಿಚಾರಣೆಗೆ ಹಾಜರಾಗಿರಲ್ಲಿಲ್ಲ. ಹೀಗಾಗಿ, ಇದೀಗ 3ನೇ ನೋಟಿಸ್‌ ಜಾರಿ ಮಾಡಲಾಗಿದೆ.

Advertisements

ಅಲ್ಲದೆ, ಬುಧವಾರ ರಾತ್ರಿ ಮತ್ತು ಗುರುವಾರ ಬೆಳಗ್ಗೆ ಎಸ್‌ಐಟಿ ಅಧಿಕಾರಿಗಳ ತಂಡ ಬೆಂಗಳೂರು ಮತ್ತು ಹಾಸನ ಜಿಲ್ಲೆಯಲ್ಲಿರುವ ರೇವಣ್ಣ ಕುಟುಂಬದ ನಿವಾಸಗಳು, ಫಾರ್ಮ್‌ ಹೌಸ್‌ಗಳ ಮೇಲೆ ದಾಳಿ ಮಾಡಿ, ಪರಿಶೀಲನೆ ನಡೆಸಿದೆ. ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದೆ.

ಇದೆಲ್ಲದರ ನಡುವೆ, ಸಂತ್ರಸ್ತೆಯನ್ನು ರೇವಣ್ಣ ಅಪಹರಣ ಮಾಡಿದ್ದಾರೆ ಎಂದು ಸಂತ್ರಸ್ತೆಯೊಬ್ಬರ ಮಗ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ರೇವಣ್ಣ ಅವರ ಸಹಚರ ಸತೀಶ್ ಬಾಬಣ್ಣ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲಾ ಪಂಚಾಯತ್‌ನ ಮಾಜಿ ಸದಸ್ಯೆಯೊಬ್ಬರು ತನ್ನನ್ನು ಬೆದರಿಸಿ ಪ್ರಜ್ವಲ್ ರೇವಣ್ಣ ಪದೇ-ಪದೇ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X