ಈ ಬಾರಿ ಎನ್‌ಡಿಎ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಖಚಿತವಾಗಿ ಮೋದಿ ಹತಾಶರಾಗಿದ್ದಾರೆ. ಬಾಯಿಗೆ ಬಂದಂತೆ ಸುಳ್ಳುಗಳ ಸುರಿಮಳೆ ಸುರಿಸುತ್ತಿದ್ದಾರೆ. ನಾಚಿಕೆ ಇಲ್ಲದೆ ಸುಳ್ಳು ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದ ಗಡ್ಡದೇವರ ಮಠ ಅವರ ಪರವಾಗಿ ಆಯೋಜಿಸಲಾಗಿದ್ದ ಪ್ರಚಾರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಮಿಕರು, ರೈತರು, ಮಹಿಳೆಯರು, ಶ್ರಮಿಕರು, ಹಿಂದುಳಿದವರು ಸೇರಿ ಎಲ್ಲ ವರ್ಗಗಳಿಗೆ ಆರ್ಥಿಕ ಶಕ್ತಿ ನೀಡುವುದು ಕಾಂಗ್ರೆಸ್ ಮಾತ್ರ. ಇತಿಹಾಸ ತೆಗೆದು ನೋಡಿ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ. ಕಾಂಗ್ರೆಸ್ ಹಿಂದುಳಿದವರ ಮೀಸಲಾತಿ ಕಿತ್ತುಕೊಳ್ಳುತ್ತದೆ ಎನ್ನುವ ಸುಳ್ಳುಗಳನ್ನು ಸೃಷ್ಟಿಸಿ, ಸುಳ್ಳುಗಳಿಂದ ಹಿಂದುಳಿದವರನ್ನು ಬಕ್ರಾ ಮಾಡಬಹುದು ಎಂದುಕೊಂಡು ನರೇಂದ್ರ ಮೋದಿ ಓಡಾಡುತ್ತಿದ್ದಾರೆ ಎಂದರು.
ಮಂಡಲ್ ವರದಿಯನ್ನು ವಿರೋಧಿಸಿ ರಥಯಾತ್ರೆ ನಡೆಸಿ ಅಮಾಯಕ ಹಿಂದುಳಿದ ಸಮುದಾಯಗಳ ಮಕ್ಕಳನ್ನು ಆತ್ಮಹತ್ಯೆಗೆ ಪ್ರಚೋದಿಸಿದ್ದು ನಿಮ್ಮವರೇ ಅಲ್ಲವೇ ಪ್ರಧಾನಿ @narendramodi ಅವರೇ?
ಮಹಿಳೆಯರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಕೊಟ್ಟಾಗ ಅದನ್ನು ವಿರೋಧಿಸಿ ನ್ಯಾಯಾಲಯಕ್ಕೆ ಹೋಗಿದ್ದು @BJP4India ರಾಷ್ಟ್ರೀಯ ಉಪಾಧ್ಯಕ್ಷ ಮತ್ತು ರಾಜ್ಯಸಭಾ… pic.twitter.com/VBtawshmLc
— Siddaramaiah (@siddaramaiah) May 3, 2024
“ರಾಜ್ಯದಲ್ಲಿ ಒಬ್ಬನೇ ಒಬ್ಬ ಕುರುಬರಿಗೂ ಟಿಕೆಟ್ ನೀಡದ ನರೇಂದ್ರ ಮೋದಿ ಕರ್ನಾಟಕಕ್ಕೆ ಬಂದು ಕರಿ ಕಂಬಳಿ ವೇಷ ಹಾಕೊಂಡು ಡ್ರಾಮಾ ಮಾಡ್ತಿದ್ದಾರೆ. ಕುರುಬರು ಈ ಬಾರಿ ದಯಮಾಡಿ ಯಾಮಾರಬೇಡಿ. ಬಿಜೆಪಿಗೆ ಮತ ಹಾಕಿ ಮೋಸ ಹೋಗಬೇಡಿ ಎಂದು ಕರೆ ನೀಡಿದರು.
ಹಾವೇರಿ ಲೋಕಸಭಾ ಕ್ಷೇತ್ರದ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿ ಆಗಿದ್ದಾಗ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿ ಪಡಿಸಿ ಎಂದರೆ ಮೋದಿ ಹೇಳಿದಂತೆ ಡ್ಯಾನ್ಸ್ ಡ್ಯಾನ್ಸ್ ಮಾಡಿಕೊಂಡು ಕಾಲ ಕಳೆದರು. ರಾಜ್ಯಕ್ಕೆ, ಹಾವೇರಿ ಗದಗ ಜಿಲ್ಲೆಗೆ ಮುಖ್ಯಮಂತ್ರಿಯಾಗಿ ನಯಾಪೈಸೆ ಅನುಕೂಲ ಮಾಡದ ಬೊಮ್ಮಾಯಿ ಅವರನ್ನು ಸೋಲಿಸಿ ಮನೆಗೆ ಕಳುಹಿಸಿ ಎಂದು ಕರೆ ನೀಡಿದರು.
ನಮ್ಮ ಗ್ಯಾರಂಟಿ ಯೋಜನೆಗಳು ರಾಜ್ಯದ ಎಲ್ಲಾ ಜಾತಿ, ಎಲ್ಲಾ ಧರ್ಮಗಳ ಬಡವರು ಮತ್ತು ಮಧ್ಯಮ ವರ್ಗದವರಿಗೆ ಆರ್ಥಿಕ ಶಕ್ತಿ ನೀಡುವ ಐದು ಗ್ಯಾರಂಟಿಗಳನ್ನು ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ. ನಾವು ಐದು ಗ್ಯಾರಂಟಿಗಳನ್ನು ಕೊಟ್ಟಂತೆ ರಾಷ್ಟ್ರೀಯ ಕಾಂಗ್ರೆಸ್ 25 ಗ್ಯಾರಂಟಿಗಳನ್ನು ಘೋಷಿಸಿದೆ. ಈ ಗ್ಯಾರಂಟಿ ಪತ್ರಕ್ಕೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆಯವರು ಸಹಿ ಹಾಕಿದ್ದಾರೆ ಎಂದರು.
“ಬಿಜೆಪಿ ಭಾರತೀಯರ ಭಾವನೆಗಳನ್ನು ಕೆರಳಿಸಿ ಬದುಕಿನ ಜತೆ ಚೆಲ್ಲಾಟ ಆಡುತ್ತದೆ. ಕಾಂಗ್ರೆಸ್ ಭಾರತೀಯರ ಭಾವನೆಗಳನ್ನು ಗೌರವಿಸುತ್ತಲೇ ಬದುಕನ್ನು ಮೇಲೆತ್ತುವ ಕೆಲಸ ಮಾಡುತ್ತದೆ” ಎಂದು ಸಿಎಂ ಸಿದ್ದರಾಮಯ್ಯ ಎಂದರು.
