ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಮೇ 7ರಂದು ನಡೆಯಲಿರುವ ವಿಚಾರಣೆಯಲ್ಲಿ ನಿರ್ಧರಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತಾ ಅವರಿದ್ದ ಪೀಠ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿತು.
“ಲೋಕಸಭೆ ಚುನಾವಣೆ ನಡೆಯುತ್ತಿರುವ ಕಾರಣದಿಂದ ಮಧ್ಯಂತರ ಜಾಮೀನು ಅರ್ಜಿಯನ್ನು ಪರಿಗಣಿಸಬೇಕಾತ್ತದೆ. ಮೇ 7 ರಂದು ಜಾಮೀನು ಅರ್ಜಿಯನ್ನು ಪರಿಗಣಿಸಲಾಗುವುದು. ಎರಡೂ ಕಡೆಯವರೆಗೆ ಆಶ್ಚರ್ಯವಾಗದಂತೆ ನಾವು ಮುಕ್ತರಾಗಬೇಕು” ಎಂದು ಸುಪ್ರೀಂ ಕೋರ್ಟ್ ಪೀಠ ತಿಳಿಸಿತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಕೀಯ ರಾಡಿಯಲ್ಲಿ ಕಳೆದು ಹೋದದ್ದು ಹೆಣ್ಣಿನ ಘನತೆ ಅಷ್ಟೇ ಅಲ್ಲ, ʼಸಾಮಾಜಿಕ ಶೀಲʼ ಬೀದಿಗೆ ಬಿದ್ದಿದೆ
ದೆಹಲಿ ಅಬಕಾರಿ ನೀತಿ ಹಗರಣ ನೀತಿ ಸಂಬಂಧ ಅರವಿಂದ್ ಕೇಜ್ರಿವಾಲ್ ಅವರು ಮಾ.21ರಂದು ಬಂಧಿತರಾಗಿ ಏ.1 ರಿಂದ ತಿಹಾರಿ ಸೆರೆಮನೆಯಲ್ಲಿದ್ದಾರೆ.
ಕೆಲವು ದಿನಗಳ ಹಿಂದೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಚುನಾವಣಾ ಸಮಯದಲ್ಲೇ ಏಕೆ ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಕ್ರಮವನ್ನು ಪ್ರಶ್ನಿಸಿ ಮೇ.3ರೊಳಗೆ ಉತ್ತರಿಸುವಂತೆ ಸೂಚನೆ ನೀಡಿತ್ತು.
